LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಆಪರೇಷನ್ ಕಮಲ ಪ್ರಕರಣ ಹೇಳಿಕೆಗಳ ಗೊಂದಲ ಕೈ ಶಾಸಕನ ಆರೋಪ ನಿರಾಕರಿಸಿದ ಸ್ವಪಕ್ಷೀಯರು

ಬೆಂಗಳೂರು: ಬಿಜೆಪಿ ವತಿಯಿಂದ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಆಪರೇಷನ್ ಕಮಲ ನಡೆಯುತ್ತಿದೆ ಎಂದು ಕೇಳಿಬರುತ್ತಿರುವ ಆರೋಪಗಳ ನಡುವೆಯೇ ತಮ್ಮ ಪಕ್ಷದ ಶಾಸಕನ ಹೇಳಿಕೆಯನ್ನು ಸ್ವಪಕ್ಷೀಯ ಶಾಸಕರು ನಿರಾಕರಿಸಿದ್ದಾರೆ.ಇತ್ತೀಚೆಗೆ ಸ್ವತಃ ಮುಖ್ಯಮಂತ್ರಿಯವರೇ ತಮ್ಮ ಸರ್ಕಾರವನ್ನು ಉರುಳಿಸಲು ಬಿಜೆಪಿ ವತಿಯಿಂದ ಆಪರೇಷನ್ ಕಮಲ ಕಾರ್ಯಾಚರಣೆ ನಡೆದಿದ್ದು ಶಾಸಕರಿಗೆ 50 ಕೋಟಿ ರೂ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದರು..

ಇದರ ಬೆನ್ನಲ್ಲೇ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಶಾಸಕ ರವಿಕುಮಾರ ಗಣಿಗ ಅವರು ಬಿಜೆಪಿ ಆಪರೇಷನ್ ಕಮಲ ಮಾಡಲು ಮುಂದಾಗಿದ್ದು, ತಮ್ಮ ಪಕ್ಷದ ಇಬ್ಬರು ಶಾಸಕರನ್ನು ಉಲ್ಲೇಖಿಸಿ ಅವರಿಗೆ 100 ಕೋಟಿ ರೂಪಾಯಿ ಆಮಿಷ ಒಡ್ಡಲಾಗಿದೆ ಎಂದು ದೂರಿದ್ದಾರೆ.50 ಕೋಟಿ ರೂ ಬದಲಿಗೆ ಪ್ರತಿಯೊಬ್ಬ ಶಾಸಕರಿಗೂ 100 ಕೋಟಿ ರೂಪಾಯಿ ನೀಡುವ ಆಸೆ ಆಮಿಷ ಒಡ್ಡಲಾಗುತ್ತಿದೆ. ಇದಕ್ಕೆ ಬೇಕಾದ ದಾಖಲೆ ಪುರಾವೆಗಳನ್ನು ಶೀಘ್ರದಲ್ಲೇ ಒದಗಿಸುವುದಾಗಿ ತಿಳಿಸಿದ್ದರಲ್ಲದೇ, ಯಾರು ಯಾರನ್ನು ಯಾವ ಹೋಟೆಲ್ ಏರ್‍ಪೋರ್ಟ್ ಮತ್ತಿತರರ ಸ್ಥಳಗಳಲ್ಲಿ ಭೇಟಿಯಾಗಿದ್ದರ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿದ್ದಾರೆ.

ತಮ್ಮ ಪಕ್ಷದ ಶಾಸಕರಾದ ಚಿಕ್ಕಮಂಗಳೂರಿನ ತಮ್ಮಯ್ಯ ಹಾಗೂ ಕಿತ್ತೂರು ಕ್ಷೇತ್ರದ ಶಾಸಕ ಬಾಬಾ ಸಾಹೇಬ್ ಪಾಟೀಲ್ ರವರ ಹೆಸರನ್ನು ಉಲ್ಲೇಖಿಸಿ ರವಿಕುಮಾರ ಮಾತನಾಡಿದರು.ಆದರೆ ತಮ್ಮ ಪಕ್ಷದ ಶಾಸಕ ರವಿಕುಮಾರ ಗಣಿಗ ಮಾಡಿರುವ ಆರೋಪವನ್ನು ನಿರಾಕರಿಸಿರುವ ಶಾಸಕ ಬಾಬಾಸಾಹೇಬ್ ಪಾಟೀಲ್ ನನ್ನನ್ನು ಒಂದೂ ವರ್ಷದ ಹಿಂದೆ ಬಿಜೆಪಿ ಸ್ನೇಹಿತರು ಬಿಜೆಪಿ ಸೇರ್ಪಡೆಯಾಗಲು ಆಹ್ವಾನ ನೀಡಿದ್ದರು.

ಯಾವುದೇ ಆಸೆ ಆಮಿಷಾ ಒಡ್ಡಿರಲಿಲ್ಲ. ಅವರ ಹೇಳಿಕೆ ಸಂಪೂರ್ಣ ನಿರಾಧಾರ ಎಂದು ಸ್ಪಷ್ಟನೆ ನೀಡಿದ್ದಾರೆ.ಇತ್ತ ಚಿಕ್ಕಮಗಳೂರು ಶಾಸಕ ತಮ್ಮಯ್ಯ ಕೂಡ ರವಿಕುಮಾರ್ ಗಣಿಗ ಅವರ ಹೇಳಿಕೆ ಸಂಪೂರ್ಣ ಸುಳ್ಳು ಅವರ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದು ಗಣಿಗ ಅವರ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು