`
ಬೆಂಗಳೂರು: ರಾಜ್ಯದಲ್ಲಿ ಉಪ್ಪು ಮತ್ತು ಸಕ್ಕರೆಯ ಅತಿಯಾದ ಬಳಕೆ ನಿಯಂತ್ರಿಸಲು ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಕ್ಕರೆ ಹಾಗೂ ಉಪ್ಪಿನ ಅನಿಯಂತ್ರಿತ ಬಳಕೆಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು, ಈ ಕುರಿತು ಆರೋಗ್ಯ ಸಚಿವ ಯು.ಟಿ.ಖಾದರ್ ಬೆಂಗಳೂರಿನಲ್ಲಿ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಅತಿಯಾದ ಉಪ್ಪು ಮತ್ತು ಸಕ್ಕರೆ ಸೇವನೆಯಿಂದಾಗಿ ಜನರ ಆರೋಗ್ಯದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.ಹಿಂದೆ ಸರ್ಕಾರದಿಂದ ಸಬ್ಸಿಡಿ ದರದಲ್ಲಿ ಸಕ್ಕರೆ ಮತ್ತು ಉಪ್ಪನ್ನು ವಿತರಿಸಲಾಗುತ್ತಿತ್ತು. ಆದರೆ, ಇವುಗಳ ಅತಿಯಾದ ಬಳಕೆದಿಂದ ಆರೋಗ್ಯ ಸಂಬAಧಿ ಸಮಸ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಸಬ್ಸಿಡಿ ವಿತರಣೆಯನ್ನು ಈಗ ನಿಲ್ಲಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಇದರೊಂದಿಗೆ ಸಾರ್ವಜನಿಕರ ದೈಹಿಕ ಆರೋಗ್ಯಕ್ಕೆ ಪೂರಕವಾಗುವಂತಹ ಮತ್ತು ಹಾನಿಕಾರಕವಲ್ಲದ ರೀತಿಯ ಉಪ್ಪನ್ನು ಮಾತ್ರ ತಯಾರಿಸಿ ಮಾರಾಟ ಮಾಡುವಂತೆ ಉತ್ಪಾದಕರಿಗೆ ಆರೋಗ್ಯ ಇಲಾಖೆ ಸೂಕ್ತ ಸೂಚನೆ ಹಾಗೂ ಮಾರ್ಗದರ್ಶನ ನೀಡಿದೆ.ಈ ಜಾಗೃತಿ ಅಭಿಯಾನದ ಭಾಗವಾಗಿ, ಮದ್ಯದ ಬಾಟಲಿಗಳ ಮೇಲೆ ನೀಡಲಾಗುವ ಆರೋಗ್ಯ ಎಚ್ಚರಿಕೆಯ ಮಾದರಿಯಲ್ಲೇ ಇನ್ಮುಂದೆ ಉಪ್ಪಿನ ಪ್ಯಾಕೆಟ್‌ಗಳ ಮೇಲೆಯೂ 'ಹಾನಿಕಾರಕ' ಎಂಬ ಎಚ್ಚರಿಕೆ ಸ್ಟಿಕ್ಕರ್ ಪ್ರಿಂಟ್ ಮಾಡುವುದನ್ನು ಕಡ್ಡಾಯಗೊಳಿಸಲಾಗುತ್ತಿದೆ. ಉಪ್ಪಿನ ಅತಿಯಾದ ಬಳಕೆಯಿಂದಾಗುವ ಅಪಾಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಆರೋಗ್ಯ ಇಲಾಖೆಯು ಈ ವಿಶಿಷ್ಟ ನಿಯಮ ಜಾರಿಗೆ ತರಲು ಸಿದ್ಧತೆ ನಡೆಸಿದ್ದು, ಸಂಬAಧಪಟ್ಟ ಅಧಿಕಾರಿಗಳಿಗೆ ಹಾಗೂ ಸಂಸ್ಥೆಗಳಿಗೆ ಈಗಾಗಲೇ ಅಗತ್ಯ ನಿರ್ದೇಶನಗಳನ್ನು ನೀಡಿದೆ.