LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mandya

ಇಂದು ಮೇಲುಕೋಟೆಯ ಚೆಲುವನಾರಾಯಣಸ್ವಾಮಿಯ ವಜ್ರ ಖಚಿತ ರಾಜಮುಡಿ ಕಿರೀಟಧಾರಣ ಮಹೋತ್ಸವ

ಮೇಲುಕೋಟೆ: ಚೆಲುವನಾರಾಯಣಸ್ವಾಮಿಗೆ ಇಂದು ನವೆಂಬರ್ ೯ರಂದು ರಾತ್ರಿ ವಜ್ರಖಚಿತ ರಾಜಮುಡಿ ಕಿರೀಟಧಾರಣ ಮಹೋತ್ಸವ ನಡೆಯಲಿದೆ. ಕಾರ್ತಿಕ ಮಾಸದ ರಾಜಮುಡಿ ಬ್ರಹ್ಮೋತ್ಸವದ ೪ನೇ ತಿರುನಾಳ್ ದಿನವಾದ ಶನಿವಾರ ರಾತ್ರಿ ಮೈಸೂರು ಮಹಾರಾಜರಾಗಿದ್ದ ರಾಜ ಒಡೆಯರ್ ಭಕ್ತಿಪೂರ್ವಕವಾಗಿ ಸಮರ್ಪಿಸಿದ ಸಿಂಹಲಾAಚನವಿರುವ ಅಪರೂಪದ ವಜ್ರಗಳಿಂದ ಕೂಡಿದ ರಾಜಮುಡಿ ಕಿರೀಟ, ರಾಜಲಾಂಛನ ಗಂಡುಬೇರುಂಡ ಪದಕ, ಹನ್ನೆರಡು ಆಳ್ವಾರುಗಳನ್ನು ಒಳಗೊಂಡ ಪದ್ಮಪೀಠ, ಶಂಕ, ಚಕ್ರ, ಗದೆ, ಶಿರಚ್ಚಕ್ರ, ಅಭಯಹಸ್ತ, ಪಾದಜೋಡಿ ಕರ್ಣಕುಂಡಲ ಸೇರಿದಂತೆ ೧೬ ಬಗೆಯ ವಜ್ರ,ಪಚ್ಚೆ,ರತ್ನ ಮುತ್ತುಗಳಿಂದ ಕೂಡಿದ ಐತಿಹಾಸಿಕಆಭರಣಗಳನ್ನುತೊಡಿಸಿ ಉತ್ಸವ ನೆರವೇರಿಸಲಾಗುತ್ತದೆ
ಸರಳ ಜಾತ್ರಾ ಮಹೋತ್ಸವ: ಮೈಸೂರು ಅರಸರ ಕುದೈವವಾದ ಮೇಲುಕೋಟೆ ಚೆಲು ವನಾರಾಯಣಸ್ವಾಮಿಗೆ ೬೦೦ವರ್ಷಗಳಿಂದ ನಡೆಯುತ್ತಾ ಬಂದಿರುವ ರಾಜಮುಡಿ ಬ್ರಹ್ಮೋತ್ಸವಕ್ಕೆ ಮೇಲುಕೋಟೆ ದೇವಾಲಯದಲ್ಲಿ ಅಗತ್ಯ ಅನುದಾನವೇ ಇಲ್ಲ. ಕಾರ್ಯನಿರ್ವಾಹಕ ಅಧಿಕಾರಿಗಳು ಉತ್ಸವದ ಆಕರ್ಷಣೆ ಹೆಚ್ಚಿಸಿ ಭಕ್ತರನ್ನು ಆಕರ್ಷಿಸಲು ಕನಿಷ್ಠ ವ್ಯವಸ್ಥೆಗಾದರೂ ಅಗತ್ಯ ಅನುದಾನ ಕೋರಿ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಿ ಧಾರ್ಮಿಕದತ್ತಿ ಇಲಾಖೆಯಿಂದ ಅನುಮೋದನೆ ಪಡೆಯದೆ ಮತ್ತು ದಾನಿಗಳಿಗೂ ಅವಕಾಶನೀಡದ ಕಾರಣ ಮಹಾರಾಜರ ಸಂಕಲ್ಪದ ಹತ್ತುದಿನಗಳ ರಾಜಮುಡಿಬ್ರಹ್ಮೋತ್ಸವ ಅತ್ಯಂತ ಸರಳ ಹಾಗೂ ಸಾಂಕೇತಿಕವಾಗಿ ನಡೆಯುತ್ತಿದೆ. ಪ್ರಚಾರದ ಕೊರತೆಯಿಂದಾಗಿ ಉತ್ಸವದಲ್ಲಿ ಪಾಲ್ಗೊಳ್ಳುವ ಭಕ್ತರ ಸಂಖ್ಯೆಯೂ ಸಹ ತೀರ ವಿರಳವಾಗಿರುತ್ತದೆ.
ರಾಜಮುಡಿಯಂದು ಚೆಲುವನಿಗೆ ತಮಿಳುನಾಡು ಸರ್ಕಾರದ ಗೌರವ ಸಮರ್ಪಣೆ: ಮೇಲುಕೋಟೆಯ ರಾಜಮುಡಿಯ ಐತಿಹಾಸಿಕ ಮಹತ್ವವನ್ನು ಗುರುತಿಸಿರುವ ತಮಿಳುನಾಡು ಸರ್ಕಾರ ರಾಮಾನುಜರಿಗೇ ಗುರುಗಳಾಗಿದ್ದ ಕಾಂಚೀಪುರAಜಿಲ್ಲೆಯ ಐತಿಹಾಸಿಕ ಎಂಬಾರ್ ಮತ್ತು ವೈಕುಂಠಪೆರುಮಾಳ್ ದೇವಾಲಯದಿಂದ ಮಾಲೆಮರ್ಯಾದೆಗಳನ್ನು ರಾಜಮುಡಿಯಂದು ಚೆಲುವನಾರಾಯಣಸ್ವಾಮಿಗೆ ಸಮರ್ಪಿಸುವ ಕೈಂಕರ್ಯವನ್ನು ಹಿರಿಯ ಅಧಿಕಾರಿಗಳು ಅರ್ಚಕರು ಇದ್ದು ಮಾಡಬೇಕು ಎಂದು ವಿಶೇಷ ಸರ್ಕಾರಿ ಆದೇಶ ನೀಡಿರುವ ಕಾರಣ ಪ್ರತಿವರ್ಷ ಮರ್ಯಾದೆ ಸಮರ್ಪಣೆಯಾಗುತ್ತಿದೆ. ಈ ವರ್ಷ ರಾಜಮುಡಿಯಂದು ತಮಿಳುನಾಡಿನ ಧಾರ್ಮಿಕದತ್ತಿ ಮತ್ತು ಪ್ರವಾಸೋಧ್ಯಮ ಇಲಾಖೆಯ ಕಾಂಚಿಪುರA ವಿಭಾಗದ ಜಂಟಿ ಆಯುಕ್ತ ಕುಮಾರದೊರೈ, ಶ್ರೀಪೆರೆಂಬೂದೂರು ರಾಮಾನುಜರ ದೇಗುಲದ ಅಧಿಕಾರಿ ರಾಜಇಲಂಪೆರುವಲುತೈ ವಿದ್ವಾಂಸ ಚಕ್ರಪಾಣಿ ಭಾಗವಹಿಸಿ ಸರ್ಕಾರದ ಗೌರವಸಮರ್ಪಣೆಮಾಡಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು