LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಆಮಿಷಗಳಿಗೆ ಒಳಗಾಗದವರಿಗೆ ಪದೋನ್ನತಿ

ಬೆಂಗಳೂರು: ಯಾವುದೇ ಶಿಫಾರಸ್ಸು ಅಥವಾ ಯಾವುದೇ ಆಸೆ ಆಕಾಂಕ್ಷೆಗಳಿಗೆ ಮತ್ತು ಒತ್ತಡಕ್ಕೆ ಮಣಿಯದೆ ಬೆಂಗಳೂರು ನಗರ ಪೊಲೀಸ್ ಪೇದೆಗಳಿಂದ ಹಿಡಿದು ಎಎಸ್‍ಐ ತನಕ ಪದೋನ್ನತಿಯನ್ನು ನೀಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ರವರು ತಮ್ಮ ಮಾಸಿಕ ಪರೇಡ್‍ನಲ್ಲಿ ತಿಳಿಸಿದರು.

ಪದೋನ್ನತಿಗೆ ಬರುವ ಸಿಬ್ಬಂದಿಗಳು ಸಹ ಒತ್ತಡ ತರಬಾರದು ಎಂದು ಕೋರಿದರು. ಯಾವುದೇ ಏಜೆಂಟ್‍ಗಳನ್ನು ಸಹ ಅಥವಾ ಮಧ್ಯವರ್ತಿಗಳನ್ನು ನಂಬಬಾರದೆಂದು ತಿಳಿಸಿದರು.ಪ್ರತಿಯೊಬ್ಬ ಅಭ್ಯರ್ಥಿಯ ಸಮಾಲೋಚನೆ ನಡೆಸಿ ಖಾಲಿ ಇರುವ ಹುದ್ದೆಗಳಿಗೆ ತಕ್ಷಣವೇ ಪದೋನ್ನತಿ ನೀಡಿ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದರು.

ಬೇರೆ ಇಲಾಖೆಯಲ್ಲಿಯೂ ಸಹ ಇದೇ ತರಹ ಪದೋನ್ನತಿ ಮತ್ತು ವರ್ಗಾವಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಖಾಕಿ ಸಮಾವಸ್ತ್ರದಲ್ಲಿ ಬಹಳ ಎಚ್ಚರಿಕೆ ವಹಿಸಬೇಕೆಂದು ತಿಳಿಸಿದರು.ಆಡುಗೋಡಿಯಲ್ಲಿ ಆಯುಕ್ತರ ಮಾಸಿಕ ಪೆರೇಡ್ ನಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ದಯಾನಂದ್ ರವರು ಇತ್ತೀಚೆಗೆ ನಡೆದಂತಹ ಗಂಭೀರ ಪ್ರಕರಣಗಳಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉತ್ತಮ ಕಾರ್ಯ ನಿರ್ವಹಿಸಿದರೆಂದು ಪ್ರಶಂಸೆ ವ್ಯಕ್ತಪಡಿಸಿದರು.

ಉತ್ತಮ ಕಾರ್ಯ ನಿರ್ವಹಿಸಿದ ಹಿನ್ನೆಲೆಯಲ್ಲಿ ಇಲಾಖೆಯ 40 ಜನ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನ ಪತ್ರವನ್ನು ನೀಡಿದರು. ಪೂರ್ವ ವಿಭಾಗದ ಡಿಸಿಪಿ ದೇವರಾಜ್ ರವರ ನೇತೃತ್ವದಲ್ಲಿ ಪರೇಡ್ ಉತ್ತಮವಾಗಿ ನಡೆಸಿಕೊಟ್ಟಿದ್ದರಿಂದ ಪ್ರಶಂಸೆ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧಿಕಾರಿಗಳು ಮತ್ತು ಡಿಸಿಪಿ ಹಾಗೂ ಎಸಿಪಿ ವರ್ಗದ ಅಧಿಕಾರಿಗಳು ಉಪಸ್ಥಿತರಿದ್ದರು. ಶ್ವಾನದಳ , ಪೊಲೀಸ್ ಬ್ಯಾಂಡ್ ಸೇರಿದಂತೆ 10 ತುಕಡಿಗಳು ಆಯುಕ್ತರಿಗೆ ಗೌರವ ಒಂದನೇ ಸಲ್ಲಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು