LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇಬ್ಬರು ಯುವಕರನ್ನು 300 ಮೀಟರ್ ವರೆಗೆ ಎಳೆದೊಯ್ದ ಟ್ರಕ್ ಚಾಲಕ

ಆಗ್ರಾ: ಟ್ರಕ್ ಚಾಲಕನೊಬ್ಬ ತನ್ನ ವಾಹನದಡಿಯಲ್ಲಿ ಇಬ್ಬರನ್ನು ಸುಮಾರು 300 ಮೀಟರ್ ವರೆಗೆ ಎಳೆದೊಯ್ದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಈ ಅಮಾನುಷ ಕೃತ್ಯವನ್ನು ಕಂಡ ಸ್ಥಳೀಯರು ಚಾಲಕನಿಗೆ ಬಲವಂತವಾಗಿ ಟ್ರಕ್ ನಿಲ್ಲಿಸಿ, ವಾಹನದ ಕೆಳಗಿದ್ದವರನ್ನು ಹೊರತೆಗೆದರು. ನಂತರ ಸ್ಥಳಕ್ಕೆ ಬಂದ ಪೊಲೀಸರು ಚಾಲಕನನ್ನು ಬಂಧಿಸಿ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.

ಆಗ್ರಾದ ನುನ್ಹೈ ನಿವಾಸಿಗಳಾಗಿರುವ ಇಬ್ಬರು ವ್ಯಕ್ತಿಗಳು ಮೊನ್ನೆ ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ವಾಟರ್‌ವರ್ಕ್ಸ್‌ನಿಂದ ರಾಮ್‌ಬಾಗ್ ಕಡೆಗೆ ಹೋಗುತ್ತಿದ್ದಾಗ ಅಪಘಾತಕ್ಕೀಡಾಗಿದ್ದಾರೆ. ಚಾಲಕ, ಟ್ರಕ್ ನ್ನು ನಿಲ್ಲಿಸುವ ಬದಲು ವೇಗವಾಗಿ ಇಬ್ಬರನ್ನೂ ಕೆಳಗೆ ಸಿಲುಕಿಸಿ ಎಳೆದುಕೊಂಡು ಹೋಗಿದ್ದಾನೆ.

ಇಬ್ಬರು ಯುವಕರನ್ನು ಕ್ಯಾಂಟರ್ ಚಾಲಕ ಸುಮಾರು 300 ಮೀಟರ್ ಎಳೆದೊಯ್ದಿದ್ದಾನೆ. ನಂತರ ಕೆಲವು ನಿವಾಸಿಗಳು ಚಾಲಕನನ್ನು ಬಲವಂತವಾಗಿ ನಿಲ್ಲಿಸಿ ಯುವಕರನ್ನು ರಕ್ಷಿಸಿದರು ಎಂದು ಛಟ್ಟಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪ್ರಮೋದ್ ಕುಮಾರ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ತೀವ್ರ ಗಾಯಗೊಂಡ ಯುವಕರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದು, ಇನ್ನೂ ಚಿಕಿತ್ಸೆ ನೀಡಲಾಗುತ್ತಿದೆ, ಅವರ ದೇಹಸ್ಥಿತಿ ಸ್ಥಿರವಾಗಿದೆ. ಯುವಕರು ಆಗ್ರಾ ಮೂಲದವರಾಗಿದ್ದು, ಘಟನೆಯ ನಂತರ ಕ್ಯಾಂಟರ್ ಚಾಲಕನನ್ನು ಬಂಧಿಸಿ ಕ್ಯಾಂಟರ್ ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು