LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಉತ್ತಮ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಅಜೀಂಪ್ರೇಮ್ ಜಿ ಫೌಂಡೇಷನ್ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಬೆಂಗಳೂರು: ಮಾನಸಿಕ ಆರೋಗ್ಯ ಮತ್ತು ಉತ್ತಮ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಉಪಹಾರ ಇಲ್ಲದೆ ಶಾಲೆಗೆ ಬಂದು,ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನವೂ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ ಎಂದರು.

ವೈಜ್ಞಾನಿಕವಾಗಿ, ವೈಚಾರಿಕವಾಗಿ ನೀವು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗುತ್ತೀರಿ ಎಂದು ಶಾಲಾ ಮಕ್ಕಳಿಗೆ ಕರೆ ನೀಡಿದರು.
ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೊ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು