LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಎಚ್‍ಎಂಪಿವಿ ಸರ್ಕಾರ ಗಂಭೀರವಾಗಿ ಪರಿಗಣಿಸಲಿ: ಅಶೋಕ್

ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ಶಿಶುಗಳಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ಆತಂಕ ಮನೆ ಮಾಡಿದ್ದು, ಸರ್ಕಾರ ಇದನ್ನ ಅತ್ಯಂತ ಗಂಬೀರವಾಗಿ ಪರಿಗಣಿಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಳೆದ ಐದಾರು ತಿಂಗಳುಗಳಿಂದ ನಿರಂತರವಾಗಿ ಸಂಭವಿಸುತ್ತಿರುವ ಬಾಣಂತಿ ಮಹಿಳೆಯರು ಮತ್ತು ನವಜಾತ ಶಿಶುಗಳ ಸರಣಿ ಸಾವನ್ನ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಸಿದ್ದರಾಮಯ್ಯ ಸರ್ಕಾರ HMPV ವೈರಾಣು ಸೋಂಕು ಹರಡುವುದನ್ನು ನಿಯಂತ್ರಣ ಮಾಡಲು ಸಮರ್ಥವೇ ಎಂಬ ಅನುಮಾನ ಸಹಜವಾಗಿ ಸಾರ್ವಜನಿಕರಲ್ಲಿ ಮೂಡಿದೆ ಎಂದಿದ್ದಾರೆ.

ಈ ನಿಟ್ಟಿನಲ್ಲಿ ವಿಪಕ್ಷ ನಾಯಕನಾಗಿ ಸರ್ಕಾರಕ್ಕೆ ನನ್ನ ಸಲಹೆಗಳನ್ನು ನೀಡುತ್ತೇನೆ ಎಂದಿದ್ದಾರೆ. ಕೇವಲ ಕಾಟಾಚಾರಕ್ಕೆ ಸಭೆಗಳನ್ನು ಮಾಡಿ, ಮಾರ್ಗಸೂಚಿ ಬಿಡುಗಡೆ ಮಾಡಿದರೆ ಸಾಲದು. ಸರ್ಕಾರ ಈ ಕೂಡಲೇ ಸಮರ್ಥ ಸಚಿವರನ್ನು ಒಳಗೊಂಡ ಟಾಸ್ಕ್ ಪೋರ್ಸ್ ರಚನೆ ಮಾಡಬೇಕು. ಸರ್ಕಾರಕ್ಕೆ ಮತ್ತು ಟಾಸ್ಕ್ ಪೋರ್ಸ್ ಗೆ ತಾಂತ್ರಿಕ ಮಾರ್ಗದರ್ಶನ ನೀಡಲು ಒಂದು ತಜ್ಞರ ವೈದ್ಯರ ಸಮಿತಿ ರಚನೆ ಮಾಡಬೇಕು. ಸಣ್ಣ ಮಕ್ಕಳು, ಹಿರಿಯ ನಾಗರಿಕರು, ರೋಗನಿರೋಧಕ ಶಕ್ತಿ ಕಡಿಮೆ ಇರುವವರು, ಈಗಾಗಲೇ ಶ್ವಾಸಕೋಶ ಸಮಸ್ಯೆಗಳಿಂದ ಬಳಲುತ್ತಿರುವವರ ಸಮೀಕ್ಷೆ ನಡೆಸಿ ಅಗತ್ಯವಿದ್ದವರಿಗೆ ಪರೀಕ್ಷೆ ಮಾಡಿಸಬೇಕು. ಅಂತಹವರು ಪಾಲಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು.

ತಾಲ್ಲೂಕು ಆಸ್ಪತ್ರೆಗಳಲ್ಲಿ, ಜಿಲ್ಲಾಸ್ಪತ್ರೆಗಳಲ್ಲಿ, ವಿಶೇಷವಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳಲ್ಲಿ, ಸೋಂಕು ತಗುಲಿದವರ ಚಿಕಿತ್ಸೆಗೆ ಅಗತ್ಯ ಇರುವ ಔಷಧಿ, ಆಕ್ಸಿಜನ್, ಐಸಿಯು ಬೆಡ್ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆಗಳು ಇದೆಯೇ ಎಂದು ಜಿಲ್ಲಾ ಉಸ್ತುವಾರಿ ಸಚಿವರುಗಳು, ಆರೋಗ್ಯ ಸಚಿವರು ಆಸ್ಪತ್ರೆಗಳಿಗೆ ಖುದ್ದು ಭೇಟಿ ನೀಡಿ ಖಾತ್ರಿ ಪಡಿಸಿಕೊಳ್ಳಬೇಕು. ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಮೀಸಲಿಡಲು ಕ್ರಮ ಕೈಗೊಳ್ಳಬೇಕು. ರಾಜ್ಯಾದ್ಯಂತ ಹೆಚ್ಚುವರಿ ಆಂಬುಲೆನ್ಸ್ ಗಳ ವ್ಯವಸ್ಥೆ ಮಾಡಬೇಕು. ಶಾಲೆಗಳಲ್ಲಿ ಮಕ್ಕಳ ಮೇಲೆ ವಿಶೇಷ ನಿಗಾ ಇಡಲು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಬೇಕು.

ಸೋಂಕು ಹರಡುವಿಕೆಯ ಸ್ಥಿತಿಗತಿ ಬಗ್ಗೆ ಪಾರದರ್ಶಕ ಮಾಹಿತಿ ನೀಡಲು ಪ್ರತಿನಿತ್ಯ ಆರೋಗ್ಯ ಇಲಾಖೆ ವತಿಯಿಂದ ಅಧಿಕೃತ ಬುಲೆಟಿನ್ ಬಿಡುಗಡೆ ಮಾಡಬೇಕು. ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಯಾವುದೇ ರೀತಿಯ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಮುಂದಾಲೋಚನೆ ಮಾಡಿ ಎಲ್ಲ ರೀತಿಯಲ್ಲೂ ಸನ್ನದ್ಧವಾಗಿರಬೇಕು ಎಂದು ತಮ್ಮ ಸಲಹೆ ನೀಡಿದ್ದಾರೆ.
ಬಾಣಂತಿಯರ ಸರಣಿ ಸಾವಿನಲ್ಲಿ ಆಗುತ್ತಿರುವ ನಿರ್ಲಕ್ಷ್ಯ, ಎಡವಟ್ಟುಗಳು #HMPV ವೈರಾಣು ಸೋಂಕು ನಿಯಂತ್ರಣದಲ್ಲಿ ಆಗದಂತೆ ಎಲ್ಲ ರೀತಿಯಲ್ಲೂ ಮುನ್ನೆಚ್ಚರಿಕೆ ವಹಿಸಲು ಸಿಎಂ ಸಿದ್ದರಾಮಯ್ಯ ಅವರು ಸಚಿವರಿಗೆ ಮತ್ತು ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಇದು ಸರ್ಕಾರವನ್ನು ಆಗ್ರಹ ಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು