LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಇಂದಿನಿಂದ ಸಿಂಹಣಿಯರ ಮಹಿಳಾ ಪ್ರೀಮಿಯರ್ ಲೀಗ್

ವಡೋದರಾ: ಕಳೆದ ಬಾರಿಯ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜಯಂಟ್ಸ್ ಮಹಿಳಾ ಪ್ರೀಮಿಯರ್ ಲೀಗ್ 3ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಶುಕ್ರವಾರ ಮುಖಾಮುಖಿಯಾಗಲಿವೆ.

ಇದರೊಂದಿಗೆ ಭಾರತದ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಪೋಷಣೆಗೆ ವೇದಿಗೆ ಸಜ್ಜುಗೊಂಡಿದೆ.ಜಾಗತಿಕ ಸೂಪರ್ ಸ್ಟಾರ್‍ಗಳು ಸ್ಪರ್ಧೆಗೆ ಅಪಾರ ಮೌಲ್ಯವನ್ನು ತಂದಿದ್ದರೂ ಲೀಗ್‍ನ ನಿಜವಾದ ಯಶಸ್ಸು ದೇಶೀಯ ಆಟಗಾರ್ತಿಯರ ಏಳಿಗೆಯಲ್ಲಿಡಗಿದೆ. ಮೊದಲ ಎರಡು ಋತುಗಳಲ್ಲಿ ಶ್ರೇಯಂಕಾ ಪಾಟೀಲ್ ಮತ್ತು ಸೈಕಾ ಇಶಾಕ್ ಅವರಂತಹ ಹಲವಾರು ದೇಶೀಯ ಪ್ರತಿಭೆಗಳು ಹೊರಹೊಮ್ಮಿದ್ದು, ರಾಷ್ಟ್ರೀಯ ತಂಡದಿಂದಲೂ ಕರೆ ಸ್ವೀಕರಿಸಿದ್ದಾರೆ.

ದೇಶೀಯ ಕ್ರಿಕೆಟ್‍ನಲ್ಲಿ ಉತ್ತಮ ಫಾರ್ಮ್ ನಲ್ಲಿರುವ ಭಾರತದ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಜುಲೈನಲ್ಲಿ ಇಂಗ್ಲೆಂಡ್ ಪ್ರವಾಸ ಮತ್ತು ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‍ನೊಂದಿಗೆ ರಾಷ್ಟ್ರೀಯ ತಂಡಕ್ಕೆ ಮರಳಲು ಎದುರು ನೋಡುತ್ತಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಪರ ಉತ್ತಮ ಪ್ರದರ್ಶನ ನೀಡಲು ಅವರು ಉತ್ಸುಕರಾಗಿದ್ದಾರೆ.
ದೇಶೀಯ ಕ್ರಿಕೆಟ್‍ನಲ್ಲಿ ಮಿಂಚಿದ ವೇಗದ ಬೌಲಿಂಗ್ ಆಲ್‍ರೌಂಡರ್ ಕಾಶ್ವೀ ಗೌತಮ್ ಸಹ ಅತ್ಯುತ್ತಮ ಆಟಗಾರ್ತಿಯರ ವಿರುದ್ಧ ತಮ್ಮನ್ನು ಸಾಬೀತುಪಡಿಸುವ ಅವಕಾಶವನ್ನು ಹೊಂದಿದ್ದಾರೆ. ಟೂರ್ನಿಯಲ್ಲಿ ಮೊದಲ ಬಾರಿಗೆ ವಡೋದರಾ ಮತ್ತು ಲಖನೌ ತಾಣಗಳನ್ನು ಹೊಸದಾಗಿ ಪರಿಚಯಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು