LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಈ ಪಾದ ಪುಣ್ಯಪಾದ" ಚಿತ್ರದ ಪೋಸ್ಟರ್ ಬಿಡುಗಡೆ

ದಾರಿ ಯಾವುದಯ್ಯ ವೈಕುಂಠಕ್ಕೆ ಚಿತ್ರದ ಖ್ಯಾತಿಯ ನಿರ್ದೇಶಕರಾದ ಸಿದ್ದು ಪೂರ್ಣಚಂದ್ರರವರು ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಮತ್ತೊಂದು ಚಿತ್ರ"ಈ ಪಾದ ಪುಣ್ಯಪಾದ".ಇತ್ತೀಚಿಗೆ ಈ ಚಿತ್ರದ ಮೊದಲಪೋಸ್ಟರ್ ಅನ್ನು ರೋರಿಂಗ್ ಸ್ಟಾರ್ ಶ್ರೀ ಮುರಳಿ ಅವರು ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.

ಇದೊಂದು ಆನೆ ಕಾಲು ರೋಗಿಯ ಕಥೆಯಾಧಾರಿತ ಚಿತ್ರವಾಗಿರುವುದರಿಂದ ಪ್ರತಿಯೊಬ್ಬ ಪ್ರೇಕ್ಷಕನಿಗೂ ಕೂಡ ಹೊಸ ಆಯಾಮದಲ್ಲಿ ಈ ಚಿತ್ರ ಪರಿಣಾಮ ಬೀರಬಹುದು ಎಂಬುದು ನಿರ್ದೇಶಕರ ಆಶಯ. ಪ್ರತಿಯೊಬ್ಬ ಮನುಷ್ಯನಿಗೂ ಒಂದಲ್ಲ ಒಂದು ರೀತಿಯ ಖಾಯಿಲೆಗಳು ಸಂಭವಿಸಿದಾಗ ಆ ರೋಗಕ್ಕಿಂತ ಮಾನಸಿಕವಾಗಿಯೇ ಯಾತನೆ ಪಡುವುದು ಜಾಸ್ತಿ ಆಗಿರುತ್ತದೆ. ಯಾವುದೇ ರೋಗ ಬಂದರೂ ಕೂಡ ನಾವು ಎದೆಗುಂದದೆ ತಾಳ್ಮೆಯಿಂದ ಅದನ್ನು ಎದುರಿಸಬೇಕು ಎಂಬುದೇ ಈ ಚಿತ್ರದ ಕಥೆಯಾಗಿದೆ.

ಈ ಕಥೆಯನ್ನು ಹಲವು ವರ್ಷಗಳಿಂದ ಅಧ್ಯಯನ ಮಾಡಿ ಒಂದು ಚಿತ್ರಕಥೆಯ ರೂಪು ರೇಷೆಗಳನ್ನು ಸಿದ್ಧಪಡಿಸಿ ಆನಂತರ ಇದನ್ನು ಚಿತ್ರವಾಗಿಸಿದ್ದಾರೆ. ಯಾವುದೇ ರೋಗ ಬಂದಿರುವ ವ್ಯಕ್ತಿಯನ್ನು ಯಾವ ರೀತಿ ಪ್ರೀತಿಯಿಂದ ನೋಡಿಕೊಳ್ಳಬೇಕು, ಸಾಂತ್ವನ ಹೇಳಬೇಕು ಎಂಬುದು ಈ ಚಿತ್ರದ ಮುಖಾಂತರ ಕಾಣಿಸುತ್ತದೆ. ಜೊತೆಗೆ ಸಾಮಾಜಿಕ ಪರಿಣಾಮ ಬೀರುವಂತಹ ಚಿತ್ರಗಳು ಇತ್ತೀಚೆಗೆ ಕಡಿಮೆಯಾಗಿರುವುದರಿಂದ ಇಂತಹ ಚಿತ್ರಕ್ಕೆ  ಪ್ರೋತ್ಸಾಹ ಕೊಡಬೇಕೆಂಬುದು ಇಡೀ ಚಿತ್ರತಂಡದ ಆಶಯ ಆಗಿದೆ.

ಆ ಕಾರಣಕ್ಕಾಗಿಯೇ ಶ್ರೀಮುರಳಿ ಅವರು ಈ ನಿಟ್ಟಿನಲ್ಲಾದರೂ ಹೊಸಬರಿಗೆ  ಪ್ರೊತ್ಸಾಹ ನೀಡಬೇಕು ಹೊಸಬರಿಗೆ ದಾರಿಯಾಗಬೇಕು
ಹಾಗಾಗಿ ನಾನು ಈ ಚಿತ್ರದ ಪೋಸ್ಟರ್ ಅನ್ನು ಬಿಡುಗಡೆಗೊಳಿಸುತ್ತಾ ಇದ್ದೀನಿ. ನೀವು ಕೂಡ ಈ ಚಿತ್ರವನ್ನು ನೋಡಬೇಕು ಅನ್ನುವ ಅವರ ಮನದಾಳದ ಮಾತುಗಳನ್ನು ಹಂಚಿಕೊಂಡರು.

ಈ ಚಿತ್ರಕ್ಕೆ ನಾಯಕ ನಟರಾಗಿ ಆಟೋ ನಾಗರಾಜ್ ರವರು ಈ ಪಾತ್ರವನ್ನು ನಿಭಾಯಿಸಿದ್ದಾರೆ. ಈ ಹಿಂದೆ ಅವರು ಆಟೋ ಪ್ರಮೋಷನ್ ಅನ್ನು ಕಳೆದ 18 ವರ್ಷಗಳಿಂದಲೂ ಮಾಡಿದಂತವರು, ಅವರು ಮೊದಲ ಬಾರಿಗೆ ನಾಯಕ ನಟರಾಗಿ ಈ ಪಾತ್ರವನ್ನು ನಿರ್ವಹಿಸಿದ್ದಾರೆ. ನಂತರ ರಶ್ಮಿ, ಚೈತ್ರ, ಪ್ರಮೀಳಾ ಸುಬ್ರಹ್ಮಣ್ಯ, ಮನೋಜ್, ಹರೀಶ್ ಕುಂದೂರು, ಬೇಬಿ ರಿದಿ, ಪವಿತ್ರ, ಬಾಲರಾಜ್ ವಾಡಿ, ರೋಹಿಣಿ, ಶಂಕರ್ ಭಟ್, ಪ್ರೀತಿ, ಮೀಸೆ ಮೂರ್ತಿ ಇನ್ನೂ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಸಂಗೀತ ಮತ್ತು ಹಿನ್ನೆಲೆ ಸಂಗೀತವನ್ನು ಅನಂತ ಆರ್ಯನ್ ರವರು ನೀಡಿದ್ದಾರೆ. ಕಲೆ ಬಸವರಾಜ್ ಆಚಾರ್, ವಸ್ತ್ರಲಂಕಾರ ನಾಗರತ್ನ ಕೆ ಎಚ್, ಶಬ್ದ ವಿನ್ಯಾಸ ಶ್ರೀರಾಮ್, ಕಲರಿಂಗ್ ಗಗನ್ ಆರ್, ಸಂಕಲನ ದೀಪು ಸಿ ಎಸ್ ನಿರ್ವಹಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು