LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಅಭಿಮಾನಿಗಳನ್ನು ಮೋಡಿ ಮಾಡಿದ ನಟಿ ಸಿರಿಯ ಹೊಸ ಲುಕ್

ಕನ್ನಡ ಕಿರುತೆರೆ ನಟಿ ಸಿರಿ ಎಲ್ಲರಿಗೂ ಚಿರಪರಿಚಿತರು. ಈ ಟಿವಿ ಕನ್ನಡ ವಾಹಿನಿಯಲ್ಲಿ ಪ್ರಸಾರಗೊಂಡ ದೀರ್ಘ ಧಾರಾವಾಹಿ ’ಬದುಕು" ವಿನ ನಾಯಕಿಯಾಗಿ ಮನೆಮಾತಾಗಿದ್ದ ಅವರು ಅನಂತರ ’ರಂಗೋಲಿ’ ಧಾರಾವಾಹಿಯ ಮೂಲಕವೂ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಅಲ್ಲದೆ ಈ ಹಿಂದೆ ನಡೆದ ಬಿಗ್ ಬಾಸ್ ೧೦ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡು ಜನಪ್ರಿಯತೆಯನ್ನು ಪಡೆದುಕೊಂಡಿದ್ದರು.

ಬರೋಬ್ಬರಿ ೩೦ ವರ್ಷಗಳಿಂದ ಕನ್ನಡ ಕಿರುತೆರೆಯಲ್ಲಿ ಮಿಂಚಿರುವ ನಟಿಗೀಗ ೩೯ರ ಹರೆಯ. ಧಾರಾವಾಹಿಯ ಮೂಲಕ, ಬಿಗ್ ಬಾಸ್ ಮೂಲಕ, ವಿವಿಧ ಕಾರ್ಯಕ್ರಮಗಳ ಮೂಲಕ ಅವರು ಸಂಪಾದಿಸಿಕೊಂಡಿರುವ ಅಭಿಮಾನಿಗಳು ಸಾಕಷ್ಟಿದ್ದಾರೆ. ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವಿಷಯಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.

ಇದೀಗ ಅವರು ತಮ್ಮ ಇನ್‌ಸ್ಟಾಗ್ರಾಮ್‌ಖಾತೆಯಲ್ಲಿ ಹೊಸ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ಅಲ್ಲದೆ ನಟಿ ಸಿರಿ ಕಳೆದ ತಿಂಗಳಲ್ಲಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು. ಪ್ರಭಾಕರ ಬೋರೇಗೌಡ ಎಂಬವರ ಜೊತೆ ಜೂನ್ ೧೩ರಂದು ಚಿಕ್ಕಬಳ್ಳಾಪುರದ ದೇವಸ್ಥಾನವೊಂದರಲ್ಲಿ ಸರಳವಾಗಿ ವಿವಾಹವಾಗಿದ್ದರು. ಕೆಲವು ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾದ ನಟಿ ನಂತರ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿ ಗಳೊಂದಿಗೆ ತಮ್ಮ ಮದುವೆಯ ಖುಷಿಯನ್ನು ಹಂಚಿಕೊಂ ಡಿದ್ದರು.

ಈಗ ನಟಿ ಅವರ ಇನ್ನೊಂದು ಪೋಸ್ಟ್ ನಿಂದಾಗಿ ಸುದ್ದಿಯಲ್ಲಿದ್ದಾರೆ. ಸಿರಿಯವರ ಹೊಸ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಅವರ ಈ ಹಿಂದಿನ ಫೋಟೋಗಳಿಗೂ ಈ ಫೋಟೋದಲ್ಲಿ ಕಾಣಿಸುತ್ತಿರುವ ರೀತಿಗೂ ತುಂಬಾ ವ್ಯತ್ಯಾಸವಿರುವುದರಿಂದ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇನ್ನು ಫೋಟೋ ನೋಡಿದ ಅಭಿಮಾನಿಗಳು ಬ್ಯೂಟಿ ಕ್ವೀನ್, ಎಷ್ಟು ಕ್ಯೂಟ್ ಆಗಿ ಕಾಣುತ್ತಿದ್ದೀರಿ ಅಂತೆ ಕಾಮೆಂಟ್ಸ್ ಮಾಡಿದ್ದಾರೆ.
ಬಿಗ್ ಬಾಸ್ ಮನೆಯೊಳಗೆ ಹೋದಾಗಲೂ ಸಿರಿ ಮದುವೆ ವಿಚಾರವಾಗಿ ದೊಡ್ಡ ಚರ್ಚೆಯಾಗಿತ್ತು.

ಇದೂವರೆಗೂ ನಟಿ ಸಿರಿ ಯಾಕೆ ಮದುವೆ ಆಗಿಲ್ಲ ಅನ್ನೋ ಮಾತುಗಳು ಕೇಳಿ ಬಂದಿದ್ದವು. ಆದರೆ, ಬಿಗ್‌ಬಾಸ್‌ನಿಂದ ಹೊರ ಬಂದು ಕೆಲವು ದಿನಗ ಳಾಗುತ್ತಿದ್ದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಿರಿ ನಟಿಸಿದ ಬದುಕು ಧಾರಾವಾಹಿಯ ದಿನಗಳಿಂದಲೂ ಪ್ರಭಾಕರ ಬೋರೇಗೌಡ ಪರಿಚಯವಿದ್ದು, ಸ್ನೇಹಿತರಾಗಿದ್ದೆವು.
ಮಧ್ಯದಲ್ಲಿ ಕೆಲವು ದಿನಗಳು ಸಂಪರ್ಕದಲ್ಲಿ ಇರಲಿಲ್ಲ. ಆದರೆ, ಪರಸ್ಪರ ಭೇಟಿಯಾದ ಬಳಿಕ ಮದುವೆ ಆಗುವುದಕ್ಕೆ ನಿರ್ಧಾರ ಮಾಡಿದ್ದೆವು ಎಂದು ಹೇಳಿಕೊಂಡಿದ್ದಾರೆ. ಒಟ್ಟಿನಲ್ಲಿ ವಯಸ್ಸು ಕಳೆದಂತೆ ಕಳೆ ಹೆಚ್ಚಿದವರಂತೆ ಕಾಣುವ ಸಿರಿ ಕನ್ನಡ ಪ್ರೇಕ್ಷಕರ ಮನದಲ್ಲಿ ಈಗಲೂ ಹಾಗೆಯೇ ಇದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು