LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

`ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ'

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯ ವಾಗಿದೆ. ಜನ ಸಾಮನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ನೋಡಿದಾಗ ಅದರ ವಿರುದ್ದ ಸಮರ ಸಾರಬೇಕಾಗಿರುವ ಭಾರತೀಯ ಜನತಾ ಪಕ್ಷ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರ ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ.

ಇಡೀ ದೇಶಕ್ಕೆ ಸಮರ್ಥ ಆಡಳಿತ ಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಈ ಪಕ್ಚ ಮತ್ತು ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲರನ್ನೂ ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನೂ ಒಬ್ಬ.

ಎರಡೂ ಕಡೆ ತಾಳ್ಮೆ ಯನ್ನು ಕಳೆದುಕೊಳ್ಳದೆ ಕರ್ನಾಟಕ ಬಿಜೆಪಿಯ ಸರ್ವೋಚ್ಚ ನಾಯಕ ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಹಾಗೂ ಇತರ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆಯ ಮೂಲಕ ಇದನ್ನು ಬಗೆಹರಿಸಬೇಕು.ಇಲ್ಲದಿದ್ದರೆ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಬೇಕು.ವರಿಷ್ಠರು ಕೂಡಲೇ ಕರ್ನಾಟಕದ ಪಕ್ಷದ ಬೆಳವಣಿಗೆಯ ಬಗ್ಗೆ ಗಮನವನ್ನು ಹರಿಸಿ, ಎಲ್ಲ ಪ್ರಮುಖರ ಜೊತೆಗೆ ಚರ್ಚೆ ಮಾಡಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು