LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಆಸಿಡ್ ಮೊಟ್ಟೆ ದಾಳಿ ಪ್ರಕರಣ ಪೂರ್ವನಿಯೋಜಿತ: ಮಾಜಿ ಸಂಸದ ಡಿ.ಕೆ. ಸುರೇಶ್

ಬೆಂಗಳೂರು: . ಶಾಸಕ ಮುನಿರತ್ನ ಅಭಿನಯದ 'ಆಸಿಡ್ ಮೊಟ್ಟೆ' ಸಿನಿಮಾ 100 ದಿನ ಓಡಿಸಿ" ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು.

ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಶನಿವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.ವಿಡಿಯೋ ಪ್ರಕರಣ ಹಾಗೂ ಮಾಧ್ಯಮದ ವರದಿಗಳನ್ನು ನೋಡಿದಾಗ ಬಿಜೆಪಿ ಶಾಸಕರು, ನನ್ನ ಮೇಲೆ, ನನ್ನ ಸಹೋದರ ಹಾಗೂ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕುಸುಮಾ ಹಾಗೂ ಅವರ ತಂದೆ ವಿರುದ್ಧ ನೇರ ಆರೋಪ ಮಾಡಿದ್ದಾರೆ.

ಈ ವಿಡಿಯೋ ಅತ್ಯುತ್ತಮವಾಗಿ ಮೂಡಿ ಬಂದಿದೆ. ಆಸಿಡ್ ದಾಳಿ ಎಂದ ಮೂರು ಸೆಕೆಂಡ್ ನಲ್ಲಿ ಮೊಟ್ಟೆ ಎಸೆಆಸಿಡ್ ಮೊಟ್ಟೆ ದಾಳಿ ಪ್ರಕರಣ ಪೂರ್ವನಿಯೋಜಿತಯಲಾಗಿದೆ. ಕನ್ನಡ ಚಿತ್ರರಂಗದ ಅಧ್ಯಕ್ಷ, ನಿರ್ಮಾಪಕರು, ಚಿತ್ರಕಥೆ ತಿರುಚುವ ಕೆಲಸ ಮಾಡಿದ್ದ ಮುನಿರತ್ನ, ಈಗ ತಾವೇ ನಟನೆಗೂ ಇಳಿದಿದ್ದಾರೆ ಎಂದು ಈ ವಿಡಿಯೋ ನೋಡಿದ ಮೇಲೆ ನನಗೆ ತಿಳಿಯಿತು. ಅದಕ್ಕಾಗಿ ಒಳ್ಳೆ ಡ್ರಾಮಾ ಮಾಡಿ ಮಾಧ್ಯಮಗಳ ಕೈಗೆ ನೀಡಿದ್ದಾರೆ. ಮಾಧ್ಯಮಗಳು ಕೂಡ ಏನೂ ಸುದ್ದಿ ಇಲ್ಲ ಎಂದು ಇದನ್ನು ಚೆನ್ನಾಗಿ ಬಿತ್ತರಿಸಿದ್ದೀರಿ. ಅಭಿನಯ ಮಾಡಿದ ಅವರಿಗೂ ಅಭಿನಂದನೆ, ಅದನ್ನು ತೋರಿಸಿದ ನಿಮಗೂ ಅಭಿನಂದನೆಗಳು.

ಈ ವಿಚಾರವಾಗಿ ಪ್ರಧಾನಮಂತ್ರಿ, ಕೇಂದ್ರ ಗೃಹಸಚಿವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಅವರು ಅನೇಕ ಸಿನೆಮಾ ಮಾಡಿದ್ದು, ಕೆಲವು ಡಬ್ಬಾ ಯಶಸ್ವಿಯಾದರೆ, ಮತ್ತೆ ಕೆಲವು ಯಶಸ್ವಿಯಾಗಿಲ್ಲ. ಹೀಗಾಗಿ ಹೊಸ ಸ್ಕ್ರಿಪ್ಟ್ ಸಿದ್ಧಪಡಿಸುತ್ತಿದ್ದಾರೆ. ಮೊದಲು ಮಾಧ್ಯಮಗಳನ್ನು ಬಳಸಿಕೊಂಡು ಮಾರುಕಟ್ಟೆ ಇದ್ದರೆ ನಂತರ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ನೀಡಲಿ. ಅವರು ಗೃಹಮಂತ್ರಿಗೆ ಪತ್ರ ಬರೆದು ಎಸ್ ಪಿಜಿ ಭದ್ರತೆಯನ್ನೇ ಪಡೆಯಲಿ. ಕಾರಣ ಅವರ ಬಳಿ ರಘು ಎಂಬ ಚಾಲಕ ಇದ್ದ. ಅವನು ಏನಾದ ಎಂದು ತಿಳಿಯಬೇಕಲ್ಲವೇ. ಉಳಿದ ವಿಚಾರಗಳನ್ನು ಮಾಧ್ಯಮಗಳೇ ತನಿಖೆ ಮಾಡಿ ಪ್ರಸಾರ ಮಾಡಿ. ಮತ್ತೊಬ್ಬ ಮಳ್ಳತಹಳ್ಳಿ ರಂಜಿತ್ ಎಂಬ ಹುಡುಗನ ಕೈ ಕಾಲು ಮುರಿದಿದ್ದಾರೆ. ಇಷ್ಟು ದಿನ ಅವರ ಖಾಸಗಿ ವಿಚಾರ ಮಾತನಾಡಬಾರದು ಎಂದು ಸುಮ್ಮನೆ ಇದ್ದೆ. ಈ ಪ್ರಕರಣಗಳನ್ನು ಸಿಬಿಐ ತನಿಖೆಯಾಗಲಿ ಎಂದು ಪತ್ರ ಬರೆಯಲಿ. ಅವರ ಹೈಕಮಾಂಡ್ ಗೆ ಕೊಟ್ಟಿರುವ ವರದಿಯಲ್ಲಿ ಇದನ್ನು ಸೇರಿಸಲಿ.ಮತದಾರರ ನಕಲಿ ಗುರುತಿನ ಚೀಟಿ ಪ್ರಕರಣದಲ್ಲಿ ಬಾಲಾಜಿ ಎಂಬುವವರು ತಿರುಪತಿ ಲಡ್ಡು ತೆಗೆದುಕೊಂಡು ಹೋಗಿ ಕೊಟ್ಟರಂತೆ. ಇದರ ಮೇಲೂ ಸಿಬಿಐ ತನಿಖೆಯಾಗಲಿ.

ನನ್ನನ್ನು ಸೋಲಿಸಿದರು ಎಂದು ಹೇಳುತ್ತಾರೆ. ನನ್ನನ್ನು ಸೋಲಿಸಿದವರು ಜನರೇ ಹೊರತು ಬಿಜೆಪಿ ನಾಯಕರಲ್ಲ ಎಂದು ಫಲಿತಾಂಶ ಬಂದ ದಿನವೇ ಹೇಳಿದ್ದೇನೆ. ಇವರ ಯೋಗ್ಯತೆಗೆ ನನ್ನ ಸೋಲಿಸಲು ಆಗುವುದಿಲ್ಲ. ಜನ ತೀರ್ಮಾನಿಸಿ ನನ್ನನ್ನು ಸೋಲಿಸಿದ್ದಾರೆ. ಅದನ್ನು ನಾನು ಒಪ್ಪಿದ್ದೇನೆ. ಇವರು ದೊಡ್ಡ ಸಾಧನೆ ಮಾಡಿರುವವರಂತೆ ನನ್ನ ಹೆಸರು ಹೇಳಿಕೊಂಡು ಇವರ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಲ್ಲಿ ನನ್ನ ಹಾಗೂ ನನ್ನ ಅಣ್ಣನ ಹೆಸರು ಹೇಳಿದರಷ್ಟೇ ಇವರ ಸಿನಿಮಾ ನಡೆಯುತ್ತದೆ.

ಅವರನ್ನು ಪರೀಕ್ಷೆ ಮಾಡಿರುವ ದೊಡ್ಡ ಡಾಕ್ಟರ್, ಕೂದಲು ಸುಟ್ಟಿದೆ ಸಿ.ಟಿ ಸ್ಕ್ಯಾನ್ ಮಾಡಬೇಕು ಎಂದಿದ್ದಾರೆ. ಆದರೆ ನಿನ್ನೆ ಸಂಜೆ ಮತ್ತೊಂದು ವಿಡಿಯೋ ನೋಡಿದ್ದು, ಅದರಲ್ಲಿ ಮುನಿರತ್ನ ಅವರು ಸಿ.ಟಿ. ರವಿ ಅವರನ್ನು ಭೇಟಿ ಮಾಡಿ ಅವರ ಮನೆಯಿಂದ ಹೊರಗೆ ಬಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅದರಲ್ಲಿ ಮುನಿರತ್ನ ಅವರಿಗೆ ಸುಟ್ಟು ಹೋಗಿದ್ದ ಕೂದಲು ಮತ್ತೆ ವಾಪಸ್ ಬಂದಿವೆ. ಮುನಿರತ್ನ ತಲೆಗೆ ವಿಗ್ ಹಾಕಿದ್ದಾರೋ, ಅಥವಾ ನಿಜವಾದ ಕೂದಲು ಇಟ್ಟುಕೊಂಡಿದ್ದಾರೋ ಎಂದು ಮಾಧ್ಯಮಗಳೇ ಪರೀಕ್ಷೆ ಮಾಡಬೇಕು. ದೊಡ್ಡ ಡಾಕ್ಟರ್ ಕೂದಲು ಸುಟ್ಟಿದೆ ಎಂದು ಹೇಳಿದ ಮೇಲೆ ನಾವು ನಂಬಲೇ ಬೇಕಲ್ಲವೇ?

ಮುನಿರತ್ನ ಒಕ್ಕಲಿಗರ ಹೆಣ್ಣು ಮಕ್ಕಳ ವಿಚಾರದಲ್ಲಿ ಹೇಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಒಕ್ಕಲಿಗ ಹಾಗೂ ದಲಿತ ಮಹಿಳೆಯರನ್ನು ಮಂಚಕ್ಕೆ ಕರೆದು ಅಪಮಾನ ಮಾಡಿದ್ದಾರೆ. ಆತನ ಅಸಭ್ಯ ವರ್ತನೆಯ ಆಡಿಯೋ ನಿಜ ಎಂದು ಎಫ್ ಎಸ್ ಎಲ್ ವರದಿಯಲ್ಲಿ ಸಾಬೀತಾಗಿದೆ. ಹೀಗಾಗಿ ಎಸ್ ಐಟಿಯು ಎಫ್ ಐಆರ್ ದಾಖಲಿಸಿದೆ. ಆತ ಹೇಗೆ ನೀಚವಾಗಿ ನಡೆದುಕೊಂಡಿದ್ದಾನೆ ಎಂಬುದನ್ನು ಮಾಧ್ಯಮಗಳು ಸರಿಯಾಗಿ ಜನರಿಗೆ ತೋರಿಸಬೇಕು. ಇಷ್ಟೆಲ್ಲಾ ಆದರೂ ರವಿ ಅವರು ಆತನ ಮನೆಗೆ ಹೋಗಿದ್ದಾರೆ. ಅವರು ತಮ್ಮ ತಾಯಿಯನ್ನು ಮರೆತು ಅವರ ಮನೆಗೆ ಹೋಗಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು