LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಆಸ್ಟ್ರೇಲಿಯಾ ಎ ತಂಡದ ವಿರುದ್ಧ ಟೆಸ್ಟ್: ರಾಹುಲ್ ಆಟದ ಮೇಲೆ ಚಿತ್ತ

ಮೆಲ್ಬರ್ನ್: ಭಾರತ ಎ ತಂಡ, ಗುರುವಾರ ಇಲ್ಲಿ ಆರಂಭವಾಗುವ ನಾಲ್ಕು ದಿನಗಳ ಎರಡನೇ 'ಟೆಸ್ಟ್' ಪಂದ್ಯದಲ್ಲಿ ಆಸ್ಟ್ರೇಲಿಯಾ ಎ ತಂಡವನ್ನು ಎದುರಿಸಲಿದ್ದು, ಅನುಭವಿ ಕೆ.ಎಲ್.ರಾಹುಲ್ ಅವರಿಗೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯ ತೋರಲು ಉತ್ತಮ ಅವಕಾಶ ಒದಗಿದೆ.
ಈ ಪಂದ್ಯದಲ್ಲಿ ಕನ್ನಡಿಗ ಆಟಗಾರನ ಬ್ಯಾಟಿಂಗ್ ಕ್ರಮಾಂಕ ಮತ್ತು ಫಾರ್ಮ್ ಮೇಲೆ ಚಿತ್ತ ನೆಟ್ಟಿದೆ.
ತಂಡದ ಚಿಂತಕರ ಚಾವಡಿಯ ಜೊತೆ ಸಮಾಲೋಚನೆ ನಡೆಸಿದ ಆಯ್ಕೆಗಾರರು ರಾಹುಲ್ ಮತ್ತು ರಿಸರ್ವ್ ವಿಕೆಟ್ ಕೀಪರ್ ಜುರೇಲ್ ಅವರನ್ನು ಭಾರತ 'ಎ' ತಂಡದ ಎರಡನೇ ಟೆಸ್ಟ್ ಪಂದ್ಯಕ್ಕೆ ಕಳುಹಿಸಿದ್ದಾರೆ. ರಾಹುಲ್ ಅವರನ್ನು ತವರಿನಲ್ಲಿ ನಡೆದ ನ್ಯೂಜಿಲೆಂಡ್ ಟೆಸ್ಟ್ ಸರಣಿಯ ಮೊದಲ ಪಂದ್ಯದ ನಂತರ ತಂಡದಿಂದ ಕೈಬಿಡಲಾಗಿತ್ತು.
೨೨ರಿಂದ ಪರ್ತ್ನಲ್ಲಿ ಭಾರತ-  ಆಸ್ಟ್ರೇಲಿಯಾ ಮಧ್ಯೆ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ.
ಆಸ್ಟ್ರೇಲಿಯಾ ತಂಡದ ಮೀಸಲು ವೇಗಿಗಳಲ್ಲಿ ಒಬ್ಬರಾದ ಸ್ಕಾಟ್ ಬೋಲೆಂಡ್ ಅವರ ದಾಳಿಯೆದುರು ಅಭಿಮನ್ಯು ಈಶ್ವರನ್, ಋತುರಾಜ್ ಗಾಯಕವಾಡ್, ಬಿ.ಸಾಯಿ ಸುದರ್ಶನ್ ಮತ್ತು ದೇವದತ್ತ ಪಡಿಕ್ಕಲ್ ಅಂಥ ಆಟಗಾರರು ಹೇಗೆ ಆಡುತ್ತಾರೆ ಎಂಬುದು ಕುತೂಹಲಕರ. 'ಎ' ತಂಡದ ಆಟಗಾರರಲ್ಲಿ ರಾಹುಲ್ ಅವರಿಗೆ ಬಾರ್ಡರ್-ಗಾವಸ್ಕರ್ ಟ್ರೋಫಿ ಸರಣಿಯಲ್ಲಿ ಆಡುವ ಸಾಧ್ಯತೆ ಹೆಚ್ಚು ಇರುವುದರಿಂದ ಅವರ ಪ್ರದರ್ಶನದ ಮೇಲೆ ಆಯ್ಕೆಗಾರರ ಗಮನವಿದೆ.
ಮೆಲ್ಬರ್ನ್ನಲ್ಲಿ ಬುಧವಾರ ತಾಲೀಮಿನ ವೇಳೆ ರಾಹುಲ್ ಉತ್ತಮ ಲಯಲ್ಲಿದ್ದಂತೆ ಕಂಡರು. ಈಶ್ವರನ್ ಮತ್ತು ಋತುರಾಜ್ ಇನಿಂಗ್ಸ್ ಆರಂಭಿಸುವ ನಿರೀಕ್ಷೆಯಿರುವ ಕಾರಣ, ರಾಹುಲ್ ಐದನೇ ಅಥವಾ ಆರನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆಯಿದೆ. ಭಾರತ ತಂಡಕ್ಕೆ ಆಯ್ಕೆಯಾದರೂ ಅವರು ಇದೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆ ಹೆಚ್ಚು.
ಮೊದಲ 'ಟೆಸ್ಟ್'ನಲ್ಲಿ  ಆಸ್ಟ್ರೇಲಿಯಾ  'ಎ' ಏಳು ವಿಕೆಟ್‌ಗಳಿಂದ ಗೆದ್ದುಕೊಂಡಿತ್ತು. ರಾಹುಲ್ ಅವರು ಬಾಬಾ ಇಂದ್ರಜಿತ್ ಸ್ಥಾನದಲ್ಲಿ ಆಡಲಿದ್ದಾರೆ. ಇಂದ್ರಜಿತ್ ಮೊದಲ ಪಂದ್ಯದಲ್ಲಿ ೯ ಮತ್ತು ೬ ರನ್ ಗಳಿಸಿದ್ದರು.
ಜುರೆಲ್ ಅವರು ಇಶಾನ್ ಕಿಶನ್ ಸ್ಥಾನದಲ್ಲಿ ಅವಕಾಶ ಪಡೆಯಲಿದ್ದಾರೆ. ಮೊದಲ ಪಂದ್ಯದ ಕೊನೆಯ ದಿನ ಚೆಂಡು
ಬದಲಾವಣೆ ಮಾಡಿದ್ದ ಪ್ರಕರಣದಲ್ಲಿ ಇಶಾನ್ ಅಂಪೈರ್ ಜೊತೆ ವಾಗ್ವಾದದಲ್ಲಿ ತೊಡಗಿದ್ದರು.
ನವದೀಪ್ ಸೈನಿ ಬದಲು ಎಡಗೈ ವೇಗಿ ಖಲೀಲ್ ಅಹ್ಮದ್ ಮತ್ತು ಮಾನವ್ ಸುತಾರ್ ಬದಲು ತನುಷ್ ಕೋಟ್ಯಾನ್ ಅವಕಾಶ ಪಡೆಯಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು