ಉಡುಪಿ: ಮುದರಂಗಡಿಯಲ್ಲಿ ನಡೆದಿದ್ದ ಉದ್ಯಮಿ ಡೇವಿಡ್ ಡಿಸೋಜಾ ಹತ್ಯೆ ಕೇಸ್‌ನ ಮತ್ತೊಬ್ಬ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ.
ಆರೋಪಿ ಅನೋಜ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು, ಆತನ ಕಾಲಿಗೆ ಗುಂಡೇಟು ನೀಡಲಾಗಿದೆ. ಇಂದು (ಆ.24) ಮುಂಜಾನೆ ಹೆಬ್ರಿ ಬಳಿ ಆರೋಪಿಯನ್ನು ಕರೆದೊಯ್ಯುವಾಗ ಮೂತ್ರ ವಿಸರ್ಜನೆಗೆ ವಾಹನ ನಿಲ್ಲಿಸುವಂತೆ ಹೇಳಿದ್ದ. ವಾಹನ ನಿಲ್ಲಿಸಿ ಕೆಳಗಿಳಿಸಿದಾಗ ಕಾನ್ಸ್ಟೇಬಲ್‌ಗಳ ಮೇಲೆ ಹಲ್ಲೆ ಮಾಡಿ ಆತ ಪರಾರಿಯಾ ಗಲು ಯತ್ನಿಸಿದ್ದಾನೆ. ಆಗ ಪೊಲೀಸರು ಆತನ ಕಾಲಿಗೆ ಗುಂಡೇಟು ನೀಡಿದ್ದಾರೆ. ಗಾಯಗೊಂಡಿದ್ದ ಆರೋಪಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಲ್ಲಿ ಹೆಡ್ ಕಾನ್ಸ್ಟೇಬಲ್ ಮೋಹನ್, ಕಾನ್ಸ್ಟೇಬಲ್ ಶ್ಯಾಮ್ ಗಾಯಗೊಂಡಿದ್ದಾರೆ. ಆರೋಪಿ ಅನೋಜ್ 4 ರಾಜ್ಯಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಆಗಿದ್ದಾನೆ.