LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಅಪಾರ ಮೌಲ್ಯದ ಗಾಂಜಾ, ಗಂಧ ಪತ್ತೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬರೋಬ್ಬರಿ 5 ಕೋಟಿಗೂ ಅಧಿಕ ಮೌಲ್ಯದ ಗಂಧದ ತುಂಡುಗಳು ಹಾಗೂ ಗಾಂಜಾ ಜಪ್ತಿ ಮಾಡಲಾಗಿದೆ. ನಗರದಲ್ಲಿ ಗಂಧದ ದಂಧೆ ಮತ್ತೆ ಶುರುವಾಗಿದ್ದು ರಾಜ್ಯ ಅರಣ್ಯ ಜಾಗೃತದಳ ಸಿಬ್ಬಂದಿ ಗಂಧದ ಮರಗಳ ಕಳವು ಪ್ರಕರಣ ಭೇದಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕೆ.ಆರ್.ಪುರದ ಐಟಿಐ ಫ್ಯಾಕ್ಟರಿ ಆವರಣದ ಗೋಡೌನ್ ಮೇಲೆ ರಾಜ್ಯ ಅರಣ್ಯ ಜಾಗೃತದಳ ದಾಳಿ ನಡೆಸಿದ್ದು ಅಕ್ರಮವಾಗಿ ಸಂಗ್ರಹಿಸಿದ್ದ 2 ಕೋಟಿಗೂ ಹೆಚ್ಚು ಮೌಲ್ಯದ ಗಂಧದ ತುಂಡುಗಳನ್ನು ಪತ್ತೆ ಮಾಡಿ ಸೀಜ್ ಮಾಡಿದ್ದಾರೆ.ಆರೋಪಿಗಳು ನೂರಾರು ಗಂಧದ ತುಂಡುಗಳನ್ನು ಸಂಗ್ರಹಿಸಿ ಅಕ್ರಮ ಸಾಗಾಟಕ್ಕ ಯತ್ನ ನಡೆಸಿದ್ದರು. ಸದ್ಯ ಈಗ ಆರೋಪಿಗಳನ್ನು ಬಂಧಿಸಿ ಗಂಧದ ತುಂಡು ಜಪ್ತಿ ಮಾಡಲಾಗಿದೆ.

ಎರಡು ಟನ್‍ಗೂ ಅಧಿಕ ಗಂಧದ ಮರಗಳನ್ನು ಮರಗಳ್ಳರು ಸಂಗ್ರಹಿಸಿದ್ದು ಹೇಗೆ? ಅಕ್ರಮ ಗಂಧದ ಮರಗಳು ಸರ್ಕಾರದ ಕಾರ್ಖಾನೆ ಸೇರಿದ್ದು ಹೇಗೆ? ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.ಕೆಂಪೇಗೌಡ ಏರ್‌ಪೋರ್ಟನಲ್ಲಿ 3.5 ಕೆಜಿ ಹೈಡ್ರೊಪೋನಿಕ್ ಗಾಂಜಾವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಿದೇಶದಿಂದ ಅಕ್ರಮವಾಗಿ ಕೆಐಎಬಿಗೆ ಗಾಂಜಾ ತಂದಿದ್ದ ಕೇರಳ ಮೂಲದ ಆರೋಪಿ ಶಾಹನ್ಸಾ ಸಾಹುಲ್ ಅಹ್ಮದ್‍ನನ್ನು ವಶಕ್ಕೆ ಪಡೆಯಲಾಗಿದೆ.

ಲಗೇಜ್ ಬ್ಯಾಗ್‍ನಲ್ಲಿ ಅಡಗಿಸಿಕೊಂಡು 3.5 ಕೋಟಿ ಮೌಲ್ಯದ 3.5 ಕೆಜಿ ಹೈಡ್ರೊಪೋನಿಕ್ ಗಾಂಜಾವನ್ನು 6E1056 ಇಂಡಿಗೋ ವಿಮಾನದಲ್ಲಿ ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಆರೋಪಿ ತಂದಿದ್ದ. ಏರ್‌ಪೋರ್ಟ ನಲ್ಲಿ ಪರಿಶೀಲನೆ ವೇಳೆ ಲಗೇಜ್‍ನಲ್ಲಿ ಗಾಂಜಾ ಸಿಕ್ಕಿದೆ. ಕವರ್‍ನಲ್ಲಿ ಪ್ಯಾಕ್ ಮಾಡಿ ಲಗೇಜ್ ಮಧ್ಯೆ ಗಾಂಜಾ ಇರಿಸಲಾಗಿತ್ತು.

ಗಾಂಜಾ ಸಮೇತ ಆರೋಪಿಯನ್ನ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಹೈಡ್ರೋಪೋನಿಕ್ ಗಾಂಜಾಗೆ ಭಾರೀ ಬೆಲೆ ಇದೆ. ಸೂರ್ಯನ ಕಿರಣಗಳು ಬೀಳದೆ ಶೀತ ಪ್ರದೇಶದಲ್ಲಿ ಈ ಗಾಂಜಾವನ್ನ ಬೆಳೆಯಲಾಗುತ್ತೆ. ಫಸ್ಟ್ ಕ್ವಾಲಿಟಿ ಗಾಂಜಾ ಎಂದು ಹೈಡ್ರೋಪೋನಿಕ್ ಗಾಂಜಾ ಮಾರುಕಟ್ಟೆಯಲ್ಲಿ ಹೆಸರು ಪಡೆದಿದೆ. ಶ್ರೀಮಂತರು ಹೆಚ್ಚಾಗಿ ಇದನ್ನು ಖರೀದಿಸುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು