LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಉತ್ತರ ಪ್ರದೇಶದಲ್ಲಿ ಮೂರು ಪ್ರತ್ಯೇಕ ಅಪಘಾತದಲ್ಲಿ 18 ಮಂದಿ ದುರ್ಮರಣ!

ಉತ್ತರ ಪ್ರದೇಶದಲ್ಲಿ ಮೂರು ಪ್ರತ್ಯೇಕ ಅಪಘಾತಗಳಲ್ಲಿ 18ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಶುಕ್ರವಾರ (ಡಿಸೆಂಬರ್ 6) ಮಧ್ಯಾಹ್ನ ಕನೌಜ್ ಬಳಿ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ನಲ್ಲಿ ಹೈಸ್ಪೀಡ್ ಬಸ್ ನೀರಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದ್ದು ಪರಿಣಾಮ 8 ಮಂದಿ ಸಾವನ್ನಪ್ಪಿದ್ದಾರೆ. ಚಿತ್ರಕೂಟ ಮತ್ತು ಪಿಲಿಭಿತಿಯಲ್ಲಿ ಕಾರು ಅಪಘಾತಗಳು ಸಂಭವಿಸಿದ್ದು, 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಆಗ್ರಾ ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಕನ್ನೌಜ್ ಜಿಲ್ಲೆಯ ಸೌರಿಖ್‌ನ ಸಕ್ರವಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಪ್ರಯಾಣಿಕರಿಂದ ತುಂಬಿದ್ದ ಡಬಲ್ ಡೆಕ್ಕರ್ ಬಸ್ ಹಠಾತ್ ನಿಯಂತ್ರಣ ತಪ್ಪಿ ಮುಂದೆ ಬರುತ್ತಿದ್ದ ನೀರಿನ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಡಿವೈಡರ್ ಮಧ್ಯೆ ನೆಟ್ಟಿರುವ ಗಿಡಗಳಿಗೆ ಟ್ಯಾಂಕರ್ ಮೂಲಕ ನೀರಾಯಿಸುತ್ತಿದ್ದರು ಎಂದು ಗಾಯಗೊಂಡ ಪ್ರಯಾಣಿಕರು ತಿಳಿಸಿದರು. ಚಾಲಕನಿಗೆ ಇದು ತಿಳಿಯದೆ ಹಿಂದಿನಿಂದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ಬಳಿಕ ಅಲ್ಲಿ ನೆರೆದಿದ್ದ ಜನರು ಬಸ್ಸಿನ ಗಾಜು ಒಡೆದು ಪ್ರಯಾಣಿಕರನ್ನು ಹೊರತೆಗೆದು ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿದರು.

11 ಗಂಟೆಗೆ ಲಕ್ನೋದಿಂದ ಬಸ್ ಹೊರಟಿತ್ತು ಎಂದು ಗಾಯಗೊಂಡ ಪ್ರಯಾಣಿಕರು ತಿಳಿಸಿದ್ದಾರೆ. ಎಕ್ಸ್ ಪ್ರೆಸ್ ವೇನಲ್ಲಿ ಗಂಟೆಗೆ 120-140 ಕಿ.ಮೀ ವೇಗದಲ್ಲಿ ವಾಹನಗಳನ್ನು ಓಡಿಸಲಾಗುತ್ತದೆ. ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ನಂತರ ಇನ್ನೊಂದು ಬದಿಗೆ ಪಲ್ಟಿಯಾಗಿದೆ. ಅಪಘಾತದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 38 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉತ್ತರ ಪ್ರದೇಶದ ಚಿತ್ರಕೂಟ ಮತ್ತು ಪಿಲಿಭಿತ್‌ನಲ್ಲಿ ಎರಡು ಗಂಭೀರ ಅಪಘಾತಗಳು ಸಂಭವಿಸಿವೆ. ಎರಡರಲ್ಲೂ ತಲಾ ಆರು ಮಂದಿ ಸಾವನ್ನಪ್ಪಿದ್ದು 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಚಿತ್ರಕೂಟದಲ್ಲಿ, ಚಿತಾಭಸ್ಮವನ್ನು ಬಿಟ್ಟು ಪ್ರಯಾಗರಾಜ್‌ನಿಂದ ಹಿಂತಿರುಗುತ್ತಿದ್ದ ಛತ್ತರ್‌ಪುರ ಕುಟುಂಬದ 6 ಜನರು ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ ಉತ್ತರಾಖಂಡದ ಕುಟುಂಬವೊಂದು ಮಗಳ ನಾಲ್ಕನೇ ಹುಟ್ಟುಹಬ್ಬವನ್ನು ಆಚರಿಸಿ ಪಿಲಿಭಿತ್ತಿಯಿಂದ ಹಿಂದಿರುಗುತ್ತಿದ್ದ ಕಾರು ಹಳ್ಳಕ್ಕೆ ಬಿದ್ದಿತ್ತು. ಈ ಅಪಘಾತದಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು