LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಆರೋಪ ಸುಳ್ಳಾಗಿದ್ದರೆ ಅರೆಸ್ಟ್ ಆಗ್ತಿತ್ತಾ: ಸಿಎಂ ಪ್ರಶ್ನೆ

ಮಂಡ್ಯ: ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಅವರು ಇಂದು ಸಿ.ಟಿ.ರವಿಯವರನ್ನು ಬೆಂಬಲಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರು ವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದನ್ನು ಸ್ಥಳದಲ್ಲಿದ್ದವರು ಕೇಳಿಸಿಕೊಂಡಿದ್ದಾರೆ.

ಅಷ್ಟು ಕೆಟ್ಟ ಮಾತು ಆಡಿರುವುದಕ್ಕೆ ಸಾಕ್ಷಿಯಾದ ಆಡಿಯೊ, ವಿಡಿಯೊ ಇದೆ ಎಂದು ಹೇಳಿದ್ದಾರೆ. ಆದರೆ ನಾನು ಅದನ್ನು ನೋಡಿಲ್ಲ. ರವಿ ಹೇಳಿದ್ದು ಸುಳ್ಳಾದರೆ, ಅವರ ಬಂಧನವೇಕಾಯಿತು? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡುವುದಿಲ್ಲ. ಸಿ.ಟಿ.ಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಇದೊಂದು ಕ್ರಿಮಿನಲ್ ಅಪರಾಧ ಎಂದರು.

ಸಭಾಪತಿ ಬಸವರಾಜ ಹೊರಟ್ಟಿಯವರು, ಸಿಟಿ ರವಿಯವರು ಪ್ರಸ್ಟ್ರೇಷನ್ ಎಂಬ ಪದ ಬಳಸಿದ್ದಾರೆಂದು ತಿಳಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸಿ.ಟಿ.ರವಿಯವರು ತಾನು `ಪ್ರಸ್ಟ್ರೇಷನ್' ಪದ ಬಳಸಿರುವುದಾಗಿ ತಿಳಿಸಿದ್ದಾರೆ.ಇದು after thought ಮಾತು. ಈಗ ಆ ರೀತಿ ಹೇಳುತ್ತಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವಾಗಿರುವುದಕ್ಕೇ ಸಚಿವರು ದೂರು ನೀಡಿದ್ದಾರೆ ಎಂದರು.

ರವಿ ಆಡಿದ ಕೆಟ್ಟ ಮಾತನ್ನು ಕೇಳಿರುವುದಾಗಿ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು , ಪದಬಳಕೆಯಾಗಿರುವುದು ಸತ್ಯ ಎಂದರು.ಸಿಟಿ ರವಿಯವರು ತನಗೆ ಜೀವಬೆದರಿಕೆಯಿದ್ದು, ಅದಕ್ಕೆ ಸರ್ಕಾರವೇ ಹೊಣೆ ಎಂದು ಹೇಳಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಎಫ್ ಐ ಆರ್ ದಾಖಲಾದ ಮೇಲೆ ಪೊಲೀಸರು ತನಿಖೆ ನಡೆಸಲೇಬೇಕಾಗುತ್ತದೆ. ಕಾನೂನಿನ ಕ್ರಮ ಮಾಡಲೇಬೇಕಾಗುತ್ತದೆ. ಸಿ.ಟಿ.ರವಿ ವಿರುದ್ಧ ಆಕ್ರೋಶಗೊಂಡಿದ್ದ ಜನರು ಬೆಳಗಾವಿಯಲ್ಲಿದ್ದ ಕಾರಣದಿಂದ ಸಿ.ಟಿ.ರವಿಯವರನ್ನು ರಕ್ಷಿಸಲು ಖಾನಾಪುರಕ್ಕೆ ಅವರನ್ನು ಕರೆತರಲಾಗಿತ್ತು ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು