LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಇದು ಎಂಥ ಲೋಕವಯ್ಯ ಸಿನಿಮಾಗೆ ಅನಂತ್ ಸಾಥ್..ಆ.9ಕ್ಕೆ ತೆರೆಗೆ ಬರಲಿದೆ ಚಿತ್ರ

ಸಿತೇಶ್ ಸಿ ಗೋವಿಂದ್ ನಿರ್ದೇಶನದ ಇದು ಎಂಥಾ ಲೋಕವಯ್ಯ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಆಗಸ್ಟ್ 9ಕ್ಕೆ ಚಿತ್ರ ತೆರೆಗೆ ಬರುತ್ತಿದ್ದು, ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಅದರ ಭಾಗವಾಗಿ ಎಂಥ ಲೋಕವಯ್ಯ ಸಿನಿಮಾದ ಆಗಮನ ನಿನ್ನ ಆಗಮನ ಹಾಗೂ ಸಂಜೆ ವೇಳೆಗೆ ಎಂಬ ಎರಡು ಹಾಡುಗಳನ್ನು ಅನಾವರಣ ಮಾಡಲಾಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಹಿರಿಯ ನಟ ಅನಂತ್ ನಾಗ್ ಸಾಂಗ್ ರಿಲೀಸ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.ಹಿರಿಯ ನಟ ಅನಂತ್ ನಾಗ್ ಮಾತನಾಡಿ, ಇದು ಎಂಥ ಲೋಕವಯ್ಯ ನನ್ನ ಸಿನಿಮಾದ ಜನಪ್ರಿಯ ಹಾಡು. ಆ ಹಾಡಿನ ಟೈಟಲ್ ಸಿನಿಮಾವಾಗಿದೆ. ಬಹಳ ಸಂತೋಷದಿಂದ ಕಾರ್ಯಕ್ರಮಕ್ಕೆ ಬಂದಿದ್ದೇನೆ. ನಿಮ್ಮ ಬೆಂಬಲದಿಂದ ಈ ಸಿನಿಮಾ ಯಶಸ್ಸು ಗಳಿಸಲಿ, ಜನಪ್ರಿಯವಾಗಲಿ ಎಂದರು.

ನಿರ್ದೇಶಕ ಸಿತೇಶ್ ಸಿ ಗೋವಿಂದ್ ಮಾತನಾಡಿ, ಆಗಸ್ಟ್ 9ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ. ಇದು ನನ್ನ ಮೊದಲ ಪ್ರಯತ್ನ. ಈ ಚಿತ್ರದ ಮೂಲಕ ನಿರ್ದೇಶಕನಾಗಿ ಚಿತ್ರಕ್ಕೆ ಎಂಟ್ರಿ ಕೊಡುತ್ತಿದ್ದೇನೆ. ಕಡಿಮೆ ಸಮಯದಲ್ಲಿ 28 ಕಲಾವಿದರು ನಟಿಸಿರುವ ಚಿತ್ರ ಇದು. ಫ್ಯಾಷನೇಟೆಡ್ ಆಗಿ ಸಿನಿಮಾ ಮಾಡಿದ್ದೇನೆ ಎಂದರು.

ಆಗಮನ ನಿನ್ನ ಆಗಮನ ಹಾಡಿಗೆ ರಾಹುಲ್ ಹಜಾರೆ ಹಾಗೂ ದೀಪಾ ಸಿತೇಸ್ ಸಾಹಿತ್ಯ ಬರೆದಿದ್ದು, ರಿತ್ವಿಕ್ ಎಸ್ ಚಂದ್ , ಭದ್ರ ರಾಜಿನ್ ಧ್ವನಿಯಾಗಿದ್ದಾರೆ. ಸಂಜೆ ವೇಳೆಗೆ ಹಾಡಿಗೆ ಸಜೀವ್ ಸ್ಟಾನ್ಲಿ ಕಂಠ ಕುಣಿಸಿದ್ದು, ಕೀರ್ತನ್ ಭಂಡಾರಿ ಹಾಗೂ ಪುಷ್ಪರಾಜ್ ಗುಂಡ್ಯ ಪದ ಪೆÇಣಿಸಿದ್ದಾರೆ. ಈ ಎರಡು ಗೀತೆಗೆ ರಿತ್ವಿಕ್ ಚಂದ್ ಸಂಗೀತ ಒದಗಿಸಿದ್ದಾರೆ. ಅನುರಾಜ್ ಕಕ್ಯಪದವ್, ಮೈತ್ರಿ, ಮೈಮ್ ರಾಮದಾಸ್, ಗೋಪಿನಾಥ್ ಭಟ್, ಸುಕನ್ಯಾ, ವಿಶ್ವನಾಥ್ ಅಸೈಗೋಳಿ, ಚಂದ್ರಹಾಸ ಉಳ್ಳಾಲ್, ಅರ್ಜುನ್ ಕಜೆ, ಪ್ರೀತಿ ಮುತ್ತಪ್ಪ, ದೀಪಕ್ ರೈ, ಸಂತೋಷ್ ಶೆಣೈ, ಸುಧೀರ್ ರಾಜ್, ಪ್ರಶಾಂತ್ ಜೋಗಿ, ಹರೀಶ್ ಬಂಗೇರ, ಪ್ರಕಾಶ್ ತುಮ್ಮಿನಾಡ್, ಸೇರಿ ಇನ್ನೂ ಹಲವು ಚಿತ್ರದ ತಾರಾಬಳಗದಲ್ಲಿದ್ದಾರೆ.

ಕರ್ನಾಟಕ ಮತ್ತು ಕೇರಳ ಗಡಿಯಲ್ಲಿನ ಹಳ್ಳಿಗಳಲ್ಲಿ ನಡೆಯುವ ಕತೆಯೇ ಇದು ಎಂಥಾ ಲೋಕವಯ್ಯ ಸಿನಿಮಾ. ಈ ಕನ್ನಡ ಚಿತ್ರವನ್ನು ಖ್ಯಾತ ಮಲಯಾಳಂ ನಿರ್ದೇಶಕ ಜಿಯೋ ಬೇಬಿ ಪ್ರಸೆಂಟ್ ಮಾಡುತ್ತಿದ್ದಾರೆ. ಕಡ್ಲೆಕಾಯಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಮಂಗಲ್ಪಾಡಿ ನರೇಶ್ ನಾಮದೇವ್ ಶೆಣೈ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು