LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಚ್‍ಎಂಪಿವಿ ಪರೀಕ್ಷೆ ಕಡ್ಡಾಯವಲ್ಲ

ಬೆಂಗಳೂರು: ಕರ್ನಾಟಕದಲ್ಲಿ ಎಚ್‍ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದು ಆರೋಗ್ಯ ಇಲಾಖೆ ಆಸ್ಪತ್ರೆಗೆ ಹೋಗುವವರಿಗೆ ಸೂಚನೆ ನೀಡಿದೆ. ಜತೆಗೆ, ಖಾಸಗಿ ಲ್ಯಾಬ್ ಹಾಗೂ ಖಾಸಗಿ ಆಸ್ಪತ್ರೆಗಳ ಮೇಲೆ ಇಲಾಖೆ ನಿಗಾ ಇಡುವುದಾಗಿ ತಿಳಿಸಿದೆ. ಎಚ್‍ಎಂಪಿವಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳಿ ಎನ್ನುವವರ ಮೇಲೆ ಹದ್ದಿನ ಕಣ್ಣು ಇಡಲು ನಿರ್ಧರಿಸಿದೆ. ಜ್ವರ, ಕೆಮ್ಮು ಎಂದು ಆಸ್ಪತ್ರೆಗೆ ಹೋಗುವವರು ಎಚ್‍ಎಂಪಿವಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಇಲಾಖೆ ಹೇಳಿದೆ.

ಈ ವಿಚಾರವಾಗಿ ಇಂದು ಸಂಜೆಯೊಳಗೆ ಆರೋಗ್ಯ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಲಿದೆ ಎಂದು ಮೂಲಗಳು ತಿಳಿಸಿವೆ.ಖಾಸಗಿ ಆಸ್ಪತ್ರೆಗಳಲ್ಲಿ ಎಚ್‍ಎಂಪಿವಿ ವೈರಸ್ ಟೆಸ್ಟ್‍ಗೆ 10 ಸಾವಿರ ರೂ.ನಿಂದ 12 ಸಾವಿರ ರೂ. ದರ ಇದೆ. ಹೀಗಾಗಿ ಟೆಸ್ಟಿಂಗ್ ಅಗತ್ಯ ಇಲ್ಲ ಎಂದು ಇಲಾಖೆ ಪ್ರಕಟಣೆ ಹೊರಡಿಸಲಿದೆ ಎಂದು ಮೂಲಗಳು ಹೇಳಿವೆ.

ಸಾಮಾನ್ಯವಾಗಿ ಚಳಿಗಾಲದಲ್ಲಿ ವೈರಸ್ ಕಾಣಿಸಿಕೊಳ್ಳುವುದು ಸಹಜ. ಅದಕ್ಕಾಗಿ ಸರ್ಕಾರಿ ಆಸ್ಪತ್ರೆಗಳಲ್ಲೂ ಎಚ್‍ಎಂಪಿವಿ ಟೆಸ್ಟಿಂಗ್ ಮಾಡುವುದಿಲ್ಲ. ಈ ವೈರಸ್ ಅಪಾಯಕಾರಿ ಅಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.ರಾಜ್ಯದಲ್ಲಿ ಪತ್ತೆಯಾಗಿರುವುದು ಚೀನಾದಲ್ಲಿ ಪತ್ತೆಯಾಗಿದೆ ಎನ್ನಲಾಗಿರುವ ವೈರಸ್ ಅಲ್ಲ ಎಂದು ಈಗಾಗಲೇ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆರೋಗ್ಯ ಇಲಾಖೆ ಜೊತೆ ಸಭೆ ನಡೆಸಿದ್ದು, ಜನರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು