LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಆರ್‌.ಅಶೋಕ್‌ರಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು: ಬಸ್ ದರ ಏರಿಕೆ ವಿರುದ್ಧ ನಿನ್ನೆ ಮೆಜೆಸ್ಟಿಕ್‌ನಲ್ಲಿ ಪ್ರತಿಭಟನೆ ವೇಳೆ ವಿಪಕ್ಷನಾಯಕ ಆರ್‌.ಅಶೋಕ್ ಮತ್ತು​ ಪೊಲೀಸರ ಮಧ್ಯೆ ವಾಗ್ವಾದ ಉಂಟಾಗಿತ್ತು. ಈ ವೇಳೆ ಪೊಲೀಸರಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಕಾಂಗ್ರೆಸ್​ ವಿಡಿಯೋವೊಂದನ್ನು ಹಂಚಿಕೊಂಡಿತ್ತು. ಸದ್ಯ ಈ ವಿಚಾರವಾಗಿ ಮಾರ್ಫಿಂಗ್ ವಿಡಿಯೋಯನ್ನು ಕೆಪಿಸಿಸಿ ಎಕ್ಸ್, ಫೇಸ್‌ಬುಕ್‌ ಖಾತೆಗಳಲ್ಲಿ ಹಂಚಿರುವುದಾಗಿ ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ವಿಪಕ್ಷನಾಯಕ ಆರ್‌.ಅಶೋಕ್ ದೂರು ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂವಹನ ಅಧ್ಯಕ್ಷ ರಮೇಶ್ ಬಾಬು, ಸಹ ಅಧ್ಯಕ್ಷೆ ಐಶ್ವರ್ಯ ಮಹದೇವ್, ಉಪಾಧ್ಯಕ್ಷ ಇ.ಸತ್ಯಪ್ರಕಾಶ್​, ಕೆಪಿಸಿಸಿ ಸಾಮಾಜಿಕ ‌ಮಾಧ್ಯಮ ಸಹ ಅಧ್ಯಕ್ಷ ವಿಜಯ್ ಮತ್ತಿಕಟ್ಟಿ ಮತ್ತು ನಿಕೇತ್ ರಾಜ್ ಮೌರ್ಯ ವಿರುದ್ಧ ದೂರು ನೀಡಿರುವ ಆರ್‌.ಅಶೋಕ್, ಎಫ್​ಐಆರ್​ ದಾಖಲಿಸಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಕಾಂಗ್ರೆಸ್​ ಬಸ್‌ ದರ ಏರಿಕೆ ವಿರೋಧಿಸಿ ನಿನ್ನೆ ನಡೆದ ಪ್ರತಿಭಟನೆ ವೇಳೆ ನಾನು ಆಕ್ಷೇಪಾರ್ಹ ಮಾತು ಆಡಿದ್ದೇನೆ ಎಂದು ಸುಳ್ಳು ಸುದ್ದಿ ಮೂಲಕ ಸಾರ್ವಜನಿಕರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಆ ಮೂಲಕ ಕರ್ನಾಟಕದಲ್ಲಿರುವ ಡರ್ಟಿ ಟ್ರಿಕ್ಸ್ ಇಲಾಖೆಯು ನನ್ನ ಪ್ರತಿಷ್ಠೆಗೆ ಧಕ್ಕೆ ತರಲು ನಕಲಿ ಮತ್ತು ತಿರುಚಿದ ವಿಡಿಯೋಗಳನ್ನು ಹರಿಬಿಟ್ಟಿದೆ.

ಈ ಪ್ರತಿಯೊಂದು ಪ್ರಕರಣಗಳಿಗೆ ನಾನು ಕಾನೂನಿನ ಮೂಲಕ ಪ್ರತಿಕ್ರಿಯಿಸುತ್ತೇನೆ. ಆ ಮೂಲಕ ಇದರ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ಕಾಂಗ್ರೆಸ್​ ಸಾಮಾಜಿಕ ಮಾಧ್ಯಮ ಸೆಲ್ ಮತ್ತು ಅಪರಾಧಿಗಳನ್ನು ಬಿಡುವುದಿಲ್ಲ ಎಂದು ಆರ್​ ಅಶೋಕ್​ ಟ್ವೀಟ್ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST