LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಎಕ್ಕ' ಚಿತ್ರಕ್ಕೆ ಮುಹೂರ್ತ

ಪಿ.ಆರ್.ಕೆ  ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್, ಕೆ.ಆರ್.ಜಿ.ಸ್ಟುಡಿಯೋಸ್ ಸಹಯೋಗದಲ್ಲಿ ಮೂಡಿಬರುತ್ತಿರುವ ಯುವ ರಾಜ್ ಕುಮಾರ್ ಅವರ ಬಹು ನಿರೀಕ್ಷಿತ ಚಿತ್ರ `ಎಕ್ಕ' ಇಂದು ತನ್ನ ನಾಂದಿ ಪೂಜೆ/ಮುಹೂರ್ತವನ್ನು ಶ್ರೀ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ನೆರವೇರಿಸಿ, ಚಿತ್ರೀಕರಣವನ್ನು ಆರಂಭಿಸಿದೆ.

ವಿಜಯ್ ಕಿರಗಂದೂರ್ ಅವರ ಪತ್ನಿ ಶ್ರೀಮತಿ ಶೈಲಜಾ ವಿಜಯ್ ಕ್ಲಾಪ್ ಮಾಡುವ ಮೂಲಕ `ಎಕ್ಕ' ಚಿತ್ರಕ್ಕೆ ನಾಂದಿ ಹಾಡಲಾಯಿತು, ಮೊದಲ ಶಾಟ್ ಅನ್ನು ನಟರಾಕ್ಷಸ ಡಾಲಿ ಧನಂಜಯ್ ನಿರ್ದೇಶಿಸಿದ್ದು, ನಿರ್ಮಾಪಕ ಕಾರ್ತಿಕ ಗೌಡ ಅವರ ತಾಯಿ ಶ್ರೀಮತಿ ವಿಜಯಲಕ್ಷ್ಮೀ ರಾಮಕೃಷ್ಣ ಕ್ಯಾಮೆರಾ ಬಟನ್ ಆನ್ ಮಾಡುವ ಮೂಲಕ ಚಾಲನೆ ನೀಡಿದರು.

ಕಾಶ್ಮೀರ, ಬೆಂಗಳೂರು, ಮೈಸೂರು, ದೆಹಲಿ, ಕೋಲ್ಕತ್ತಾ, ಮುಂಬೈ ಸೇರಿದಂತೆ ಹಲವಾರು ಸ್ಥಳಗಳಲ್ಲಿ `ಎಕ್ಕ' ಚಿತ್ರದ ಚಿತ್ರೀಕರಣ ನಡೆಯುವುದಾಗಿ ತಂಡ ಇಂದು ತಿಳಿಸಿದೆ.ಚಿತ್ರದ ನಿರ್ದೇಶಕ ರೋಹಿತ್ ಪದಕಿ ಮಾತನಾಡಿ, `ಎಕ್ಕ' ಒಂದು ಮೆಗಾ ಚಿತ್ರವಾಗಿದ್ದು, ಇದರ ಜವಾಬ್ದಾರಿ ಹೊತ್ತಿರುವ ಹೆಮ್ಮೆ ನನಗಿದೆ. ಚಿತ್ರದ ಎಲ್ಲ ನಿರ್ಮಾಪಕರು, ಕನ್ನಡ ಜನರು, ಯುವ ರಾಜ್ ಕುಮಾರ್ ಮತ್ತು ಅವರ ಅಭಿಮಾನಿಗಳ ಎಲ್ಲರ ನಂಬಿಕೆಯನ್ನು ಈ ಚಿತ್ರ ಉಳಿಸಲಿದೆ, ಜನರ ಮೇಲೆ ಆಳವಾದ ಭಾವನಾತ್ಮಕ ಪ್ರಭಾವ ಬೀರಲಿದೆ ಎಂದು ತಿಳಿಸಿದರು.

ಚಿತ್ರದ ನಾಯಕ ನಟ ಯುವ ರಾಜ್ ಕುಮಾರ್ ಮಾತನಾಡಿ, "ತಾಯಿ ಆಶಿರ್ವಾದದೊಂದಿಗೆ, ಅಪ್ಪು ಚಿಕ್ಕಪ್ಪನ ಆಶಿರ್ವಾದದೊಂದಿಗೆ ಇವತ್ತು "ಎಕ್ಕ" ಚಿತ್ರವನ್ನು ಆರಂಭಿಸಿದ್ದೇವೆ. ಮೂರು ಹೆಸರಾಂತ ನಿರ್ಮಾಣ ಸಂಸ್ಥೆಗಳೊಡನೆ, ರೋಹಿತ್ ಪದಕಿ ಅಂತಹ ದೊಡ್ಡ ನಿರ್ದೇಶಕರೊಡನೆ ಕೆಲಸ ಮಾಡುತ್ತಿರುವುದು ನನಗೆ ತುಂಬಾ ಖುಷಿ ಇದೆ" ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಚಿತ್ರದ ನಾಯಕಿ ಸಂಪದಾ ಮಾತನಾಡಿ, `ಎಕ್ಕ' ಚಿತ್ರದ ಆರಂಭ ಬಹಳ ಮಂಗಳಕರವಾಗಿ ನೆರವೇರಿರುವುದು ನನಗೆ ತುಂಬ ಸಂತೋಷವನ್ನುಂಟು ಮಾಡಿದೆ. ಚಿತ್ರೀಕರಣವನ್ನು ನಾನು ಕಾತುರವಾಗಿ ಎದುರು ನೋಡುತ್ತಿದೇನೆ ಎಂದು ತಿಳಿಸಿದರು.
ರೋಹಿತ್ ಪದಕಿ ನಿರ್ದೇಶನದ `ಎಕ್ಕ' ಒಬ್ಬ ಯುವಕನ ಕಥೆಯನ್ನು ಹೇಳುತ್ತದೆ.

ಒಬ್ಬ ಮನುಷ್ಯನು ಭೂಗತ ಲೋಕಕ್ಕೆ ತುತ್ತಾದಾಗ, ಆತನಿಗೆ ಆಗುವ ಅನುಭವಗಳನ್ನು ಹೇಳುವ ಕಥೆಯೇ `ಎಕ್ಕ'
`ಎಕ್ಕ' ಚಿತ್ರದಲ್ಲಿ ಯುವ ರಾಜ್ ಕುಮಾರ್, ಸಂಪದಾ, ಅತ್ತುಲ್ ಕುಲಕರ್ಣೀ, ಶ್ರುತಿ ಕೃಷ್ಣ, ರಾಹುಲ್ ದೇವ್ ಶೆಟ್ಟಿ ಮುಂತಾದವರು ನಟಿಸಲಿದ್ದು, ಚಿತ್ರಿಕಥೆಯನ್ನು ರೋಹಿತ್ ಪದಕಿ ಮತ್ತು ವಿಕ್ರಮ್ ಹತ್ವಾರ್ ರಚಿಸಿರುತ್ತಾರೆ. ಚಿತ್ರಕ್ಕೆ ಸಂಗೀತವನ್ನು ಚರಣ್ ರಾಜ್ ಸಂಯೋಜಿಸಲಿದ್ದು, ಹಾಡುಗಳಿಗೆ ಸಾಹಿತ್ಯವನ್ನು ವಿ.ನಾಗೇಂದ್ರ ಪ್ರಸಾದ್, ನಾಗಾರ್ಜುನ ಶರ್ಮ, ನಟರಾಕ್ಷಸ ಡಾಲಿ ಧನಂಜಯ, ರೋಹಿತ್ ಪದಕಿ ರಚಿಸಲಿದ್ದಾರೆ.

ಸತ್ಯ ಹೆಗಡೆ ಮುಖ್ಯ ಛಾಯಾಗ್ರಾಹಕರಾಗಿದ್ದು, ದೀಪು ಎಸ್ ಕುಮಾರ್ ಸಂಕಲನಕಾರರಾಗಲಿದ್ದಾರೆ ಮತ್ತು ವಿಶ್ವಾಸ್ ಕಶ್ಯಪ್                 ಪ್ರೊ ಡಕ್ಷನ್ ವಿನ್ಯಾಸವನ್ನು ಮಾಡಲಿದ್ದಾರೆ. ಚಿತ್ರದ ಫೈಟ್ಸ್ ಗಳನ್ನು ಅರ್ಜುನ್ ರಾಜ್ ಮತ್ತು ಚೇತನ್ ಡಿಸೌಜಾಷ್ ನಿರ್ದೇಶಿಸಲಿದ್ದಾರೆ.

ಈ ಚಿತ್ರವನ್ನು ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಪಿ.ಆರ್.ಕೆ ‌ ಪ್ರೊಡಕ್ಷನ್ಸ್ ಲಾಂಛನದಡಿಯಲ್ಲಿ, ಜಯಣ್ಣ ಮತ್ತು ಭೋಗೇಂದ್ರ ಜಯಣ್ಣ ಫಿಲಂಸ್ ಲಾಂಛನದಡಿಯಲ್ಲಿ ಹಾಗೂ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ಕೆ.ಆರ್.ಜಿ.ಸ್ಟುಡಿಯೋಸ್ ಲಾಂಛನದಡಿಯಲ್ಲಿ ನಿರ್ಮಿಸಲ್ಲಿದ್ದಾರೆ. `ಎಕ್ಕ' ಚಿತ್ರವು ಜೂನ್ 6 , 2025 ರಂದು ತೆರೆ ಕಾಣುವುದಾಗಿ ಚಿತ್ರತಂಡ ತಿಳಿಸಿದೆ. ಈ ಚಿತ್ರವು ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಲಿದೆ ಎಂಬ ಆಶ್ವಾಸನೆಯನ್ನು ಚಿತ್ರ ತಂಡ ನೀಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು