LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಇಂದು ಗವಿಮಠ ರಥೋತ್ಸವ: ಜಾತ್ರೆ ಪ್ರಯುಕ್ತ 3 ದಿನ ನಡೆಯಲಿವೆ ಹತ್ತಾರು ಕಾರ್ಯಕ್ರಮಗಳು

ಕೊಪ್ಪಳ: ಕೊಪ್ಪಳ  ನಗರದಲ್ಲಿರುವ ಸುಪ್ರಸಿದ್ಧ ಗವಿಮಠದ ಜಾತ್ರೆಯನ್ನು ದಕ್ಷಿಣ ಭಾರತದ ಕುಂಭಮೇಳ ಅಂತಲೇ ಕರೆಯುತ್ತಾರೆ. ಬುಧವಾರ (ಜನವರಿ 15) ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ರಥೋತ್ಸವದೊಂದಿಗೆ ಆರಂಭವಾಗಲಿದೆ. ಮುಂದಿನ 15 ದಿನಗಳ ಕಾಲ ಜಾತ್ರೆ ನಡೆಯಲಿದೆ. ಜಾತ್ರೆ ಅಂಗವಾಗಿ ಮೂರು ದಿನಗಳ ಕಾಲ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಗವಿಮಠದ ಜಾತ್ರೆ, ಕೇವಲ ಜಾತ್ರೆಯಾಗಿರದೆ, ದಾಸೋಹ, ಅನುಭವ, ಜ್ಞಾನ, ಜೀವನ ಚಿಂತನೆಯ ಪಾಠವನ್ನು ತಿಳಿಯುವ ಭಕ್ತಿ ಮತ್ತು ಜ್ಞಾನದ ಸಂಗಮವಾಗಿರುತ್ತದೆ. ಜಾತ್ರೆಗೆ ಬಂದವರು ಜ್ಞಾನದ ಬುತ್ತಿಯನ್ನು ಹೊತ್ತೋಯ್ಯಲಿ ಎಂಬುವುದು ಮಠದ ಪೀಠಾಧಿಪತಿಯಾಗಿರುವ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯವರ ಆಶಯವಾಗಿದೆ.

ಹೀಗಾಗಿ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಜಾತ್ರೆಗೆ ಆಹ್ವಾನಿಸಿ ಸತ್ಕರಿಸಿ, ಅವರ ಕಾರ್ಯವನ್ನು ಶ್ಲಾಘಿಸುವುದು ಮತ್ತು ಅವರ ಕೊಡುಗೆಯನ್ನು ಜನರಿಗೆ ತಿಳಿಸುವ ಕಾರ್ಯ ಮಠದಿಂದ ನಡೆದುಕೊಂಡು ಬಂದಿದೆ. ಜಾತ್ರೆಯ ಮೂರು ದಿನದ ಸಂಪೂರ್ಣ ಮಾಹಿತಿ ಇಲ್ಲಿದೆ.

ದಕ್ಷಿಣ ಭಾರತದ ಕುಂಭಮೇಳ ಮಹಾ ರಥೋತ್ಸವ

ಜನವರಿ 15 ರಂದು ಗವಿಮಠದ ಜಾತ್ರೆಯ ಅಂಗವಾಗಿ ಪ್ರತಿವರ್ಷ ಗವಿಸಿದ್ದೇಶ್ವರರ ಉತ್ಸವ ಮೂರ್ತಿಯನ್ನು ರಥದಲ್ಲಿ ಸ್ಥಾಪಿಸಿ ಮೆರವಣಿಗೆ ಮಾಡಲಾಗುತ್ತದೆ. ಇಂದು ಸಂಜೆ 5:30ಕ್ಕೆ ಮಠದ ಮುಂದಿರುವ ಮೈದಾನದಲ್ಲಿ, ಮಹಾ ರಥೋತ್ಸವ ನಡೆಯಲಿದೆ. ಧಾರವಾಡದ ಸುಪ್ರಸಿದ್ಧ ಹಿಂದುಸ್ಥಾನಿ ಗಾಯಕ ಪದ್ಮಶ್ರೀ ಪಂಡಿತ ಎಮ್ ವೆಂಕಟೇಶ್ ಕುಮಾರ್ ಉದ್ಘಾಟನೆ ಚಾಲನೆ ನೀಡಲಿದ್ದಾರೆ. ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.

ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಇನ್ನು ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಕೂಡಾ ಜಾತ್ರೆಯಲ್ಲಿ ಬಾಗಿಯಾಗಲಿದ್ದಾರೆ. ರಥೋತ್ಸವಕ್ಕೆ ದೇಶದ ಅನೇಕ ಕಡೆಯಿಂದ ಲಕ್ಷಾಂತರ ಭಕ್ತರು ಆಗಮಿಸಲಿದ್ದಾರೆ.

ಸಂಜೆ 6 ಗಂಟೆಗೆ ಮಠದ ಕೈಲಾಸ ಮಂಟಪದಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ಸರಿಗಮಪ ಖ್ಯಾತಿಯ ಹರ್ಷ, ಧಾರವಾಡದ ಬಸವರಾಜ್ ವಂದಲಿ, ಹುಬ್ಬಳ್ಳಿಯ ಸುಜಯಿಂದ್ರ ಕುಲಕರ್ಣಿ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಜನವರಿ 16 ರಂದು ಸಂಜೆ 6 ಗಂಟೆಗೆ ಮಠದ ಕೈಲಾಸ ಮಂಟಪದಲ್ಲಿ ಭಕ್ತಿ ಹಿತಚಿಂತನ ಸಭೆ ನೆಡಯಲಿದೆ. ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದೇವರು, ವನಬಳ್ಳಾರಿಯ ಬಸವಲಿಂಗ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಫಾರೆಸ್ಟ್ ಮ್ಯಾನ್ ಆಫ್​ ಇಂಡಿಯಾ ಖ್ಯಾತಿಯ ಅಸ್ಸಾಂನ ಜಾದವ್ ಪಾಯೆಂಗ್ ಆಗಮಿಸಲಿದ್ದಾರೆ. ಕಾರ್ಯಕ್ರಮದ ನಂತರ ಮಠದ ಆವರಣದಲ್ಲಿ ಮದ್ದು ಸುಡುವ ಕಾರ್ಯಕ್ರಮವಿದ್ದು, ಈ ಕಾರ್ಯಕ್ರಮಕ್ಕೆ ಕೂಡಾ ಅಪಾರ ಭಕ್ತರು ಸಾಕ್ಷಿಯಾಗಲಿದ್ದಾರೆ.

ಜನವರಿ 17 ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಯೋಗ ಮತ್ತು ನಿಸರ್ಗ ಚಿಕಿತ್ಸಾ ಕೇಂದ್ರ ಶಿರೂರನ ಡಾ. ಬಸವಲಿಂಗ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಕರ್ನಾಟಕ ಹೈಕೋರ್ಟ್​ನ ನ್ಯಾಯಮೂರ್ತಿಗಳಾದ ವಿ.ಶ್ರೀಶಾನಂದ್ ಸಮಾರೋಪ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದ ನಂತರ ಖ್ಯಾತ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಅವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ನಡೆಯಲಿದೆ.

ಮೂರು ದಿನಗಳ ಕಾಲ ಮಠದ ಆವರಣದಲ್ಲಿ ಭಕ್ತಿ ಹಿತಚಿಂತನಾ ಸಮಾವೇಶ, ಧಾರ್ಮಿಕ ಕಾರ್ಯಕ್ರಮಗಳು, ಅನೇಕ ಕ್ರೀಡೆಗಳು, ಪಲಫುಷ್ಟ ಪ್ರದರ್ಶನ, ಕೃಷಿ ವಸ್ತುಗಳ ಪ್ರದರ್ಶನ ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆಯಲಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು