LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಅಪಾಯವಿದೆ ಎಚ್ಚರಿಕೆ' ಚಿತ್ರದ "ಬ್ಯಾಚುಲರ್ಸ್ ಬದುಕು" ಸಾಂಗ್ ಬಿಡುಗಡೆ

ಕನ್ನಡ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ "ಅಣ್ಣಯ್ಯ" ಧಾರಾವಾಹಿಯ ಮೂಲಕ ಕನ್ನಡಿಗರ ಮನೆಮನ ತಲುಪಿರುವ ನಟ ವಿಕಾಶ್ ಉತ್ತಯ್ಯ ನಾಯಕನಾಗಿ ನಟಿಸುತ್ತಿರುವ "ಅಪಾಯವಿದೆ ಎಚ್ಚರಿಕೆ" ಚಿತ್ರದ "ಬ್ಯಾಚುಲರ್ಸ್ ಬದುಕು" ಹಾಡು ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು.

ಕನ್ನಡ ಚಿತ್ರರಂಗದ ಬ್ಯಾಚುಲರ್ ನಾಯಕ ನಟರಾದ ತಿಲಕ್, ರಾಕೇಶ್ ಅಡಿಗ, ನವೀನ್ ಶಂಕರ್ ಹಾಗೂ ವಿಕ್ಕಿ ವರುಣ್, ಚಿತ್ರದ ನಿರ್ದೇಶಕರೂ ಆಗಿರುವ ಅಭಿಜಿತ್ ತೀರ್ಥಹಳ್ಳಿ ಬರೆದಿರುವ "ಬ್ಯಾಚುಲರ್ಸ್ ಬದುಕು" ಹಾಡನ್ನು ಲೋಕಾರ್ಪಣೆ ಮಾಡಿದರು. ಹಾಡು ಬಿಡುಗಡೆ ಮಾಡಿದ ಸ್ಟಾರ್ ನಟರು ತಮ್ಮ ಬ್ಯಾಚುಲರ್ ಜೀವನದ ಅನುಭವಗಳನ್ನು ಹೇಳಿಕೊಂಡು, "ಬ್ಯಾಚುಲರ್ಸ್ ಬದುಕು" ಹಾಡು ಹಾಗೂ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಹತ್ತುವರ್ಷಗಳಿಂದ ಕನ್ನಡ ಚಿತ್ರರಂಗದ ವಿವಿಧ ಆಯಾಮಗಳಲ್ಲಿ ಕೆಲಸ ಮಾಡಿರುವ ನನಗೆ ಇದು ಮೊದಲ ನಿರ್ದೇಶನದ ಚಿತ್ರ. ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾದರೂ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳುಳ್ಳ ಚಿತ್ರ. ನಾನು ಕೂಡ ಊರಿನಿಂದ ಬೆಂಗಳೂರಿಗೆ ಬಂದು ಬ್ಯಾಚುಲರ್ ಜೀವನ ಕಳೆದವನು. ಆ ಅನುಭವಗಳೇ ಈ ಹಾಡು ಬರೆಯಲು ಸ್ಪೂರ್ತಿ ಎಂದರು ನಿರ್ದೇಶಕ ಹಾಗೂ ಗೀತರಚನೆಕಾರ ಅಭಿಜಿತ್ ತೀರ್ಥಹಳ್ಳಿ.

ಒಂದು ಹೊಸತಂಡಕ್ಕೆ ಸಪೋರ್ಟ್ ಮಾಡಲು ಬಂದಿರುವ ಕನ್ನಡ ಚಿತ್ರರಂಗದ ಸ್ಟಾರ್ ನಟರಿಗೆ ಧನ್ಯವಾದ ಎಂದು ಮಾತನಾಡಿದ ನಾಯಕ ವಿಕಾಶ್ ಉತ್ತಯ್ಯ, ನಮ್ಮ ಚಿತ್ರದ ಮೋಷನ್ ಪೋಸ್ಟರ್ ನೋಡಿದಾಗ ಇದೊಂದು ಹಾರಾರ್ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಅಂದುಕೊಂಡರು. ಈಗ ಈ ಹಾಡನ್ನು ನೋಡಿದಾಗ ಇದೊಂದು ಪಕ್ಕಾ ಎಂಟರ್ ಟೈನ್ಮೆಂಟ್ ಚಿತ್ರ ಅನಿಸಬಹುದು. ಹೌದು. ಎಲ್ಲಾ ಜಾನರ್ ಗಳನ್ನು ಒಳಗೊಂಡ ಪರಿಶುದ್ಧ ಕೌಟುಂಬಿಕ ಚಿತ್ರವಿದು ಎಂದು ತಿಳಿಸಿದರು.

ಹೊಸತಂಡಕ್ಕೆ ಬೆಂಬಲ ನೀಡಲು ಬಂದಿರುವ ಕನ್ನಡ ಚಿತ್ರರಂಗದ ಪ್ರತಿಭಾವಂತ ಕಲಾವಿದರಿಗೆ ಧನ್ಯವಾದ. ನಿರ್ದೇಶಕ ಅಭಿಜಿತ್ ತೀರ್ಥಹಳ್ಳಿ ಒಂದೊಳ್ಳೆ ಚಿತ್ರ ಮಾಡಿದ್ದಾರೆ. ಗೆಲ್ಲುವ ಭರವಸೆ ಇದೆ. ಚಿತ್ರ ನೋಡಿ.  ಪ್ರೋತ್ಸಾಹ ನೀಡಿ ಎಂದರು ನಿರ್ಮಾಪಕ ಮಂಜುನಾಥ್. ಸಂಗೀತ ನಿರ್ದೇಶಕ ಹಾಗೂ
ಛಾಯಾ ಗ್ರಾಹಕ ಸುನಾದ್ ಗೌತಮ್, ನಾಯಕಿ ರಾಧಾ ಭಗವತಿ, ನಟ ಮಿಥುನ್ ತೀರ್ಥಹಳ್ಳಿ, ದೇವ್ ಮುಂತಾದವರು ಹಾಡು ಬಿಡುಗಡೆ ಸಮಾರಂಭದಲ್ಲಿ ತಮ್ಮ ಅಭಿಪ್ರಾಯ ಹಂಚಿ ಕೊಂಡರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು