LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇಗ್ಗಲೂರು ಅಣೆಕಟ್ಟು ಕಟ್ಟಿಸಿದವರು ಯಾರಪ್ಪಾ: ಎಚ್.ಡಿ. ದೇವೇಗೌಡ ಪ್ರಶ್ನೆ

ಚನ್ನಪಟ್ಟಣ: ಹದಿನೇಳು ಕೆರೆಗಳಿಗೆ ನೀರು ತುಂಬಿಸಿದ್ದೇನೆ ಎಂದು ಆ ವ್ಯಕ್ತಿ ಹೇಳುತ್ತಾರೆ. ಆದರೆ, ನೀರು ತುಂಬಿಸಲು ಮೂಲ ಕಾರಣವಾದ ಇಗ್ಗಲೂರು ಅಣೆಕಟ್ಟು ಕಟ್ಟಿಸಿದವರು ಯಾರಪ್ಪಾ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಾಂಗ್ರೆಸ್ ಅಭ್ಯರ್ಥಿಯನ್ನು ನೇರವಾಗಿ ಪ್ರಶ್ನೆ ಮಾಡಿದ್ದಾರೆ.
ತಿಟ್ಟಮಾರನಹಳ್ಳಿ, ಮಾಕಳಿ, ನಾಗವಾರ, ಬೇವೂರು ಪ್ರದೇಶಗಳಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಬಿರುಸಿನ ಪ್ರಚಾರ ನಡೆಸಿದ ಅವರು, ಸಿ.ಪಿ.ಯೋಗೇಶ್ವರ್ ವಿರುದ್ಧ ಕಿಡಿಕಾರಿದರು ಅವರು.
ಯೋಗೇಶ್ವರ್ ಅವರು ನಾನು ಭಗೀರಥ ಎಂದು ಹೇಳಿಕೊಂಡು ಎರಡು ಚುನಾವಣೆ ಮಾಡಿದರು. ನಾನು ಮುಖ್ಯಮಂತ್ರಿ ಆಗಿದ್ದಾಗ ಎಂಜಿನಿಯರ್ ಗಳನ್ನು ಕರೆತಂದೆ. ಆಗ ರೂ.೧೫೦ ಕೋಟಿ ಬಿಡುಗಡೆ ಮಾಡಿದೆ. ತೆಪ್ಪದಲ್ಲಿ ಹೋಗಿ ಅಣೆಕಟ್ಟೆಯನ್ನು ಉದ್ಘಾಟನೆ ಮಾಡಿದ್ದೆ. ಅದನ್ನೆಲ್ಲವನ್ನು ತಾಲೂಕಿನ ಜನರು, ಎಂಜಿನಿಯರುಗಳು ಪ್ರತ್ಯಕ್ಷವಾಗಿ ನೋಡಿದ್ದಾರೆ. ಆಗಲೇ ನಾನು ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಿಸಿದೆ. ನನ್ನ ಬದ್ಧತೆ, ಚನ್ನಪಟ್ಟಣ, ರಾಮನಗರ ಜನರ ಉದ್ಧಾರಕ್ಕಾಗಿ ಇಗ್ಗಲೂರು ಜಲಾಶಯ ಕಟ್ಟಿಸಿದೆ. ಆಮೇಲೆ ಸದಾನಂದಗೌಡರು ಸಿಎಂ ಆಗಿದ್ದಾಗ ಹದಿನೇಳು ಕೆರೆಗಳಿಗೆ ನೀರು ತುಂಬಿಸಲು ಹಣ ಕೊಟ್ಟರು. ಅದು ಬಿಜೆಪಿ ಸರ್ಕಾರ, ಯೋಗೇಶ್ವರ್ ಮಾಡಿದ್ದು ಏನೂ ಇಲ್ಲ. ಹಾಗಾದರೆ ಈ ಯೋಗೇಶ್ವರ್ ಯಾಕೆ ಕಾಂಗ್ರೆಸ್ ಸರ್ಕಾರದಿಂದ ಈ ಕೆಲಸ ಮಾಡಿಸಲಿಲ್ಲ ಎಂದು ಮಾಜಿ ಪ್ರಧಾನಿಗಳು ಪ್ರಶ್ನಿಸಿದರು.
ಅವರು ಕೇವಲ ಬಾಯಿ ಮಾತಿನಲ್ಲಿ ಮಾತ್ರ ಭಗೀರಥ. ಕೃತಿಯಲ್ಲಿ ಅಲ್ಲ. ನಾನು ಸದಾನಂದ ಗೌಡ ಕೃತಿಯಲ್ಲಿ ಮಾಡಿ ತೋರಿಸಿದ್ದೇವೆ. ಸುಳ್ಳು ಹೇಳಿಕೊಂಡು ತಿರುಗಾಡಬಾರದು. ಅವರಿಗೆ ಎಲ್ಲಾ ಪಕ್ಷಗಳು ಆಗಿ ಹೋಗಿವೆ ಎಂದು ಮಾಜಿ ಪ್ರಧಾನಿಗಳು ಗುಡುಗಿದರು.
ಚನ್ನಪಟ್ಟಣಕ್ಕೆ ಕುಡಿಯುವ ನೀರನ್ನು ಯಾರು ಕೊಟ್ಟಿದ್ದು, ಚನ್ನಪಟ್ಟಣ, ರಾಮನಗರಕ್ಕೆ ಕೆರೆಕಾಡನಹಳ್ಳಿಯಲ್ಲಿ ಬೆಂಗಳೂರಿಗೆ ಪಂಪ್ ಮಾಡುವ ನೀರನ್ನು ನಿಮಗೆ ಕೊಟ್ಟಿದ್ದೇನೆ. ನೀರು ಕೊಟ್ಟಿರುವ ವ್ಯಕ್ತಿ ನಾನು ನಿಮ್ಮಮುಂದೆ ಜೀವಂತವಾಗಿ ಇದ್ದೇನೆ. ಒಬ್ಬ ಸಾಮಾನ್ಯ ರೈತನ ಮಗ ಏನೇನು ಮಾಡಿದ್ದಾನೆ ಅಂತಾ ಒಂದು ಪುಸ್ತಕ ಮಾಡಿದ್ದಾರೆ, ಅದನ್ನು ಓದಿ ಎಂದು ಅವರು ಮನವಿ ಮಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು