LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಆರ್.ಟಿ.ಓ ಮಲ್ಲಿಕಾರ್ಜುನ್ ಅವರಿಗೆ ಗೌರವ

ಕೆ.ಆರ್.ಪೇಟೆ: ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ  ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆ. ಕೆ.ಆರ್. ಪೇಟೆ ಮತ್ತು ಕಿಕ್ಕೇರಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘ ಹಾಗೂ ಜಿಲ್ಲಾ ಜನ ಜಾಗೃತಿ ವೇದಿಕೆ ಆರ್.ಟಿ.ಓ ಮಲ್ಲಿಕಾರ್ಜುನ್ ರವರನ್ನು ಪಟ್ಟಣದ ಜಯನಗರ ಬಡಾವಣೆಯಲ್ಲಿರುವ ಅವರ ಕಚೇರಿಯಲ್ಲಿ ಅಭಿನಂದಿಸಿ ಗೌರವಿಸಿದರು.

ಅಭಿನಂದಿಸಿ ಮಾತನಾಡಿದ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಜಾತಿ-ಧರ್ಮಗಳ ಭೇದ ಭಾವವಿಲ್ಲದೆ ಸೇವಾ ಮನೋಭಾವನೆಯಿಂದ ಜನಮನ್ನಣೆ ಗಳಿಸಿದ್ದಾರೆ. ಹಾಗೂ ನಾವು ಮಾಡುವ ಯಾವುದೇ ಕಾಯಕ ಕ್ಷೇತ್ರದಲ್ಲಿ ಪ್ರಾಮಾಣಿಕತೆ ಜೊತೆಗೆ ಇಚ್ಚಾ ಶಕ್ತಿ ಇದ್ದರೆ ಗೌರವಾನ್ವಿತ ಸ್ಥಾನಮಾನಗಳು ವಿರೋಧವಿಲ್ಲದೆ ದೊರಕುತ್ತವೆ  ಎಂಬುದಕ್ಕೆ ಸಮಾಜ ಸೇವಕ ಹಾಗೂ ಜಿಲ್ಲಾ ಜನ ಜಾಗೃತಿ ಉಪಾಧ್ಯಕ್ಷರಾದ ಆರ್.ಟಿ.ಓ ಮಲ್ಲಿಕಾರ್ಜುನ್ ಉದಾಹರಣೆಯಾಗಿ ನಮ್ಮ ಸಂಘಕ್ಕು ಗೌರವ ಹೆಚ್ಚಿಸಿದ್ದಾರೆ.

ನಿಜಕ್ಕೂ ಸಮಾಜ ಸೇವಾ ಕಳಕಳಿ ಇರುವ ಮಲ್ಲಿಕಾರ್ಜುನ್ ರವರಿಗೆ ಮುಂದಿನ ದಿನಮಾನಗಳಲ್ಲಿ ಮತ್ತಷ್ಟು ಗೌರವಾನ್ವಿತ ಸ್ಥಾನಗಳು  ದೊರಕಬೇಕು ಎಂದರು.
ಬಳಿಕ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ನಾನು ಎಂದಿಗೂ ಯಾವುದೇ ಸ್ಥಾನಮಾನಗಳಿಗೆ ಆಕಾಂಕ್ಷಿಯಲ್ಲ ಸೇವೆ ಮಾಡಲು ಅವಕಾಶ ಮಾಡಿಕೊಟ್ಟರೆ ಮಾತ್ರ ಅದಕ್ಕೆ ಪೂರಕವಾಗಿ ಕಾಯಾ ವಾಚ ಮನಸ್ಸಿನಿಂದ ಸಂಘಟನೆಯ ಮೂಲಕ ಜನರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮ ವಹಿಸುತ್ತೇನೆ.ಈ ಪ್ರೀತಿಯ ಗೌರವ ಅಭಿನಂದನೆಗಳು ನನಗೆ ಮತ್ತಷ್ಟು ಜವಾಬ್ದಾರಿಯ ಎಚ್ಚರಿಕೆ ಗಂಟೆಗಳಾಗಿವೆ ಎಂದರು.

ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ತಿಲಕ್ ರಾಜ್, ಕಿಕ್ಕೇರಿ ವೀರೇಶಪ್ಪ, ಜಿಲ್ಲಾ ಜನಜಾಗೃತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಕೆ.ಆರ್ ರಾಜೇಶ್, ಸದಸ್ಯರಾದ ನಾರಾಯಣಗೌಡ, ಶಿವರಾಮು,ಮೊಟ್ಟೆ ಮಂಜು, ಪ್ರಸನ್ನ, ನಳಿನ, ಸುನೀತ, ಮೇಲ್ವಿಚಾರಕಿ ಗುಣ ಶ್ರೀ, ಸಿಬ್ಬಂದಿ ಶಶಿಪ್ರಭಾ, ಸಂಗೀತ, ವಿವೇಕ್, ಪದ್ಮ, ಜ್ಯೋತಿ, ವಿವೇಕ್, ಪ್ರಕಾಶ್, ಆರ್‍ಟಿಓ ಮಲ್ಲಿಕಾರ್ಜುನ್ ಅಭಿಮಾನಿ ಬಳಗದ ಅಧ್ಯಕ್ಷ ಗಂಜಿಗೆರೆ ಮಹೇಶ್ ಸೇರಿದಂತೆ ಉಪಸ್ಥಿರಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು