ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಕಿಡಿಕಾರಿದ್ದಾರೆ.
ನಗರದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈ ಕುಮಾರಸ್ವಾಮಿಯನ್ನು ಯಾರೂ ಮುಟ್ಟಲು ಆಗಲ್ಲ? ಎಂದು ಗುಡುಗಿರುವ ಅವರು, ನಿನ್ನೆ ರಾಜ್ಯೋತ್ಸವ ಆಚರಣೆಯ ಬಳಿಕ ಎಲ್ಲಿ ಸಭೆ ನಡೆಸಲಾಗಿದೆ ಎಂಬುದು ತಮಗೆ ಚೆನ್ನಾಗಿ ತಿಳಿದಿದೆ ಎಂದು ಎಚ್ಚರಿಕೆ ನೀಡಿದ್ದಾರೆ.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೃಪಾ ಆಳ್ವಾ ಹಾಗೂ ವಿನೋದ್ ಕುಮಾರ್ ಮತ್ತು ಪ್ರಶಾಂತ್ ಕುಮಾರ್ ಅವರು ನಿರೀಕ್ಷಣಾ ಜಾಮೀನು ಕೋರಿ 66ನೇ ಸಿಸಿಹೆಚ್ (ಅಅಊ) ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗಳ ಕುರಿತು ಹಾಗೂ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೋರ್ಟ್ ಇಂದು ಮಹತ್ವದ ತೀರ್ಮಾನ ಕೈಗೊಂಡು ಆದೇಶ ಹೊರಡಿಸಲಿದೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ ಅವರಿಗೆ ಸಿಸಿಬಿ ಪೊಲೀಸರು ಯಾವ ಆಧಾರದ ಮೇಲೆ ಕ್ಲೀನ್‌ಚಿಟ್ ನೀಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಪ್ರಕರಣದಲ್ಲಿ ತಮ್ಮ ಪಕ್ಷದವರ ಪಾತ್ರವಿದೆ ಎಂದು ಯತೀಂದ್ರ ಹಾಗೂ ಸಚಿವರು ಆರೋಪಿಸುತ್ತಿದ್ದು, ಸರ್ಕಾರವನ್ನು ಉಳಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ತಮ್ಮ ದೆಹಲಿ ನಿವಾಸದ ಮೇಲಿನ ದಾಳಿ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದವರು ಯಾರು ಎಂದು ಪ್ರಶ್ನಿಸಿದ ಅವರು, ಇದು ಹಳ್ಳ ಹಿಡಿಸುವ ಕೇಸ್ ಎಂದು ಆಕ್ರೋಶ ವ್ಯಕ್ತಪಡಿಸಿದರು.