LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಇಂದು ಅಲ್ಲು ಅರ್ಜುನ್ ಜಾಮೀನು ಅರ್ಜಿ ತೀರ್ಪು

ತೆಲಂಗಾಣ: ಸಂಧ್ಯಾ ಚಿತ್ರಮಂದಿರ ಕಾಲ್ತುಳಿತ ಪ್ರಕರಣ ತೆಲುಗು ರಾಜಕೀಯ ಮತ್ತು ಚಿತ್ರರಂಗ ಎರಡರಲ್ಲೂ ಬಿರುಗಾಳಿ ಎಬ್ಬಿಸಿದೆ. ಸಂಧ್ಯಾ ಚಿತ್ರಮಂದಿರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದು ರಾಷ್ಟ್ರದಾದ್ಯಂತ ಸುದ್ದಿಯಾಗಿತ್ತು. ಇದೇ ಪ್ರಕರಣದಲ್ಲಿ ಸಂಧ್ಯಾ ಚಿತ್ರಮಂದಿರದ ಮಾಲೀಕ, ಮ್ಯಾನೇಜರ್, ಅಲ್ಲು ಅರ್ಜುನ್‍ರ ಬಾಡಿಗಾರ್ಡ್ ಹಾಗೂ `ಪುಷ್ಪ 2' ಸಿನಿಮಾದ ನಿರ್ಮಾಪಕರ ಮೇಲೂ ದೂರು ದಾಖಲಾಗಿತ್ತು.

ಪ್ರಕರಣದ ವಿರುದ್ಧ ಅಲ್ಲು ಅರ್ಜುನ್ ಹಾಗೂ ಇನ್ನೂ ಕೆಲವರು ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸುತ್ತಿರುವ ತೆಲಂಗಾಣ ಹೈಕೋರ್ಟ್ ಇದೀಗ `ಪುಷ್ಪ 2' ಸಿನಿಮಾದ ನಿರ್ಮಾಪಕರಿಗೆ ರಿಲೀಫ್ ದೊರೆತಿದ್ದು, ಸಿನಿಮಾದ ನಿರ್ಮಾಪಕರನ್ನು ಬಂಧಿಸದಂತೆ ಸೂಚಿಸಿದೆ. ಪ್ರಕರಣದ ಕುರಿತಾಗಿ ದಾಖಲಾಗಿದ್ದ ಎಫ್‍ಐಆರ್‍ನಲ್ಲಿ ನಿರ್ಮಾಪಕರ ಹೆಸರನ್ನೂ ಸಹ ಸೇರಿಸಿದ್ದ ಕಾರಣ ನಿರ್ಮಾಪಕರು ತೆಲಂಗಾಣ ಹೈಕೋರ್ಟ್‍ಗೆ ಮನವಿ ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ವಾದ ಮಂಡಿಸಿದ ನಿರ್ಮಾಪಕರ ಪರ ವಕೀಲರು, `ನಿರ್ಮಾಪಕರು ಮೊದಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಲ್ಲದೆ ಚಿತ್ರಮಂದಿರಗಳ ಬಳಿ ನಡೆವ ಯಾವುದೇ ಘಟನೆಗೆ ಅವರು ಕಾರಣಕರ್ತರಲ್ಲ' ಎಂದು ವಾದಿಸಿದರು. ವಾದ ಮನ್ನಿಸಿದ ನ್ಯಾಯಮೂರ್ತಿಗಳು ನಿರ್ಮಾಪಕರನ್ನು ಬಂಧಿಸದಂತೆ ಸೂಚಿಸಿದ್ದಾರೆ.ಕಾನೂನು ಸುವ್ಯವಸ್ಥೆಗೆ ನಿರ್ಮಾಪಕರು ಹೇಗೆ ಜವಾಬ್ದಾರರಾಗುತ್ತಾರೆ ಎಂದು ಪ್ರಶ್ನೆ ಮಾಡಿರುವ ಹೈಕೋರ್ಟ್, ನಿರ್ಮಾಪಕರನ್ನು ಬಂಧಿಸದಂತೆ ಪೊಲೀಸರಿಗೆ ಸೂಚಿಸಿರುವುದು ಮಾತ್ರವೇ ಅಲ್ಲದೆ, ಎರಡು ವಾರಗಳ ಕಾಲಾವಕಾಶ ನೀಡಿ, ಪ್ರಕರಣದಲ್ಲಿ ಆರೋಪಿಗಳನ್ನು ಸರಿಯಾಗಿ ಗುರುತಿಸಿ ಹೊಸದಾಗಿ ಪಿಟಿಷನ್ ಸಲ್ಲಿಸುವಂತೆ ಹೇಳಿದೆ.

ಅಲ್ಲು ಅರ್ಜುನ್‍ಗೆ ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಮಂಜೂರಾಗಿದ್ದು, ರೆಗ್ಯುಲರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಇಂದು (ಜನವರಿ 03) ವಿಚಾರಣೆ ನಡೆಯಲಿದೆ. ಈ ಹಿಂದೆಯೂ ಒಂದು ಬಾರಿ ವಿಚಾರಣೆ ನಡೆದಿದ್ದು, ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು. ಇಂದು ಅಲ್ಲು ಅರ್ಜುನ್ ಜಾಮೀನಿನ ಆದೇಶ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು