LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಅಮೇರಿಕಾದ ಡಾಲಸ್‍ನಲ್ಲಿ ತಿಮ್ಮನ ಮೊಟ್ಟೆಗಳು ಪ್ರೀಮಿಯರ್ ಶೋ

ಶ್ರೀಕೃಷ್ಣ  ಪ್ರೊಡಕ್ಷನ್ಸ್ ಬ್ಯಾನರಿನ ಅಡಿಯಲ್ಲಿ ಆದರ್ಶ್ ಅಯ್ಯಂಗಾರ್ ಅವರ ನಿರ್ಮಾಣದಲ್ಲಿ ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬಂದ `ತಿಮ್ಮನ ಮೊಟ್ಟೆಗಳು' ಚಿತ್ರ ಅಮೇರಿಕಾದ ಡಾಲಸ್‍ನಲ್ಲಿ ಅದ್ದೂರಿ ಪ್ರೀಮಿಯರ್ ಶೋನೊಂದಿಗೆ ಬಿಡುಗಡೆಯಾಗಿದೆ.

ಮನುಷ್ಯ ಮತ್ತು ಪ್ರಕೃತಿ ನಡುವಿನ ಸಂಬಂಧಗಳ ಬಗ್ಗೆ ಬೆಳಕು ಚೆಲ್ಲುವ ಸುಂದರ ಕೌಟುಂಬಿಕ ಕಥಾನಕವನ್ನ ಹೊಂದಿರುವ ಚಿತ್ರ ಕೊಲ್ಕತ್ತಾ ಅಂತರಾಷ್ಟ್ರಿಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು. ಹಾಗೂ ದೆಹಲಿಯಲ್ಲಿ ನಡೆದ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ ಸ್ಪೆಷಲ್ ಜೂರಿ ಮೆನ್ಸನ್ ಅವಾರ್ಡ್ ಕೂಡ ಪಡೆದುಕೊಂಡಿತ್ತು.ರಕ್ಷಿತ್ ತೀರ್ಥಹಳ್ಳಿಯವರೇ ಬರೆದ `ಕಾಡಿನ ನೆಂಟರು' ಕಥಾ ಸಂಕಲನದ ಆಯ್ದ ಒಂದು ಕಥೆ ತಿಮ್ಮನ ಮೊಟ್ಟೆಗಳು ಸಿನಿಮಾವಾಗಿದೆ. ಪ್ರವೀಣ್ ಎಸ್ ಅವರ ಛಾಯಾಗ್ರಹಣ, ಬಿ ಎಸ್ ಕೆಂಪರಾಜು ಅವರ ಸಂಕಲನ ಹಾಗೂ ಹೇಮಂತ್ ಜೋಯಿಸ್ ಅವರ ಸುಮಧುರ ಸಂಗೀತ ಚಿತ್ರಕ್ಕಿದೆ.

ವಾಸುಕಿ ವೈಭವ್, ಐಶ್ವರ್ಯ ರಂಗರಾಜನ್, ಆದರ್ಶ್ ಅಯ್ಯಂಗಾರ್ ಮತ್ತು ಚಿನ್ಮಯಿ ಚಂದ್ರಶೇಖರ್ ಹಾಡಿರುವ ಹಾಡುಗಳು ಇಂಪಾಗಿದ್ದು ಕಥೆಗೆ ಪೂರಕವಾಗಿವೆ. ಸುಚೇಂದ್ರ ಪ್ರಸಾದ್, ಕೇಶವ್ ಗುತ್ತಳಿಕೆ, ಆಶಿಕಾ ಸೋಮಶೇಕರ್, ಪ್ರಗತಿ ಪ್ರಭು, ಶೃಂಗೇರಿ ರಾಮಣ್ಣ, ರಘು ರಾಮನಕೊಪ್ಪ, ಮಾಸ್ಟರ್ ಹರ್ಷ, ವಿನಯ್ ಕಣಿವೆ ಮುಂತಾದವರ ಅಭಿನಯ ಚಿತ್ರಕ್ಕಿದೆ.
ಡಾಲಸ್ ನಲ್ಲಿರುವ ಕನ್ನಡಿಗರು ಲುಂಗಿ ತೊಟ್ಟು, ಹೆಗಲ ಮೇಲೊಂದು ಟವಲ್ ಇಟ್ಟು, ತಲೆಯ ಮೇಲೊಂದು ಮಂಡಾಳೆಯನ್ನ ಹಾಕಿಕೊಂಡು ಮಲೆನಾಡಿನ ಸಾಮಾನ್ಯ ವ್ಯಕ್ತಿಯಂತೆ ಚಿತ್ರ ವೀಕ್ಷಿಸಲು ಬಂದದ್ದು ಎಲ್ಲರ ಗಮನ ಸೆಳೆಯಿತು.

ಚಿತ್ರ ನೋಡಿದವರೆಲ್ಲಾ ಮಾನವೀಯ ಮೌಲ್ಯಗಳು, ಪ್ರಕೃತಿ ಮತ್ತು ಮನುಷ್ಯ ನಡುವಿನ ಸಂಬಂಧಗಳು, ದೈವಾರಾಧನೆ ಮತ್ತು ಮನುಷ್ಯನ ನಂಬಿಕೆಗಳ ಬಗ್ಗೆ ಚಿತ್ರದಲ್ಲಿ ಮೂಡಿಬಂದಿರುವ ಬಗೆಯ ಬಗ್ಗೆ ಭಾವನಾತ್ಮಕವಾಗಿ ತಮ್ಮ ಅನಿಸಿಕೆ ಹಂಚಿಕೊಂಡರು.ಚಿತ್ರದ ಕಥೆಯಲ್ಲಿ ಕಾಳಿಂಗ ಹಾವಿನ ಪಾತ್ರ ಬಹುಮುಖ್ಯವಾಗಿದ್ದು ಚಿತ್ರದ ಓಟಕ್ಕೆ ಸಹಕಾರಿಯಾಗಿದೆ. ಸದ್ಯದಲ್ಲೇ ಕರ್ನಾಟಕದಲ್ಲಿ ಚಿತ್ರ ಬಿಡುಗಡೆಯಾಗುವುದೆಂದು ಚಿತ್ರತಂಡ ಹೇಳಿಕೊಂಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು