LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಅಮೆರಿಕ ಮಾಜಿ ಅಧ್ಯಕ್ಷ ಜಾನ್‌ ಎಫ್‌ ಕೆನಡಿ ಪ್ರಭಾವದಿಂದಾಗಿ ಎಸ್‌ಎಂ ಕೃಷ್ಣ  ರಾಜಕೀಯ ರಂಗ ಸೇರಿದರು

ಬೆಂಗಳೂರು: ಅಮೆರಿಕ ಮಾಜಿ ಅಧ್ಯಕ್ಷ ಜಾನ್‌ ಎಫ್‌ ಕೆನಡಿ  ಪ್ರಭಾವದಿಂದಾಗಿ ಎಸ್‌ಎಂ ಕೃಷ್ಣ  ರಾಜಕೀಯ ರಂಗ ಸೇರಿದ್ದರು.

ಹೌದು. 1950 ರಂದು ಮೈಸೂರು ಮಹಾರಾಜ ಕಾಲೇಜಿನಲ್ಲಿ ಬಿಎ ಪದವಿ ಪಡೆದ ನಂತರ 1955 ರಲ್ಲಿ ಬೆಂಗಳೂರಿನ ಲಾ ಕಾಲೇಜಿನಲ್ಲಿ ಕೃಷ್ಣ  ಬಿ.ಎಲ್ ಪದವಿ ಪಡೆದರು.

ಆ ಕಾಲದ ಹೆಸರಾಂತ ವಕೀಲರಾದ ಗಣೇಶರಾಯರ ಬಳಿ ಜೂನಿಯರ್ ಆಗಿ ಸೇರಿದ್ದರು. 1958 ರಲ್ಲಿ ಉನ್ನತ ವ್ಯಾಸಂಗಕ್ಕೆ ಕೃಷ್ಣ ಅವರು ಅಮೆರಿಕಗೆ ತೆರಳುತ್ತಾರೆ. ಅಲ್ಲಿನ ಟೆಕ್ಸಾಸ್‌ನ ಡಲ್ಲಾಸ್ ನಗರದ ಸದರನ್ ಮೆಥಾಡಿಸ್ಟ್ ವಿವಿಯಲ್ಲಿ ಎಂ.ಸಿ.ಎಲ್ ಪದವಿ ಪಡೆಯುತ್ತಾರೆ. ನಂತರ ವಾಷಿಂಗ್ಟನ್‌ ವಿಶ್ವವಿದ್ಯಾಲಯದಲ್ಲಿ ಪಿಹೆಚ್‌ಡಿಗೆ ಸೇರಿದರೂ ಅವರು ಪೂರ್ಣಗೊಳಿಸುವುದಿಲ್ಲ.

ಈ ಸಂದರ್ಭದಲ್ಲಿ ಜಾನ್.ಎಫ್.ಕೆನಡಿ ಅವರ ಪ್ರಭಾವಕ್ಕೆ ಸಹ ಕೃಷ್ಣ ಒಳಗಾಗುತ್ತಾರೆ. 1960 ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಯುವ ರಾಜಕಾರಣಿ ಕೆನಡಿ ಸ್ಪರ್ಧಿಸಿದ್ದ ವೇಳೆ ಅವರ ಪರ ಕೃಷ್ಣ ಅವರು ಪ್ರಚಾರ ನಡೆಸಿದ್ದರು. ಚುನಾವಣೆಯಲ್ಲಿ ಜಯಗಳಿಸಿದ ನಂತರ ಕನಡಿ ಅವರು ಎಸ್‌ಎಂ ಕೃಷ್ಣ ಅವರಿಗೆ ಧನ್ಯವಾದ ಪತ್ರ ಸಹ ಬರೆದಿದ್ದರು.

1961 ರಂದು ಕೃಷ್ಣ ಅವರು ಅಮೆರಿಕದಿಂದ ಉನ್ನತ ವ್ಯಾಸಂಗ ಮುಗಿಸಿ ಭಾರತಕ್ಕೆ ಮರಳಿದರು. ಬಂದವರೇ 1962ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯಿಂದ ಸ್ಪರ್ಧಿಸಿ ಮೊದಲ ಚುನಾವಣೆಯಲ್ಲೇ ಗೆಲುವು ಸಾಧಿಸಿದ್ದರು. ಹಲವಾರು ಬಾರಿ ಎಂಸ್‌ಎಂಕೆ ಕೆನಡಿ ತನ್ನ ರಾಜಕೀಯ ಗುರು ಎಂದು ಹೇಳಿಕೊಂಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು