LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

 ಉದಯಪುರ ಅರಮನೆ ಪ್ರವೇಶಕ್ಕಾಗಿ ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ! ಪರಿಸ್ಥಿತಿ ಉದ್ವಿಗ್ನ

ಜೈಪುರ: ಉದಯಪುರದ ಅರಮನೆ ಪ್ರವೇಶ ವಿಚಾರದಲ್ಲಿ ರಾಜಮನೆತದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮೇವಾರದ 77ನೇ ಮಹಾರಾಣಾ ಆಗಿ ಪಟ್ಟಾಭಿಷೇಕಗೊಂಡ ಬಿಜೆಪಿ ಶಾಸಕ ವಿಶ್ವರಾಜ್ ಸಿಂಗ್ ಮತ್ತು ಅವರ ಬೆಂಬಲಿಗರಿಗೆ ಉದಯಪುರ ನಗರ ಅರಮನೆಗೆ ಪ್ರವೇಶ ನಿರಾಕರಿಸಲಾಗಿದೆ. ಇದರಿಂದಾಗಿ ರಾಜಮನೆತನದ ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆದಿದ್ದು, ಹಿಂಸಾಚಾರ ನಡೆದಿದೆ.

ರಾಜಮನೆತನದ ವಿಧಿ ವಿಧಾನಗಳ ಪ್ರಕಾರ ಹೊಸದಾಗಿ ಪಟ್ಟ ಅಲಂಕರಿಸಿದ ಮುಖ್ಯಸ್ಥರು ಉದಯಪುರದ ಏಕಲಿಂಗನಾಥ ದೇವಾಲಯ ಮತ್ತು ನಗರದ ಅರಮನೆಗೆ ಭೇಟಿ ನೀಡುವುದು ವಾಡಿಕೆ. ಆದರೆ, ಮಹೇಂದ್ರ ಸಿಂಗ್ ಮೇವಾರ್ ಅವರ ಕಿರಿಯ ಸಹೋದರ ಅರವಿಂದ್ ಸಿಂಗ್ ಮೇವಾರ್ ನಡುವಿನ ದ್ವೇಷದ ಕಾರಣದಿಂದ ವಿಶ್ವರಾಜ್ ಅವರಿಗೆ ಉದಯಪುರ ಅರಮನೆಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ತಿಳಿದುಬಂದಿದೆ.

ಚಿತ್ತೋರ್ ಗಢ ಕೋಟೆಯಲ್ಲಿ ನಡೆದ ಸಮಾರಂಭದ ಬಳಿಕ ವಿಶ್ವರಾಜ್ ಸಿಂಗ್ ಹಾಗೂ ಅವರ ಬೆಂಬಲಿಗರು ಅರಮನೆಗೆ ಭೇಟಿ ನೀಡಲು ಉದಯಪುರಕ್ಕೆ ತೆರಳಿದ್ದರು. ಈ ವೇಳೆ ಅವರನ್ನು ಪೊಲೀಸರು ತಡೆದಿದ್ದು, ಮಾತಿನ ಚಕಮಕಿ ನಡೆದಿದೆ. ಬೆಂಬಲಿಗರು ಬ್ಯಾರಿಗೇಡ್ ಧ್ವಂಸಗೊಳಿಸಲು ಪ್ರಯತ್ನಿಸಿದ್ದು, ಸ್ಥಳದಲ್ಲಿ ಉದ್ನಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಘಟನೆ ಕುರಿತು ಪ್ರತಿಕ್ರಿಯಿಸಿದ ಉದಯಪುರ ಜಿಲ್ಲಾಧಿಕಾರಿ ಅರವಿಂದ್ ಕುಮಾರ್ ಪೋಸ್ವಾಲ್, ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ, ಅರಮನೆ ಪ್ರತಿನಿಧಿಗಳು ಮತ್ತು ಸಮಾಜದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಯುತ್ತಿದೆ, ಕೆಲವು ವಿಷಯಗಳ ಬಗ್ಗೆ ಒಪ್ಪಿಕೊಂಡಿದ್ದೇವೆ, ಇನ್ನೂ ಕೆಲವು ವಿಷಯಗಳ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು