LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಅನ್ ಲಾಕ್ ರಾಘವ" ಟ್ರೇಲರ್ ಅನಾವರಣ

ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ "ಅನ್ ಲಾಕ್ ರಾಘವ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಭಾ.ಮ.ಹರೀಶ್, ವಾಣಿಜ್ಯ ಮಂಡಳಿ ಪದಾಧಿಕಾರಿ ಕುಶಾಲ್, ಭಾ.ಮ.ಗಿರೀಶ್, ನಟ ಪ್ರಥಮ್, ಜಿಮ್ ರವಿ ಸೇರಿದಂತೆ ಅನೇಕ ಗಣ್ಯರು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಮ್ಮ ಚಿತ್ರದ ಶೀರ್ಷಿಕೆಯನ್ನು ಕಳೆದ ಕೆಲವು ದಿನಗಳ ಹಿಂದೆ ಅಶ್ವಿನಿ ಪುನೀತ್ ರಾಜಕುಮಾರ್ ಅವರೆ ಬಿಡುಗಡೆ ಮಾಡಿದ್ದರು. ಇಂದು ನಮ್ಮ ಚಿತ್ರದ ಟ್ರೇಲರ್ ಅವರಿಂದಲೇ ಬಿಡುಗ ಡೆಯಾಗಿದ್ದು ಬಹಳ ಸಂತೋಷವಾಗಿದೆ. ಇಂದು ಬೆಳಗಿನ ಜಾವ ಈ ಟ್ರೇಲರ್ ಸಿದ್ದವಾಯಿತು. ಅಂದುಕೊಂಡ ಸಮಯಕ್ಕೆ ಟ್ರೇಲರ್ ಬಿಡುಗಡೆಯಾಗಲು ಸಹಕಾರ ನೀಡಿದ ನನ್ನ ತಂಡಕ್ಕೆ ಧನ್ಯವಾದ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್(ಲವ್ ಮಾಕ್ಟೇಲ್) ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ಕಥೆ, ಚಿತ್ರಕಥೆ "ರಾಮ ರಾಮ ರೆ" ಖ್ಯಾತಿಯ ಸತ್ಯಪ್ರಕಾಶ್ ಬರೆದಿದ್ದಾರೆ. ಲವಿತ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ "ಅನ್ ಲಾಕ್ ರಾಘವ" ಚಿತ್ರ ಫೆಬ್ರವರಿ 7 ರಂದು ತೆರೆಗೆ ಬರಲಿದೆ ಎಂದು ನಿರ್ದೇಶಕ ದೀಪಕ್ ಮಧುವನಹಳ್ಳಿ ತಿಳಿಸಿದರು.

ಚಿತ್ರದ ಆರಂಭದಿಂದಲೂ ನಮಗೆ  ಪ್ರೋತ್ಸಾಹ ನೀಡುತ್ತಾ ಬಂದಿರುವ ಅಶ್ವಿನಿ ಅವರಿಗೆ ಅನಂತ ಧನ್ಯವಾದ ಎಂದ ನಾಯಕ ಮಿಲಿಂದ್, "ಅನ್ ಲಾಕ್ ರಾಘವ" ಚಿತ್ರ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳಿರುವ ಚಿತ್ರ. ಸಾಧುಕೋಕಿಲ ಅವರು ಸಾಕಷ್ಟು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಆದರೆ ಈ ಚಿತ್ರದಲ್ಲಿ ಮಾಡಿರುವ ಪಾತ್ರ ಈವರೆಗೂ ಯಾವ ಚಿತ್ರದಲ್ಲೂ ಮಾಡಿಲ್ಲ. ನಮ್ಮ ಚಿತ್ರ ಇದೇ ಫೆಬ್ರವರಿ 7ರಂದು ತೆರೆಗೆ ಬರಲಿದೆ. ಕುಟುಂಬ ಸಮೇತ ಬಂದು ಚಿತ್ರ ನೋಡಿ ಎಂದರು. "ಅನ್ ಲಾಕ್ ರಾಘವ" ಚಿತ್ರದಲ್ಲಿ ನನ್ನ ಪಾತ್ರ ಚೆನ್ನಾಗಿದೆ. ಜಾನಕಿ ನನ್ನ ಪಾತ್ರದ ಹೆಸರು ಎಂದರು ನಾಯಕಿ ರೆಚೆಲ್ ಡೇವಿಡ್. "ಉದ್ಘರ್ಷ" ಚಿತ್ರ ಸೇರಿದಂತೆ ಈ ಚಿತ್ರದ ತನಕ ನಾಲ್ಕು ಚಿತ್ರಗಳನ್ನು ನಿರ್ಮಾಣ ಮಾಡಿದ್ದೇನೆ. ಚಿತ್ರತಂಡದ ಸದಸ್ಯರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಇತ್ತೀಚೆಗೆ ಟೆಕ್ನಿಕಲ್ ಶೋ ನಲ್ಲಿ ಚಿತ್ರವನ್ನು ನೋಡಿದಾಗ ತುಂಬಾ ಖುಷಿಯಾಯಿತು ಎಂದರು ನಿರ್ಮಾಪಕ ಮಂಜುನಾಥ್ ದಾಸೇಗೌಡ.

ನನಗೆ ಹದಿನೇಳು ವರ್ಷಗಳಿಂದ ಚಿತ್ರರಂಗದೊಂದಿಗೆ ನಂಟು. ಆದರೆ ನಿರ್ಮಾಪಕನಾಗಿ ಇದು ಮೊದಲ ಚಿತ್ರ. ನಿರ್ದೇಶಕ ದೀಪಕ್ ಅವರು ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಆದರೆ ಇತ್ತೀಚೆಗೆ ಚಿತ್ರವನ್ನು ತೆರೆಯ ಮೇಲೆ ನೋಡಿದಾಗ ಇನ್ನೂ ಇಷ್ಟವಾಯಿತು ಎಂದು ಚಿತ್ರದ ಮತ್ತೊಬ್ಬ ನಿರ್ಮಾಪಕರಾದ ಗಿರೀಶ್ ಕುಮಾರ್ ತಿಳಿಸಿದರು. ಗೀತರಚನೆಕಾರ ಹೃದಯಶಿವ ಹಾಡಿನ ಬಗ್ಗೆ ಮಾತನಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು