LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಇಂಗ್ಲೆಂಡ್ ವಿರುದ್ಧದ ಮೊದಲ ಟಿ-20 ಗೆದ್ದು ಬೀಗಿದ ಟೀಂ ಇಂಡಿಯಾ

ಕೋಲ್ಕತ್ತಾ: ಇಲ್ಲಿನ ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಮೊದಲ ಟಿ-20 ಕ್ರಿಕೆಟ್ ಪಂದ್ಯದಲ್ಲಿ, ಅತಿಥೇಯ ಭಾರತ ತಂಡವು ಗೆಲುವಿನ ನಗೆ ಬೀರಿದೆ.ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಭಾರತ, 20 ಓವರ್‍ಗಳಲ್ಲಿ ಇಂಗ್ಲೆಂಡ್ ತಂಡವನ್ನು ಕೇವಲ 132 ರನ್‍ಗಳಿಗೆ ಕಟ್ಟಿ ಹಾಕಿತು. ಪ್ರತಿಯಾಗಿ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡವು, ಕೇವಲ 12.5 ಓವರ್‍ಗಳಲ್ಲಿ 3 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿ ಗೆಲುವು ಸಾಧಿಸಿತು.

ಮೊದಲು ಬ್ಯಾಟ್ ಮಾಡಿದ ಪ್ರವಾಸಿ ಇಂಗ್ಲೆಂಡ್ ತಂಡಕ್ಕೆ ಆರಂಭದಲ್ಲೇ ಆಘಾತ ನೀಡಿದ ಭಾರತದ ಬೌಲರ್ ಅರ್ಷದೀಪ್ ಸಿಂಗ್, ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿ ಗಮನ ಸೆಳೆದರು. ಅದೇ ರೀತಿ ಮತ್ತೋರ್ವ ಆರಂಭಿಕ ಬ್ಯಾಟ್ಸಮನ್ ಬೆನ್ ಡಕೆಟ್ ಅವರನ್ನು ಕೇವಲ 4 ರನ್‍ಗಳಿಗೆ ಔಟ್ ಮಾಡಿ ಅರ್ಷದೀಪ್ ಸಿಂಗ್ ಇಂಗ್ಲೆಂಡ್ ತಂಡದ ದೊಡ್ಡ ಮೊತ್ತ ಪೇರಿಸುವ ಆಸೆಗೆ ತಣ್ಣೀರು ಎರಚಿದರು.

ಇಂಗ್ಲೆಂಡ್ ತಂಡದ ಪರವಾಗಿ ಜಸ್ ಬಟ್ಲರ್ 68 ರನ್ ಗಳಿಸಿ ಗಮನ ಸೆಳೆದರು. ಒಟ್ಟು 44 ಎಸೆತಗಳನ್ನು ಎದುರಿಸಿದ ಜಾಸ್ ಬಟ್ಲರ್, 8 ಬೌಂಡರಿ ಮತ್ತು 2 ಸಿಕ್ಸರ್ ಸಿಡಿಸಿ ಅಬ್ಬರಿಸಿದರು. ಆದರೆ ಅಂತಿಮವಾಗಿ ವರುಣ್ ಚಕ್ರವತ್ರಿ ಅವರ ಬೌಲಿಂಗ್‍ನಲ್ಲಿ ನಿತೀಶ್ ರೆಡ್ಡಿ ಅವರಿಗೆ ಕ್ಯಾಚಿತ್ತು ಪೆವಿಲಿಯನ್‍ಗೆ ಮರಳಿದರು.ಇನ್ನುಳಿದಂತೆ ಇಂಗ್ಲೆಂಡ್ ತಂಡದ ಪರವಾಗಿ ಹ್ಯಾರಿ ಬ್ರೂಕ್ ಮತ್ತು ಜಾಫ್ರಾ ಆರ್ಚರ್ ಕ್ರಮವಾಗಿ 17 ಮತ್ತು 12 ರನ್ ಗಳಿಸಿದರು. ಇಂಗ್ಲೆಂಡ್ ತಂಡದ ಮತ್ತೋರ್ವ ಆಟಗಾರ ಲಿಯಾಮ್ ಲಿವಿಂಗ್‍ಸ್ಟೋನ್ ಶೂನ್ಯಕ್ಕೆ ಔಟ್ ಆಗುವ ಮೂಲಕ ಇಂಗ್ಲೆಂಡ್ ತಂಡದ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದರು.ಭಾರತದ ಬೌಲರ್‍ಗಳ ಪೈಕಿ ಅರ್ಷದೀಪ್ ಸಿಂಗ್ 2, ವರುಣ್ ಚಕ್ರವರ್ತಿ 3, ಹಾರ್ದಿಕ್ ಪಾಂಡ್ಯಾ ಮತ್ತು ಅಕ್ಸರ್ ಪಟೇಲ್ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು