LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಅನುದಾನಕ್ಕೆ ಆಯುಕ್ತರಿಗೆ ಮನವಿ

ವಿಜಯಪುರ: ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳಿಗೆ ಅಗತ್ಯವಿರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಿ, ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರ್ಕಾರ ನೆರವಾಗಬೇಕು ಎಂದು ಕರ್ನಾಟಕ ದಲಿತ ಜನ ಸೇನೆಯ ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಟಿ.ಭರತ್ ಅವರು, ರಾಜ್ಯ ಸರ್ಕಾರ, ೨೦೨೪-೨೫ ನೇ ಸಾಲಿನಲ್ಲಿ ರಾಜ್ಯ ಬಜೆಟ್ ನಲ್ಲಿ ಸುಮಾರು ೨೮೬೦೮ ಕೋಟಿ ಅನುದಾನವನ್ನು ಘೋಷಿಸಿದೆ. ಸಮಾಜ ಕಲ್ಯಾಣ ಇಲಾಖೆಯ ಅಧೀನದ ವಸತಿ ನಿಲಯಗಳಲ್ಲಿ ರಾಜ್ಯಾಧ್ಯಂತ ಬಡ ವಿದ್ಯಾರ್ಥಿಗಳು ವಸತಿ ಸೌಕರ್ಯ ಪಡೆಯುತ್ತಿದ್ದು, ಅವರಿಗೆ ಅಗತ್ಯವಿರುವಷ್ಟು ಅನುದಾನ ಬಿಡುಗಡೆಯಾಗದೆ, ಮೂಲಭೂತ ಸೌಕರ್ಯಗಳ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದಾರೆ.

ಅಧಿಕಾರಿಗಳು ಅನುದಾನದ ಕೊರತೆಯಿಂದ ನಿಸ್ಸಾಹಕರಾಗಿದ್ದಾರೆ. ಇಲಾಖೆಯಿಂದ ಬಿಡುಗಡೆಯಾಗುತ್ತಿದ್ದ ಪ್ರೋತ್ಸಾಹಧನ (ಪ್ರೈಸ್ ಮನಿ) ಹೆಚ್ಚು ಅಂಕಗಳು ಗಳಿಸಿರುವ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇನ ಬಿಡುಗಡೆಯಾಗುತ್ತಿಲ್ಲ ಆದ್ದರಿಂದ ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಸಂಪೂರ್ಣ ಅನುದಾನವನ್ನು ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು ಮುಂದಿನ ಶೈಕ್ಷಣಿಕ ವರ್ಷದ ಆರಂಭದವರೆಗೂ ಯಾವುದೇ ಕಾರಣಕ್ಕೂ ವರ್ಗಾವಣೆ ಮಾಡಬಾರದು. ಒಂದು ವೇಳೆ ವರ್ಗಾವಣೆ ಮಾಡಿದರೆ, ಮಕ್ಕಳ ಕಲಿಕೆಯ ಮೇಲೆ ಪರಿಣಾಮ ಬೀರಲಿದೆ. ಈಗಿರುವ ಶಿಕ್ಷಕರು, ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಅರಿತುಕೊಂಡು ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಸಿದ್ಧತೆ ಮಾಡಿಕೊಂಡಿರುತ್ತಾರೆ.

ಈ ಸಮಯದಲ್ಲಿ ವರ್ಗಾವಣೆಗಾಗಿ ಅರ್ಜಿ ಆಹ್ವಾನಿಸಿರುವುದು ಹಾಸ್ಯಾಸ್ಪದವಾಗಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆ ಮುಕ್ತಾಯವಾಗುವವರೆಗೂ ಯಾರನ್ನೂ ವರ್ಗಾವಣೆ ಮಾಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.ಎಸ್.ಸಿ.ಪಿ, ಟಿ.ಎಸ್.ಪಿ. ಯೋಜನೆಗಳಿಗೆ ಅನುದಾನವನ್ನು ಒದಗಿಸದ ಕಾರಣ, ಗ್ರಾಮೀಣ ಪ್ರದೇಶಗಳಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು