LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಆರೋಪ ಸಾಬೀತು ಪಡಿಸಿದರೆ ರಾಜಕೀಯ ಸನ್ಯಾಸ: ಬಿಜೆಪಿ ಎಂಎಲ್‍ಸಿ ಸಿ.ಟಿ.ರವಿ

ಗುಲ್ಬರ್ಗ: ನನ್ನ ಮೇಲಿನ ಯಾವ ಕೇಸ್ ವಾಪಸ್ ಪಡೆದಿದ್ದಾರೆ ಅದರ ಬಗ್ಗೆ ದಾಖಲೆ ತೋರಿಸಿದರೆ ನಾನು ಎಂಎಲ್‍ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ಸನ್ಯಾಸತ್ವ ಸ್ವೀಕರಿಸುತ್ತೇನೆ ಎಂದು ಕಲಬುರಗಿಯಲ್ಲಿ ಬಿಜೆಪಿ ಎಂಎಲ್‍ಸಿ ಸಿ.ಟಿ.ರವಿ ಹೇಳಿದ್ದಾರೆ.ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ ಮೇಲೆ ಯಾವ ಕೇಸ್ ಇಲ್ಲ. ಕ್ಯಾಬಿನೆಟ್‍ನಲ್ಲಿ ನನ್ನ ಮೇಲಿನ ಯಾವ ಕೇಸ್ ಕೂಡ ವಾಪಸ್ ಪಡೆದಿಲ್ಲ.

ನಾನು ಚಾಲೆಂಜ್ ಮಾಡುತ್ತೇನೆ. ನನ್ನ ಮೇಲೆ ಯಾವ ಕೇಸ್ ಇದೆ?, ಯಾವುದು ವಾಪಸ್ ತೆಗೆದುಕೊಂಡಿದ್ದಾರೆ ಎಂದು ಹೇಳಲಿ.ಇವರು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಪ್ರಿಯಾಂಕ್ ಖರ್ಗೆ, ಹೆಚ್ ಕೆ ಪಾಟೀಲ್ ನನ್ನ ಚಾಲೆಂಜ್ ಸ್ವೀಕರಿಸಲಿ ಎಂದು ಸವಾಲ್ ಹಾಕಿದರು.
ಅವರು ನನ್ನ ಮೇಲೆ ಮಾಡಿರುವ ಆರೋಪ ರುಜುವಾತು ಮಾಡಬೇಕು.

ಇಲ್ಲದೇ ಹೋದರೆ ಜನತೆ ಎದುರು ಕ್ಷಮೆ ಕೇಳಿ ರಾಜೀನಾಮೆ ಕೊಡಬೇಕು. ಮುಸ್ಲಿಮರ ಓಲೈಕೆಗಾಗಿ ಕೇಸ್ ವಾಪಸ್ ಪಡೆದಿದ್ದಾರೆ. ನನ್ನ ಮೇಲೆ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಯಾವುದೇ ಕೇಸ್ ಇರಲಿಲ್ಲ. ಕುಕ್ಕರ ಬಾಂಬ್ ಬ್ಲಾಸ್ಟ್ ಪ್ರಕರಣ ಆರೋಪಿಗಳನ್ನು ಕಾಂಗ್ರೆಸ್‍ನವರು `ದೇ ಆರ್ ಮೈ ಬ್ರದರ್ಸ್' ಅಂತಾ ಮುಸ್ಲಿಮರನ್ನು ಓಲೈಕೆ ಮಾಡಿದ್ದಾರೆ ಎಂದರು.

ಇನ್ನು ಖರ್ಗೆ ಕುಟುಂಬದ ಸಿದ್ದಾರ್ಥ ಟ್ರಸ್ಟ್ ಜಮೀನು ವಾಪಸ್ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಸದ್ಯ ರಾಜ್ಯದಲ್ಲಿ ಹೊಸ ಟ್ರೆಂಡ್ ಶುರುವಾಗಿದೆ. ಕದ್ದ ಮಾಲನ್ನ ವಾಪಸ್ ಕೊಡ್ತಾ ಇದ್ದಾರೆ. ಕದ್ದ ಮಾಲನ್ನು ವಾಪಸ್ ಕೊಟ್ಟರೆ ಅದನ್ನ ಸಾಕ್ಷಿಯಾಗಿ ಪರಿಗಣಿಸುತ್ತಾರೆ. ಆತ್ಮಸಾಕ್ಷಿ ಬಗ್ಗೆ ಮಾತಾಡುವ ಇವರು ಒಂದು ಕೇಸ್ ವಾಪಸ್ ಪಡೆಯಲು ಒಬ್ಬ ವ್ಯಕ್ತಿಗೆ ಎಷ್ಟು ಕೊಟ್ಟಿದ್ದಾರೆ ಎಂದು ನನಗೆ ಗೊತ್ತಿದೆ. ಸಮಯ ಬಂದಾಗ ಅದನ್ನ ಬಹಿರಂಗ ಪಡಿಸುತ್ತೇನೆ. ಕೇಸ್ ವಾಪಸ್ ಪಡೆಯಲು ಯಾವ ಹಂತಕ್ಕೆ ಹೋಗಿದ್ದಾರೆ ಎಂದೂ ಗೊತ್ತಿದೆ. ನ್ಯಾಯಾಂಗ ವ್ಯವಸ್ಥೆಯಲ್ಲು ಕೂಡ ಖರೀದಿ ಮಾಡಬಹುದು ಅಂತಾ ಅಂದುಕೊಂಡಿದ್ದಾರೆ ಎಂದು `ಕೈ' ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು