LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಇಂದು ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಬಿಡುಗಡೆ

ದುಬೈನಲ್ಲಿ ಪ್ರೀಮಿಯರ್ ಶೋ; ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆಈಗಾಗಲೇ ಟೀಸರ್, ಹಾಡುಗಳು ಮತ್ತು ಎರಡು ಟ್ರೇಲರ್ಗಳಿಂದ ಗಮನಸೆಳೆದಿರುವ ಅರುಣ್ ಅಮುಕ್ತ ರಚಿಸಿ-ನಿರ್ದೇಶಿಸಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರವು ಇದೇ ಶುಕ್ರವಾರ (ಜುಲೈ 19) ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ, ಇತ್ತೀಚೆಗೆ ದುಬೈನಲ್ಲಿ ಚಿತ್ರದ ಪ್ರೀಮಿಯರ್ ಶೋ ಆಗಿದ್ದು, ಚಿತ್ರ ನೋಡಿರುವ ಅನಿವಾಸಿ ಕನ್ನಡಿಗರು ಚಿತ್ರವನ್ನು ಮೆಚ್ಚಿಕೊಂಡಿರುವುದಷ್ಟೇ ಅಲ್ಲ, ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

ಈ ವಿಷಯವನ್ನು ಹಂಚಿಕೊಳ್ಳುವುದಕ್ಕೆ ಇತ್ತೀಚೆಗೆ ಚಿತ್ರತಂಡದವರು ಮಾಧ್ಯಮಗೋಷ್ಠಿ ಆಯೋಜಿಸಿ, ಚಿತ್ರದ ಬಗ್ಗೆ ಹಲವು ವಿಷಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಚಂದನ್ ಶೆಟ್ಟಿ, ಸುನೀಲ್ ಪುರಾಣಿಕ್, ಅರವಿಂದ್ ರಾವ್, ಪ್ರಶಾಂತ್ ಸಂಬರ್ಗಿ, ದುಬೈನಲ್ಲಿ ಚಿತ್ರ ಬಿಡುಗಡೆ ಮಾಡಿರುವ OMG Movies ನ ಮಮತಾ ಸೆಂಧಿಲ್, ಅಮರ್, ಮನೋಜ್, ಮನಸ್ವಿ ಸೇರಿದಂತೆ ಚಿತ್ರತಂಡದ ಹಲವರು ಹಾಜರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಚಂದನ್ ಶೆಟ್ಟಿ, ಇದು ಬಿಡುಗಡೆಯಾಗುತ್ತಿರುವ ನನ್ನ ಮೊದಲ ಚಿತ್ರ. ಈ ಚಿತ್ರವನ್ನು ಜನ ಒಪ್ಪುತ್ತಾರಾ ನನ್ನ ಅಭಿನಯ ಇಷ್ಟವಾಗುತ್ತದಾ ಎಂಬ ಭಯ ಇತ್ತು. ಈಗ ಒಂದು ಮಟ್ಟಕ್ಕೆ ರಿಲ್ಯಾಕ್ಸ್ ಆಗಿದ್ದೀನಿ. ಅದಕ್ಕೆ ಕಾರಣ ದುಬೈನಲ್ಲಿ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ. ಅಲ್ಲಿ ಸಾಕಷ್ಟು ಕನ್ನಡಿಗರು ಚಿತ್ರ ನೋಡಿದರು. ಅವರು ಎಲ್ಲ ಸಿನಿಮಾಗಳನ್ನು ಅಷ್ಟು ಸುಲಭವಾಗಿ ಒಪ್ಪುವುದಿಲ್ಲ. ಇಡೀ ಚಿತ್ರಮಂದಿರ ತುಂಬಿತ್ತು. ಚಿತ್ರ ಮುಗಿದ ಮೇಲೆ ಎಲ್ಲರೂ ಒಳ್ಳೆಯ ಅಭಿಪ್ರಾಯಗಳನ್ನು ಹೇಳಿದ್ದಾರೆ. ಅವರಿಗೆ ನಾನು ಸದಾ ಚಿರಋಣಿ. ಈ ತಂಡದ ಭಾಗವಾಗಿರುವುದಕ್ಕೆ ನಾನು ನಿಜಕ್ಕೂ ಅದೃಷ್ಟವಂತ ಎಂದರೆ ತಪ್ಪಿಲ್ಲ. ನಮ್ಮ ನಿರ್ಮಾಪಕರು ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದೆ, ಎಲ್ಲದಕ್ಕೂ ಬಹಳ ಸಹಕಾರ ಕೊಟ್ಟಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು