LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಇಂದಿನಿಂದ ಪ್ರೊ ಬಡ್ಡಿ ಲೀಗ್

ದೇಶದಲ್ಲಿ ಸದ್ಯ ಕ್ರಿಕೆಟ್ ಹವಾ ಮನೆ ಮಾಡಿದೆ. ಇಂದಿನಿಂದ ಪ್ರೊಕಬಡ್ಡಿ ಲೀಗ್‍ನ 11ನೇ ಆವೃತ್ತಿಯ ಪಂದ್ಯಗಳು ನಡೆಯಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ತೆಲಗು ಟೈಟನ್ಸ್ ತಂಡಗಳು ಕಾದಾಟ ನಡೆಸಲಿವೆ.

11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಅಕ್ಟೋಬರ್ 18 ರಿಂದ ನವೆಂಬರ್ 9 ರವರೆಗೆ ಹೈದರಾಬಾದ್ನಲ್ಲಿ ಮೊದಲ ಚರಣದ ಕಬಡ್ಡಿ ಪಂದ್ಯಗಳು ನಡೆಯಲಿವೆ.
ನೋಯ್ಡಾ ಒಳಾಂಗಣ ಕ್ರೀಡಾಂಗಣದಲ್ಲಿ ನವೆಂಬರ್ 10 ರಿಂದ ಡಿಸೆಂಬರ್ 2 ರವರೆಗೆ ಎರಡನೇ ಚರಣದ ಪಂದ್ಯ ನಡೆಯಲಿದೆ. ಪುಣೆಯಲ್ಲಿ ಡಿಸೆಂಬರ್ 3 ರಿಂದ 24 ರವರೆಗೆ ಮೂರನೇ ಚರಣದ ಪಂದ್ಯ ನಡೆಯಲಿದೆ. ಪಿಕೆಎಲ್ ಪ್ಲೇ ಆಫ್‍ಗಳ ದಿನಾಂಕಗಳು ಮತ್ತು ಸ್ಥಳಗಳನ್ನು ಇನ್ನು ನಿಗದಿ ಪಡಿಸಿಲ್ಲ.

12 ತಂಡಗಳ ಫೈಟ್: ಟೂರ್ನಿಯಲ್ಲಿ ಒಟ್ಟು 12 ತಂಡಗಳು ಭಾಗವಹಿಸುತ್ತಿವೆ. ಪುಣೇರಿ ಪಲ್ಟನ್, ತೆಲುಗು ಟೈಟಾನ್ಸ್, ಬೆಂಗಳೂರು ಬುಲ್ಸ್, ಬೆಂಗಾಲ್ ವಾರಿಯರ್ಸ್, ಯು ಮುಂಬಾ, ಹರಿಯಾಣ ಸ್ಟೀಲರ್ಸ್, ತಮಿಳ್ ತಲೈವಾಸ್, ದಬಾಂಗ್ ಡೆಲ್ಲಿ, ಗುಜರಾತ್ ಜೈಂಟ್ಸ್, ಜೈಪುರ ಪಿಂಕ್ ಪ್ಯಾಂಥರ್ಸ್, ಪಾಟ್ನಾ ಪೈರೇಟ್ಸ್ ಮತ್ತು ಯುಪಿ ಯೋಧಾ ತಂಡಗಳು ಸೇರಿವೆ.

ಲೀಗ್ ಹಂತದಲ್ಲಿ ಭರ್ಜರಿ ಪ್ರದರ್ಶನ ನೀಡಿ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನ ಪಡೆದ ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ. ಉಳಿದಂತೆ ಮೂರರಿಂದ ಆರನೇ ಸ್ಥಾನದಲ್ಲಿರುವ ತಂಡಗಳು ಎಲಿಮಿನೇಟರ್‍ನಲ್ಲಿ ಸ್ಪರ್ಧಿಸಿ, ಉಪಾಂತ್ಯ ಪ್ರವೇಶಿಸಲಿವೆ.ಬುಲ್ಸ್ ಬಲಾಢ್ಯ: ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ತೆಲಗು ಟೈಟನ್ಸ್ ತಂಡಗಳು ಕಾದಾಟ ನಡೆಸಲಿವೆ. ಈಗಾಗಲೇ ಈ ತಂಡಗಳು ಒಟ್ಟು 23 ಬಾರಿ ಪಿಕೆಎಲ್‍ನಲ್ಲಿ ಮುಖಾಮುಖಿ ಆಗಿದ್ದು, ಬೆಂಗಳೂರು 16, ಟೈಟನ್ಸ್ 3 ಪಂದ್ಯಗಳನ್ನು ಗೆದ್ದಿವೆ. ನಾಲ್ಕು ಪಂದ್ಯಗಳು ಟೈ ಆಗಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು