LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಇಂದು 2ನೇ ಟಿ20 ಹಣಾಹಣಿ

ಕ್ರೀಡೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಶನಿವಾರ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಈಗಾಗಲೇ ಆತಿಥೇಯ ಇಂಗ್ಲೆAಡ್ ತನ್ನ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದೆ. ಅದರಂತೆ ಎರಡನೇ ಪಂದ್ಯಕ್ಕೆ ಇಂಗ್ಲೆಂಡ್ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ. ಆದರೆ ಟೀಂ ಇಂಡಿಯಾದ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಏಕೆಂದರೆ ಮಳೆಯಿಂದಾಗಿ ಮೊದಲ ಟಿ20 ಪಂದ್ಯ ಪೂರ್ಣಗೊಳ್ಳಲಿಲ್ಲ. ಅದಾಗ್ಯೂ ಭಾರತ ತಂಡಕ್ಕೆ ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿತ್ತು. ಹೀಗಾಗಿ ಬ್ಯಾಟಿಂಗ್ ವಿಭಾಗದಲ್ಲಿ ಕಳಪೆ ಪ್ರದರ್ಶನ ನೀಡಿದ್ದವರಿಗೆ 2ನೇ ಪಂದ್ಯದಿಂದ ಗೇಟ್?ಪಾಸ್ ಸಿಗುತ್ತಾ? ಮತ್ತು ಬೆಂಚ್ ಕಾಯುತ್ತಿರುವ ವೈಭವ್?ಗೆ ಆಡುವ ಅವಕಾಶ ಸಿಗುತ್ತಾ ಎಂಬುದು ಪ್ರಶ್ನೆಯಾಗಿದೆ. ಆದರೆ ಮೇಲ್ನೋಟಕ್ಕೆ ಎರಡನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆಯಾಗುವ ಸಾಧ್ಯತೆಗಳಿಲ್ಲ. ಮೊದಲ ಟಿ20 ಪಂದ್ಯ ಸೇರಿದಂತೆ ಐರ್ಲೆಂಡ್ ವಿರುದ್ಧವೂ ರನ್ ಬರ ಎದುರಿಸಿದ್ದ ಆರಂಭಿಕ ಸಂಜು ಸ್ಯಾಮ್ಸನ್?ಗೆ ಮತ್ತೊಮ್ಮೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವ ಸಾಧ್ಯತೆಗಳಿವೆ. ಹೀಗಾಗಿ ಆರಂಭಿಕರಾಗಿ ಸಂಜು ಮತ್ತು ಅಭಿಷೇಕ್ ಮತ್ತೊಮ್ಮೆ ಇನ್ನಿಂಗ್ಸ್ ಆರಂಭಿಸಬಹುದು. ಮೂರನೇ ಕ್ರಮಾಂಕದಲ್ಲಿ ಆಡುತ್ತಿರುವ ಇಶಾನ್ ಕಿಶನ್? ಆಡಿರುವ ಮೂರು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲ. ಆದಾಗ್ಯೂ ಅವರಿಗೆ ಈ ಪಂದ್ಯದಲ್ಲಿ ಆಡುವ ಅವಕಾಶ ಸಿಗಲಿದೆ.
ಮಧ್ಯಮ ಕ್ರಮಾಂಕ ಹೀಗಿರಲಿದೆ: 4ನೇ ಕ್ರಮಾಂಕದಲ್ಲಿ ನಾಯಕ ಶ್ರೇಯಸ್ ಅಯ್ಯರ್ ಬಂದರೆ, ಐದನೇ ಕ್ರಮಾಂಕದಲ್ಲಿ ತಿಲಕ್ ವರ್ಮಾಗೆ ಅವಕಾಶ ಸಿಗಲಿದೆ. ತಿಲಕ್ ಅವರ ಸ್ಟ್ರೈಕ್ ರೇಟ್ ತಂಡಕ್ಕೆ ತಲೆನೋವು ತಂದಿದೆಯಾದರೂ ಅವರನ್ನು ಆ ಸ್ಥಾನದಲ್ಲಿ ಮುಂದವರೆಸುವುದು ಖಚಿತ. ಬೌಲಿಂಗ್ ಆಲ್‌ರೌಂಡರ್ ಆಗಿ ಶಿವಂ ದುಬೆ ಮುಂದುವರೆಯಲಿದ್ದಾರೆ. ಸ್ಪಿನ್ ಆಲ್‌ರೌಂಡರ್ ಆಗಿ ಅಕ್ಷರ್ ಪಟೇಲ್ ಆಡುವುದು ಖಚಿತ. ಯುವ ವೇಗಿ ಹರ್ಷಿತ್ ರಾಣಾ ಜೊತೆಗೆ ಅರ್ಷದೀಪ್ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ 1 ಬದಲಾವಣೆ: ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮೂವರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸಿತ್ತು. ಆದರೆ ಎರಡನೇ ಟಿ20 ಪಂದ್ಯದಲ್ಲಿ ಮೂವರು ಸ್ಪಿನ್ನರ್‌ಗಳು ಆಡುವುದು ಅನುಮಾನ ಹೀಗಾಗಿ ಸ್ಪಿನ್ನರ್ ರವಿ ಬಿಷ್ಣೋಯಿ ಬದಲಿಗೆ ಯುವ ವೇಗಿ ಪ್ರಿನ್ಸ್ ಯಾದವ್?ಗೆ ಆಯ್ಕೆ ಮಂಡಳಿ ಮಣೆ ಹಾಕಬಹುದು. ಇನ್ನು ಪೂರ್ಣ ಪ್ರಮಾಣದ ಸ್ಪಿನ್ನರ್ ಆಗಿ ವರುಣ್ ಚಕ್ರವರ್ತಿ ಆಡಲಿದ್ದಾರೆ. ಅಂದರೆ ಎರಡನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 1 ಬದಲಾವಣೆಯಾಗುವ ಸಾಧ್ಯತೆಗಳಿವೆ. ಇದರರ್ಥ ವೈಭವ್ ಸೂರ್ಯವಂಶಿ ಈ ಪಂದ್ಯದಲ್ಲೂ ಆಡುವ ಅವಕಾಶ ಪಡೆಯುವುದಿಲ್ಲ ಎನ್ನಬಹುದು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು