LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಅಸಮಾಧಾನದ ಹೊಗೆ? ಸರ್ಕಾರದ ನಡೆ ಬಗ್ಗೆ `ಕೈ' ಶಾಸಕರ ಸಮಾಲೋಚನೆ

ಬೆಂಗಳೂರು: ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ನಿರ್ಧಾರಗಳ ಬಗ್ಗೆ ಕಾಂಗ್ರೆಸ್ ಪಕ್ಷದ ಶಾಸಕರೇ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇದೇ ಮೊದಲ ಬಾರಿಗೆ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕರು ನಿನ್ನೆ ಖಾಸಗಿ ಹೋಟೆಲೊಂದರಲ್ಲಿ ಸೇರಿ ಪರಸ್ಪರ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ವರ್ಗಾವಣೆ ಸಂಬಂಧ ಸರ್ಕಾರ ಕೈಗೊಂಡಿರುವ ನಿರ್ಧಾರಗಳಿಂದಾಗಿ ತಮ್ಮ ಕೆಲಸಗಳು ಆಗುತ್ತಿಲ್ಲ ಎಂಬ ಬಗ್ಗೆ ಶಾಸಕರು ತಮ್ಮ ತಮ್ಮ ಸಮಸ್ಯೆಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡಿದ್ದು, ಇಂದು ಸಂಜೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖಂಡರ ಗಮನಕ್ಕೆ ತರಲಿದ್ದಾರೆ ಎನ್ನಲಾಗಿದೆ.

ಸಬ್‍ರಿಜಿಸ್ಟ್ರಾರ್, ಪಿಡಿಒಗಳ ವರ್ಗಾವಣೆ ಅನುದಾನಗಳ ಸೂಕ್ತ ಬಿಡುಗಡೆ ಬಗ್ಗೆಯೂ ಪಕ್ಷದಪ್ರಮುಖರ ಗಮನಕ್ಕೆ ತರಲಿದ್ದಾರೆ ಎಂದು ಹೇಳಲಾಗುತ್ತಿದೆ. ಔತಣಕೂಟದ ನೆಪದಲ್ಲಿ ಈ ಶಾಸಕರುಖಾಸಗಿ ಹೋಟೆಲ್‍ನಲ್ಲಿ ಸಭೆ ಸೇರಿದ್ದರು ಎನ್ನಲಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತ ಶಾಸಕರು ಎನ್ನಲಾದ ಮಂಡ್ಯ ಭಾಗದ ಶಾಸಕರೋರ್ವರು ಈ ಔತಣ ಕೂಟವನ್ನು ಏರ್ಪಡಿಸಿದ್ದರು ಎಂದು ತಿಳಿದುಬಂದಿದೆ. ಈ ಶಾಸಕರ ಸಮಾಲೋಚನಾ ಸಭೆಯ ನಿರ್ಧಾರಗಳು ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು