LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಅವಿಶ್ವಾಸ ನಿರ್ಣಯ ಸಭೆಯಲ್ಲಿ ಗೆದ್ದ ಬೂದಿಗೆರೆ ಅಧ್ಯಕ್ಷೆ ವರಲಕ್ಷ್ಮೀ, ಒಂದು ವರ್ಷ ಅಧಿಕಾರದಲ್ಲಿ ಮುಂದುವರಿಕೆ

ದೇವನಹಳ್ಳಿ: ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಬೂದಿಗೆರೆ ಗ್ರಾಮ ಪಂಚಾಯಿಯಲ್ಲಿ ಇದೇ ತಿಂಗಳು 19 ರಂದು ಅಧ್ಯಕ್ಷ ಸ್ಥಾನಕ್ಕೆ ಅವಿಶ್ವಾಸ ನಿರ್ಣಯ ಸಭೆ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ ಸಮ್ಮುಖದಲ್ಲಿ ನಡೆಯಿತು. ಬೂದಿಗೆರೆ ಗ್ರಾಮ ಪಂಚಾಯಿತಿಯ ಕಾಂಗ್ರೆಸ್ ಬೆಂಬಲಿತ ಸದಸ್ಯರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವರಲಕ್ಷ್ಮೀ ವಿರುದ್ಧ ಅವಿಶ್ವಾಸಕ್ಕೆ ಉಪವಿಭಾಗಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ 19 ರಂದು ಅವಿಶ್ವಾಸ ನಿರ್ಣಯ ಸಭೆ ನಡೆಯಿತು.

ಅವಿಶ್ವಾಸ ನಿರ್ಣಯ ಸಭೆಯಲ್ಲಿ ಅಧ್ಯಕ್ಷೆವರಲಕ್ಷ್ಮೀ ವಿರುದ್ಧ 13 ಕಾಂಗ್ರೆಸ್ ಬೆಂಬಲಿತಸದಸ್ಯರು, 6 ಜೆಡಿಎಸ್ ಬೆಂಬಲಿತ ಸದಸ್ಯರು ಗೊತ್ತುವಳಿ ಮಂಡನೆ ಮಾಡಿದರು. ಇನ್ನೂ
ಉಳಿದ ಒಬ್ಬ ಕಾಂಗ್ರೆಸ್ ಬೆಂಬಲಿತ ಸದಸ್ಯೆರಿಜ್ವಾನ್ ನಜೀರ್ ಗೈರಾದ ಕಾರಣ ಅವಿಶ್ವಾಸ ನಿರ್ಣಯ ಸಭೆ ವಿಸರ್ಜನೆಗೊಂಡು ಅಧ್ಯಕ್ಷೆವರಲಕ್ಷ್ಮೀ ಅಧಿಕಾರದಲ್ಲಿ ಮುಂದುವರಿಯು ವಂತೆ ಆಯಿತು. ಅವಿಶ್ವಾಸಕ್ಕೆ ಮೂರನೇ ಎರಡರಷ್ಟು ಸದಸ್ಯ ಬಲ ಬೇಕಾಗಿತ್ತು ಆದರೆ ಮೂರನೇ ಎರಡರಷ್ಟು ಬಲ ಬಾರದ ಕಾರಣ ಅವಿಶ್ವಾಸ ನಿರ್ಣಯ ಸಭೆಯಲ್ಲಿ ಅಧ್ಯಕ್ಷೆ ವರಲಕ್ಷ್ಮೀ ಗೆದ್ದರು.

ಬೂದಿಗೆರೆ ಗ್ರಾಮದ ಪಂಚಾಯಿತಿಯಲ್ಲಿ ಮೊದಲ ಅವಧಿಯಲ್ಲಿ ಎಸ್ಸಿ ಮಹಿಳೆ ಮೀಸಲಾತಿಯಲ್ಲಿ ಅಧ್ಯಕ್ಷೆಯಾಗಿ ಎರಡೂವರೆ ವರ್ಷ ಅಧಿಕಾರದಲ್ಲಿದ್ದರು, ಎರಡನೇ ಅವಧಿಗೆ ಎಸ್ಟಿ ಮಹಿಳೆ ಮೀಸಲಾತಿ ಹಿನ್ನೆಲೆಯಲ್ಲಿ ವರಲಕ್ಷ್ಮೀ ಅಧ್ಯಕ್ಷೆ ಆಗಿ ಅವಿರೋಧವಾಗಿ ಆಯ್ಕೆ ಆಗಿದ್ದರು. ವರಲಕ್ಷ್ಮಿ ಬೂದಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಸ್ಟಿ ಮಹಿಳೆಯಾಗಿ ಚುನಾವಣೆಯಲ್ಲಿ ಗೆದ್ದವರು ಒಬ್ಬರೇ ಇದ್ದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದರು.

ಅಧ್ಯಕ್ಷೆ ವರಲಕ್ಷ್ಮೀ ವಿರುದ್ಧ ಅವಿಶ್ವಾಸಕ್ಕೆ ಕಾರಣ: ಬೂದಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ನಡೆದು 20 ವರ್ಷ ಆಗಿತ್ತು. ವರಲಕ್ಷ್ಮಿ ಅಧ್ಯಕ್ಷೆ ಇತ್ತಿಚಿಗೆ ವಿರೋಧದ ನಡುವೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿಗಾಗಿ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ನಡೆಸಿದರು. ಈ ಕಾರಣಕ್ಕೆ ಕಾಂಗ್ರೆಸ್ ಬೆಂಬಲಿತ 13 ಸದಸ್ಯರು
ಅವಿಶ್ವಾಸ ನಿರ್ಣಯ ಸಭೆ ನಡೆಸಲು ನಿರ್ಧಾರಕೈಗೊಂಡರು. ಒಟ್ಟಾರೆ ಬೂದಿಗೆರೆ ಗ್ರಾಮ ಪಂಚಾಯಿತಿಯಲ್ಲಿ ಇನ್ನೂ ಒಂದು ವರ್ಷ ಅಧ್ಯಕ್ಷ ಸ್ಥಾನದಲ್ಲಿ ವರಲಕ್ಷ್ಮೀ ಗಂಗನರಸಯ್ಯ ಮುಂದುವರಿಯಲ್ಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು