LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಉಗ್ರನನ್ನು ಹತ್ಯೆಗೈದ ಭದ್ರತಾ ಪಡೆಗಳು

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಶ್ರೀನಗರದ ದಚಿಗಂ ಅರಣ್ಯ ಪ್ರದೇಶದಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ಗುಪ್ತಚರ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ದಚಿಗಮ್‌ನ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ತಿಳಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸೇನೆ ಉತ್ತರ ಕಮಾಂಡರ್ ಮಾಹಿತಿ ಹಂಚಿಕೊಂಡಿದ್ದು, ಕ್ಷೀಪ್ರ ಕಾರ್ಯಾಚರಣೆ ನಡೆಸಿ, ಓರ್ವ ಉಗ್ರನನ್ನು ಹತ್ಯೆಗೈದಿದ್ದಕ್ಕೆ ಚಿನಾರ್ ವಾರಿಯರ್ಸ್ ಮತ್ತು ಜಮ್ಮು- ಕಾಶ್ಮೀರ ಪೊಲೀಸರ ದಕ್ಷತೆಯನ್ನು ಕೊಂಡಾಡಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನೂ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಶ್ರೀನಗರದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀನಗರದ ಹೊರವಲಯದಲ್ಲಿರುವ ದಚಿಗಮ್ ರಾಷ್ಟ್ರೀಯ ಉದ್ಯಾನವನವು ಸುಮಾರು 141 ಚದರ ಕಿ. ಮೀ ನಷ್ಟು ವಿಸ್ತೀರ್ಣವನ್ನು ಹೊಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು