LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಅಮೆರಿಕಾದ ಸ್ಟ್ಯಾನ್‍ಫೋರ್ಡ್ ವಿವಿಯಿಂದ ವಾರ್ಷಿಕ ಪಟ್ಟಿ ಪ್ರಕಟ ವಿಎಸ್‍ಕೆ ವಿವಿಯ ಮೂವರಿಗೆ ವಿಶ್ವದ ಪ್ರತಿಷ್ಠಿತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

ಬಳ್ಳಾರಿ: ವಿಶ್ವದ ಪ್ರತಿಷ್ಠಿತ ಅಮೆರಿಕದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ ವಾರ್ಷಿಕವಾಗಿ ಪ್ರಕಟಿಸುವ ಜಗತ್ತಿನ ಖ್ಯಾತ ವಿಜ್ಞಾನಿಗಳ ಪಟ್ಟಿಯಲ್ಲಿ ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದಾರೆ.

ವಿವಿಯ ಗಣಿತಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಮತ್ತು ಕೊಪ್ಪಳ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ . ಕೆ ವಿ ಪ್ರಸಾದ್ ಮತ್ತು ಗಣಿತಶಾಸ್ತ್ರ ಮತ್ತು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರೊ . ಹನುಮೇಶ್ ವೈದ್ಯರವರು ಸತತೆ ಎರಡನೆ ಬಾರಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಶ್ವಿನ್ ಪಿ. ಇದೇ ಮೊದಲ ಬಾರಿ ಸ್ಥಾನ ಪಡೆದಿದ್ದಾರೆ. ಒಟ್ಟಾರೆ ವಿವಿಯ ಮೂವರುಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ವಿಶ್ವದರ್ಜೆಯ ಗುಣಮಟ್ಟದ ಸಂಶೋಧನಾ ಲೇಖನಗಳನ್ನು ವೆಬ್ ಆಫ್ ಸೈನ್ಸ್ ಸ್ಕೋಪಸ್, ಗೂಗಲ್ ಸ್ಕಾಲರ್, ಇಂಡೆಕ್ಸ್, ಇಂಪ್ಯಾಕ್ಟ್ ಫ್ಯಾಕ್ಟರ್, ಸೈಟೇಷನ್ ಹೀಗೆ ಹಲವಾರು ಸಂಯೋಜಿತ ಮಾನದಂಡಗಳನ್ನು ಆಧರಿಸಿ ವಿಶ್ವದ ಉತ್ತಮ ಸಂಶೋಧಕರನ್ನು ಗುರುತಿಸಿ ವಾರ್ಷಿಕವಾಗಿ ಸ್ಪ್ಯಾನ್‍ಫೋರ್ಡ್ ವಿಶ್ವವಿದ್ಯಾಲಯವು ಪಟ್ಟಿ ಬಿಡುಗಡೆ ಮಾಡುತ್ತದೆ.

ಗುಣಮಟ್ಟದ ಸಂಶೋಧನಾ ಲೇಖನಗಳನ್ನು ಪ್ರಕಟಿಸಲು ಹೆಸರುವಾಸಿಯಾಗಿರುವ ಎಲ್ಸ್‍ವೀಯರ್ ಸಂಸ್ಥೆ ಸಹಭಾಗಿತ್ವದಲ್ಲಿ ಸ್ಟಾನ್‍ಫೋರ್ಡ್ ವಿಶ್ವವಿದ್ಯಾಲಯವು ಕಳೆದ ವಾರ ಪಟ್ಟಿ ಬಿಡುಗಡೆ ಮಾಡಿದೆ. ಪ್ರಪಂಚದ ಒಟ್ಟು ಸಂಶೋಧನಕಾರರಲ್ಲಿ ಶೇ. 2 ರಷ್ಟು ಖ್ಯಾತನಾಮ ವಿಜ್ಞಾನಿಗಳನ್ನು ಸಂಶೋಧನೆಗೆ ಸಂಬಂಧಿಸಿದ ವಿವಿಧ ವರ್ಗಗಳಲ್ಲಿ ವಿಂಗಡಿಸಿ ಪಟ್ಟಿ ಅಂತಿಮಗೊಳಿಸಿದೆ.

ಮೂವರು ಪ್ರಾಧ್ಯಾಪಕರ ಸಾಧನೆಗೆ ಬಳ್ಳಾರಿ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ .ಮುನಿರಾಜು, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ . ಬಿ ಕೆ ರವಿ, ವಿಶ್ರೀಕೃವಿವಿ ಕುಲಸಚಿವ ರುದ್ರೇಶ್ ಎಸ್ ಎನ್, ಪ್ರಾಧ್ಯಾಪಕರುಗಳು, ಸಿಬ್ಬಂದಿ, ಕುಟುಂಬವರ್ಗ ಅಭಿನಂದಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು