LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Feature Article

ಅಲ್ಲು ಅರ್ಜುನ್ ಪರ ಬ್ಯಾಟ್ ಬೀಸಿದ ಪವನ್ ಕಲ್ಯಾಣ್

ಹೈದರಾಬಾದ್​ನ ಸಂಧ್ಯಾ ಥಿಯೇಟರ್​ನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸೆನ್ಸೇಷನ್ ಸೃಷ್ಟಿಸಿದೆ. ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ವೀಕ್ಷಿಸಲು ತೆರಳಿದ ಸಂದರ್ಭದಲ್ಲೇ ಈ ಘಟನೆ ಸಂಭವಿಸಿದ್ದರಿಂದ ಅವರನ್ನು ಆರೋಪಿಯನ್ನಾಗಿ ಮಾಡಲಾಗಿದೆ. ಅಲ್ಲು ಅರ್ಜುನ್ ಅವರನ್ನು ಬಂಧನ ಕೂಡ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಕೋಲಿನಲ್ಲಿ ಹೋಗೋದಕ್ಕೆ ಕೊಡಲಿ ತೆಗೆದುಕೊಂಡರು’ ಎಂಬ ಅಭಿಪ್ರಾಯವನ್ನು ಅವರು ಹೊರಹಾಕಿದ್ದಾರೆ.

‘ಘಟನೆಯ ಹಿಂದೆ ಏನಾಗಿದೆ ಎಂಬ ಸಂಪೂರ್ಣ ಮಾಹಿತಿ ನನಗೆ ತಿಳಿದಿಲ್ಲ. ಕಾನೂನು ಎಲ್ಲರಿಗೂ ಒಂದೇ. ನಾನು ಈ ರೀತಿಯ ಘಟನೆಗಳಲ್ಲಿ ಪೊಲೀಸರನ್ನು ದೂರುವುದಿಲ್ಲ. ಅವರು ಸುರಕ್ಷತೆಗೆ ಮೊದಲ ಆದ್ಯತೆ ನೀಡುತ್ತಾರೆ. ಥಿಯೇಟರ್ ಸಿಬ್ಬಂದಿಯಾದರೂ ಅಲ್ಲು ಅರ್ಜುನ್‌ಗೆ ಪರಿಸ್ಥಿತಿಯ ಬಗ್ಗೆ ಮೊದಲೇ ತಿಳಿಸಬೇಕಿತ್ತು. ಥಿಯೇಟರ್​ನಲ್ಲಿ ಕುಳಿತ ಬಳಿಕ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿ ಅಲ್ಲು ಅರ್ಜುನ್ ಅವರನ್ನು ಕರೆದುಕೊಂಡು ಹೋಗಬಹುದಿತ್ತು’ ಎಂದಿದ್ದಾರೆ ಪವನ್ ಕಲ್ಯಾಣ್.

‘ಅಲ್ಲು ಅರ್ಜುನ್ ಕಡೆಯವರು ಸಂತ್ರಸ್ತ ಕುಟುಂಬವನ್ನು ಆದಷ್ಟು ಬೇಗ ಭೇಟಿ ಮಾಡಿದರೆ ಉತ್ತಮ. ರೇವತಿ ಸಾವು ನನಗೆ ಶಾಕ್ ಎನಿಸಿದೆ. ಈ ವಿಚಾರದಲ್ಲಿ ಮಾನವೀಯತೆಯ ಕೊರತೆ ಎದ್ದು ಕಾಣಿಸಿದೆ. ಎಲ್ಲರೂ ರೇವತಿಯ ಮನೆಗೆ ಹೋಗಿ ವಿಷಾದ ವ್ಯಕ್ತಪಡಿಸಿ, ಧೈರ್ಯ ತುಂಬಬೇಕಿತ್ತು’ ಎಂದು ಪವನ್ ಕಲ್ಯಾಣ್ ಅಭಿಪ್ರಾಯಪಟ್ಟಿದ್ದಾರೆ.

‘ಸಿನಿಮಾ ಎಂಬುದು ಎಲ್ಲರೂ ಸೇರಿ ಮಾಡುವ ಪ್ರಯತ್ನ. ಇಲ್ಲಿ ಅಲ್ಲು ಅರ್ಜುನ್ ಅವರನ್ನು ಮಾತ್ರ ಅಪರಾಧಿಯನ್ನಾಗಿ ಮಾಡುವುದು ಸರಿಯಲ್ಲ. ಘಟನೆಯಿಂದ ತೀವ್ರ ನೋವಾಗಿದೆ. ಸಿಎಂ ರೇವಂತ್ ರೆಡ್ಡಿ ಪ್ರತಿಕ್ರಿಯೆ ಸೇರಿದಂತೆ ಕಾಲ್ತುಳಿತದ ನಂತರ ತೆಗೆದುಕೊಂಡ ನಿರ್ಧಾರಗಳು ಆಯಾ ಸಂದರ್ಭಕ್ಕೆ ಅನುಗುಣವಾಗಿದೆ’ ಎಂದು ಪವನ್ ಕಲ್ಯಾಣ್ ಅಭಿಪ್ರಾಯಪಟ್ಟಿದ್ದಾರೆ.

‘ಚಿರಂಜೀವಿ ಕೂಡ ಅಭಿಮಾನಿಗಳನ್ನು ಭೇಟಿ ಮಾಡಲು ಥಿಯೇಟರ್​ಗೆ ಭೇಟಿ ನೀಡುತ್ತಿದ್ದರು. ಆದರೆ, ಕೆಲವೊಮ್ಮೆ ಅಭಿಮಾನಿಗಳ ಕಣ್ತಪ್ಪಿಸಲು ಅವರು ವೇಷ ಬದಲಿಸಿ ಹೋಗುತ್ತಿದ್ದರು. ನಮ್ಮ ಸಿನಿಮಾ ಇಂಡಸ್ಟ್ರಿ ಈಗ ನಡೆದ ಘಟನೆಯಿಂದ ಕಲಿಯಬೇಕಿದೆ’ ಎಂದು ಅವರು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು