LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಆರೋಗ್ಯ, ಶಿಕ್ಷಣಕ್ಕೆ ಆದ್ಯತೆ ನೀಡದಿದ್ದರೆ ವಿಕಸಿತ ಭಾರತ ಸಾಧ್ಯವಿಲ್ಲ: ಜಾಸ್ಮಿನ್ ಶಾ

ಬೆಂಗಳೂರು: ನಗರದ ಬೆಂಗಳೂರು ಅಂತರರಾಷ್ಟ್ರೀಯ ಕೇಂದ್ರದಲ್ಲಿ ಇಂದು ಸಂಜೆ ದೆಹಲಿ ಮಾಡೆಲ್ ಪುಸ್ತಕವನ್ನು ಲೋಕಾರ್ಪಣೆಗೊಳಿಸಿದ ಸಂದರ್ಭದಲ್ಲಿ ಮಾತನಾಡಿದ ಪುಸ್ತಕದ ಲೇಖಕ ಹಾಗೂ ದೆಹಲಿ ಅಭಿವೃದ್ಧಿ ಕಮಿಷನ್ ನ ಮಾಜಿ ಉಪಾಧ್ಯಕ್ಷ ಜಾಸ್ಮಿನ್ ಶಾ 'ಸರ್ಕಾರ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡದಿದ್ದಲ್ಲಿ ಯಾವುದೇ ಕಾರಣಕ್ಕೂ 2047 ಇರಲಿ 2147ರ ಕನಕವೂ ಸಹ ವಿಕಸಿತ ಭಾರತ ನಿರ್ಮಾಣ ಸಾಧ್ಯವಿಲ್ಲ" ಎಂದು ಅಭಿಪ್ರಾಯಪಟ್ಟರು.

"2015 ರಿಂದ 2023ರ ವರೆಗೆ ದೆಹಲಿಯಲ್ಲಿ ಶಿಕ್ಷಣ ,ಆರೋಗ್ಯ, ವಿದ್ಯುತ್, ನೀರು, ಸಂಚಾರ, ಪರಿಸರ ಇನ್ನು ಮುಂತಾದ 60 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರ ಮಾಡಿರುವ ಆಮೂಲಾಗ್ರ ಬದಲಾವಣೆಗಳಲ್ಲಿ ನನ್ನ ಪಾತ್ರವೂ ಸಹ ನೇರವಾಗಿ ಇದ್ದುದರಿಂದ ಈ ದೆಹಲಿ ಮಾಡೆಲ್ ಪುಸ್ತಕವನ್ನು ಬರೆಯಲು ಸಾಧ್ಯವಾಯಿತು . ವ್ಯವಸ್ಥೆಯ ಬದಲಾವಣೆಗಾಗಿ ಮಾಡಿರುವ ಅನೇಕ ಸುಧಾರಣೆಗಳನ್ನು ಪ್ರಾಮಾಣಿಕ ಹಾದಿಯಲ್ಲಿ ರಚನಾತ್ಮಕವಾಗಿ ಟೀಕಿಸದೆ ವಿರೋಧಪಕ್ಷಗಳು ರೇವಡಿ ಸಂಸ್ಕೃತಿಯೆಂದು ಅಪಪ್ರಚಾರ ಮಾಡುತ್ತಿರುವುದು ರಾಷ್ಟ್ರಕ್ಕೆ ಶೋಭೆ ತರುವ ವಿಚಾರವಲ್ಲ " ಎಂದು ಜಾಸ್ಮಿನ್ ಬೇಸರಪಟ್ಟರು.

"ಇಂದು ದೇಶದ ಸರ್ಕಾರಿ ಶಾಲೆಗಳಲ್ಲಿ ಫೇಲಾದ ವಿದ್ಯಾರ್ಥಿಗಳು ಮಾತ್ರ ಭರ್ತಿಯಾಗುತ್ತಾರೆ ಎನ್ನುವ ಸಂದರ್ಭದಲ್ಲಿ ದೆಹಲಿಯ ರಾಜ್ಯದಲ್ಲಿ ಪ್ರತಿ ವರ್ಷ ಎರಡುವರೆ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗೆ ದಾಖಲಾಗುತ್ತಿದ್ದಾರೆ. 25,000ಕ್ಕೂ ಹೆಚ್ಚು ತರಗತಿಗಳು ಅತ್ಯಾಧುನಿಕವಾಗಿ ಅಂತರರಾಷ್ಟ್ರೀಯ ಗುಣಮಟ್ಟದ ಶಿಕ್ಷಣವನ್ನು ದೆಹಲಿಯ ಮಕ್ಕಳಿಗೆ ನೀಡುತ್ತಿದೆ. ಕಳೆದ ಹತ್ತು ವರ್ಷದಿಂದ 97% ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ತೇರ್ಗಡೆಯಾಗುತ್ತಿದ್ದಾರೆ "

"ಭಾರತದ ಇತರೆ ರಾಜ್ಯಗಳಿಗೆ ಹೋಲಿಸಿದರೆ ದೆಹಲಿಯಲ್ಲಿನ ವಿದ್ಯುತ್ ಶಕ್ತಿ ಬೆಲೆ ಅತ್ಯಂತ ಕಡಿಮೆ ದರದಲ್ಲಿ ಸಿಗುತ್ತಿದ್ದು ಕಳೆದ ಹತ್ತು ವರ್ಷಗಳಿಂದ ಯಾವುದೇ ಹೆಚ್ಚುವರಿ ಮಾಡಿಲ್ಲದಿರುವುದು ದೆಹಲಿ ಮಾಡೆಲ್ ನ ವಿಶೇಷ. ಇದೇ ರೀತಿ ಮೂಲಭೂತ ಸೌಕರ್ಯ, ಪರಿಸರ , ಸಂಚಾರ ಇನ್ನಿತರ ಕ್ಷೇತ್ರಗಳಲ್ಲಿ ಗಣನೀಯ ಸುಧಾರಣೆಯನ್ನು ಜಾರಿಗೊಳಿಸಿದೆ " ಎಂದು ಜಾಸ್ಮಿನ್ ಶಾ ತಮ್ಮ ತಮ್ಮ ಅನುಭವಕಥನವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

"ಬೆಂಗಳೂರಿಗೂ ನನಗೂ ಅವಿನಾಭಾವ ಸಂಬಂಧವಿದ್ದು ಐಟಿ ಕ್ಷೇತ್ರದಲ್ಲಿ ದುಡಿಯುತ್ತಿದ್ದಾಗ ಪ್ರತಿ ದಿವಸ 5 ಗಂಟೆಗಳ ಕಾಲ ಟ್ರಾಫಿಕ್ ಜಾಮ್ ನಲ್ಲಿ ಇದ್ದದ್ದು ನನಗೆ ಈ ರೀತಿಯ ಸಾಧನೆಗೆ ಪ್ರೇರೇಪಣೆ ನೀಡಿದ್ದು ವಿಶೇಷ " ಎಂದು ಜಾಸ್ಮಿನ್ ಸಾ ನೆನಪಿಸಿಕೊಂಡರು.ಪುಸ್ತಕ ವನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹಾಗೂ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಬಿಡುಗಡೆಗೊಳಿಸಿದರು.ಪತ್ರಕರ್ತೆ ಧನ್ಯ ರಾಜೇಂದ್ರನ್ ಕಾರ್ಯಕ್ರಮ ನಿರೂಪಣೆಗೊಳಿಸಿದರು. ನಂತರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅನೇಕ ಸಾಮಾಜಿಕ ಚಿಂತಕರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು