LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಅರ್ಜುನ್ ಜನ್ಯ, ಜಸ್ಕರನ್ ಗಾನ ಸುಧೆ

ಕೊಳ್ಳೇಗಾಲ: ಎಚ್. ಕೃಷ್ಣಸ್ವಾಮಿ ಮೆಮೋರಿಯಲ್ ಟ್ರಸ್ಟ್ ಹಾಗೂ ರೋಟರಿ ಮಿಡ್ ಟೌನ್ ವತಿಯಿಂದ ಕೊಳ್ಳೇಗಾಲದಲ್ಲಿ ಹಮ್ಮಿಕೊಂಡಿದ್ದ `ನಮ್ಮೂರ ಕನ್ನಡ ಹಬ್ಬ’ ಅರ್ಜುನ್ ಜನ್ಯ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರೇಕ್ಷಕರು ಅರ್ಜುನ್ ಜನ್ಯ ಮತ್ತು ಸಂಗಡಿಗರ ಸಂಗೀತಕ್ಕೆ ಪಿಧಾ ಆಗುವ ಮೂಲಕ ತಲೆದೂಗಿದ ಘಟನೆಗೆ ಸರ್ಕಾರಿ ಎಂ ಜಿಎಸ್‍ವಿ ಕಾಲೇಜು ಮೈಧಾನ ಸಾಕ್ಷಿಯಾಯಿತು.

ಎಚ್ ಕೆ ಟ್ರಸ್ಟ್ , ರೋಟರಿ ಮಿಡ್ ಟೌನ್ ಅಯೋಜಿಸಿದ್ದ ಕನ್ನಡ ಹಬ್ಬ ಕಾರ್ಯಕ್ರಮದ ಅಂಗವಾಗಿ ಶನಿವಾರ ರಾತ್ರಿ ಅರ್ಜುನ್ ಜನ್ಯ ಮತ್ತು ಸಂಗಡಿಗರಿಂದ ಸಂಗೀತ ಸಂಜೆ, ಮ್ಯೂಜಿಕಲ್ ರಸಮಂಜರಿ ಅಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕೊನೆ ತನಕ ಹಾಜರಿದ್ದ ಪ್ರೇಕ್ಷಕರು, ಕನ್ನಡ ಸಿರಿ ರಸಿಕರು ಖ್ಯಾತ ಸಂಗೀತ ಹಿನ್ನಲೆ ಗಾಯಕ ಅರ್ಜುನ್ ಜನ್ಯ , ಅನುರಾಧ ಭಟ್, ಇಂದು ನಾಗರಾಜು, ಜಸ್ಕರನ್ ಸಿಂಗ್, ಸುನೀಲ್ ಗುಜಗೊಂಡ, ವ್ಯಾಸರಾಜ್ ಸೇರಿದಂತೆ ಇನ್ನಿತರ ಗಾಯಕರ ಗಾನ ಸೂಧೆಗೆ ಪಿಧಾ ಆಗಿ ಕುಣಿದು ಕುಪ್ಪಳಿಸಿ ರಂಜಿಸಿದರು, ಕಾರ್ಯಕ್ರಮಕ್ಕೆ ಆಗಮಿಸಲು ಪ್ರೇಕ್ಷಕರಿಗೆ ಆಯೋಜಕರು ಪಾಸ್ ಗಳ ವ್ಯವಸ್ಥೆ ಕಲ್ಪಿಸಿದ್ಜರೂ ಸಹಾ ನಿರೀಕ್ಷೆಗೂ ಮೀರಿದ ಪ್ರೇಕ್ಷಕರು ಆಗಮಿಸಿದ್ದರಿಂದ ಪಾಸ್ ಗಳಿದ್ದರೂ ಸೀಟ್ ಸಿಗದೆ ನೂರಾರು ಮಂದಿ ನಿಂತು ಕೊಂಡೆ ಕಾರ್ಯಕ್ರಮ ವೀಕ್ಷಿಸಿದರು. ಜನರ ನಿಯಂತ್ರಣವೇ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು.

ಒಟ್ಟಾರೆ ಸಂಗೀತ ರಸ ಸಂಜೆಯಲ್ಲಿ ಪಾಲ್ಗೊಂಡಿದ್ದ ಪ್ರೇಕ್ಷಕರು ಹಲವು ಗಂಟೆಗಳ ಕಾದು ಕುಳಿತು ಸಂಭ್ರಮಿಸಿದರು. ಈ ವೇಳೆ ಪೊಲೀಸ್ ಇಲಾಖೆಯ ಮಹೇಶ್ ಸೇರಿದಂತೆ ಅನೇಕರನ್ನು ಕಾರ್ಯಕ್ರಮದಲ್ಲಿ ಗೌರವಿಸುವ ಮೂಲಕ ಆರಕ್ಷಕರಿಗೆ ಗೌರವ ಸಲ್ಲಿಸಲಾಯಿತು. ಸಾಲೂರು ಮಠದ ಪೂಜ್ಯ ಡಾ.ಶಾಂತ ಮಲ್ಲಿಕಾರ್ಜುನ ಸ್ವಾಮಿಜಿ, ಎಚ್‍ಕೆ. ಟ್ರಸ್ಟ್‍ನ ಅಧ್ಯಕ್ಷರಾದ ಪ್ರೇಮಲತಾ ಕೃಷ್ಣಸ್ವಾಮಿ, ಡಿವೈಎಸ್ಪಿ ಎಚ್‍ಕೆ. ಮಹಾನಂದ್ ರೋಟರಿ ಮಿಡ್ ಟೌನ್ ಅಧ್ಯಕ್ಷರಾದ ಎಸ್. ಲೋಕೇಶ್, ಕಾರ್ಯದರ್ಶಿ ಎಂ. ಪ್ರಕಾಶ್, ಶಿವಾನಂದ್, ಪ್ರವೀಣ್ ಕುಮಾರ್, ನಟರಾಜ್, ಮಾಜಿ ಶಾಸಕ ಜಿಎನ್ ನಂಜುಂಡಸ್ವಾಮಿ, ನಗರಸಭೆ ಅಧ್ಯಕ್ಷೆ ರೇಖಾ ರಮೇಶ್, ಉಪಾಧ್ಯಕ್ಷ ಎಪಿ ಶಂಕರ್, ಮಾಜಿ ಉಪಾಧ್ಯಕ್ಷ ಜೆ. ಹರ್ಷ ಇನ್ನಿತರರು ಪಾಲ್ಗೊಂಡಿದ್ದರು.

ಇದಕ್ಕೂ ಮುನ್ನ ಮಾತನಾಡಿದ ಶಾಸಕ ಎ.ಆರ್. ಕೃಷ್ಣಮೂರ್ತಿ, ಇದೊಂದು ಅರ್ಥಪೂರ್ಣ ಕನ್ನಡದ ಕಾರ್ಯಕ್ರಮ ಎಂದರಲ್ಲದೆ ರಾಜ್ಯೋತ್ಸವ ಆಚರಣೆ ಹಿನ್ನಲೆ ಸಂಗೀತ ಕಾರ್ಯಕ್ರಮದಲ್ಲಿ ಅರ್ಜುನ್ ಜನ್ಯ ತಂಡದ ಹಾಡಿಗೆ ಕೊಳ್ಳೇಗಾಲ ಜನ ಕುಣಿದು, ಕುಪ್ಪಳಿಸಿ ಆನಂದಿಸಿದ್ದಾರೆ. ಎಚ್.ಕೆ. ಮಹಾನಂದ್, ಪ್ರವೀಣ್, ಹರ್ಷ ಸ್ನೇಹಿತರಿಗೆ ಶ್ರಮದಿಂದ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು