LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಎಚ್ಡಿಕೆಗೆ ವಿಶಾಖಪಟ್ಟಣದಲ್ಲಿ ಅದ್ದೂರಿ ಸ್ವಾಗತ

ವಿಶಾಖಪಟ್ಟಣ: ಬಹುತೇಕ ಖಾಸಗೀಕರಣದ ಹೊಸ್ತಿಲಲ್ಲಿದ್ದ ಇಲ್ಲಿನ ರಾಷ್ಟ್ರೀಯ ಉಕ್ಕು ಕಾರ್ಖಾನೆ ಅಥವಾ ವೈಜಾಗ್ ಸ್ಟೀಲ್ ಕಾರ್ಖಾನೆಗೆ ಕೇಂದ್ರ ಸರ್ಕಾರ 11,400 ಕೋಟಿ ಬೃಹತ್ ಪ್ಯಾಕೇಜ್ ಘೋಷಣೆ ಮಾಡಿದ ನಂತರ ಇಲ್ಲಿಗೆ ಆಗಮಿಸಿದ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಜನತೆ ಅದ್ದೂರಿಯಾಗಿ ಸ್ವಾಗತಿಸಿದರು.

ಇಂದು ಬೆಳಗ್ಗೆಯೇ ತಿರುಮಲದಲ್ಲಿ ಕುಟುಂಬ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿ ಅವರ ದರ್ಶನ ಪಡೆದ ನಂತರ ವಿಶಾಖಪಟ್ಟಣಕ್ಕೆ ಆಗಮಿಸಿದ ಕೇಂದ್ರ ಸಚಿವರನ್ನು ವಿಮಾನ ನಿಲ್ದಾಣದಲ್ಲಿಯೇ ಬಿಜೆಪಿ, ತೆಲುಗು ದೇಶಂ ಪಕ್ಷಗಳ ಸಂಸದರು, ಶಾಸಕರು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕುಮಾರಸ್ವಾಮಿ ಅವರೊಂದಿಗೆ ಉಕ್ಕು ಖಾತೆ ಸಹಾಯಕ ಸಚಿವ ಹಾಗೂ ಆಂಧ್ರದ ನರಸಾಪುರ ಲೋಕಸಭೆ ಕ್ಷೇತ್ರದ ಸಂಸದ ಭೂಪತಿರಾಜು ಶ್ರೀನಿವಾಸ ವರ್ಮ ಅವರು ಜತೆಯಲ್ಲಿ ಇದ್ದರು. ಅಲ್ಲದೆ, ಉಕ್ಕು ಕಾರ್ಖಾನೆಯ ಸಾವಿರಾರು ಕಾರ್ಮಿಕರು ಸಚಿವರನ್ನು ಎದುರುಗೊಂಡು ಸ್ವಾಗತಿಸಿದರಲ್ಲದೆ, ಪುಷ್ಪವೃಷ್ಟಿಗರೆದು ಅಭಿನಂದನೆ ಸಲ್ಲಿಸಿದರು.

ಸಂಸದ ಶ್ರಿಭರತ್, ವಿಶಾಖಪಟ್ಟಣ ಭಾಗದ ಸುಮಾರು ಹತ್ತು ಶಾಸಕರು ಸಚಿವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಬಳಿಕ ವಿಮಾನ ನಿಲ್ದಾಣದಿಂದ ಕಾರ್ಖನೆವರೆಗೂ ಹದಿನಾಲ್ಕು ಕಿ.ಮೀ. ದೂರ ರಸ್ತೆಯುದ್ದಕ್ಕೂ ಜನರು ಕೇಂದ್ರ ಸಚಿವರಿಗೆ ಸ್ವಾಗತ ಕೋರಿದರು. ಇಡೀ ರಸ್ತೆಯ ಇಕ್ಕೆಲಗಳಲ್ಲಿ ಸಚಿವರ ಕಟೌಟ್ ಗಳು, ಫ್ಲೆಕ್ಸ್‍ಗಳು ತಲೆ ಎತ್ತಿದ್ದವು.ವಿಶೇಷವಾಗಿ ಗಾಜುವಾಕ ಸರ್ಕಲ್ ನಲ್ಲಿ ಕುಮಾರಸ್ವಾಮಿ ಅವರ ಬೃಹತ್ ಕಟೌಟ್ ಗೆ ಕ್ಷೀರಾಭಿಷೇಕ ಮಾಡಿ ಸಂಭ್ರಮಿಸಿದ ಕಾರ್ಖಾನೆ ಕಾರ್ಮಿಕರು, ವಿಶಾಖ ಉಕ್ಕು ಆಂಧ್ರುಲ ಹಕ್ಕು (ವಿಶಾಖ ಉಕ್ಕು ಆಂಧ್ರರ ಹಕ್ಕು) ನಿನಾದವನ್ನು ನಿಜ ಮಾಡಿದ ಕುಮಾರಸ್ವಾಮಿ ಅವರಿಗೆ ಧನ್ಯವಾದಗಳು* ಎನ್ನುವ ಬೃಹತ್ ಬರಹಗಳು ರಾರಾಜಿಸುತ್ತಿದ್ದವು.

ಗಾಜುವಾಕ ಸರ್ಕಲ್ ನಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಕಾರ್ಮಿಕ ಸಂಘಟನೆಗಳ ಸದಸ್ಯರು ಸಚಿವ ಕುಮಾರಸ್ವಾಮಿ ಅವರಿಗೆ ಬೃಹತ್ ಹಾರ ಹಾಕುವ ತಮ್ಮ ಕೃತಜ್ಞತೆ ಸಲ್ಲಿಸಿದರಲ್ಲದೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕುಮಾರಸ್ವಾಮಿ ಅವರ ಘೋಷಣೆಗಳನ್ನು ಕೂಗಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕುಮಾರಸ್ವಾಮಿ ಅವರು; 2030ರ ವೇಳೆಗೆ ಭಾರತದಲ್ಲಿ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಗುರಿ, ದೃಢ ಸಂಕಲ್ಪ ಪ್ರಧಾನಿಗಳಾದ ನರೇಂದ್ರ ಮೋದಿ ಅವರದ್ದಾಗಿದ್ದು, ಪ್ರಧಾನಿಗಳ ಆಶಯದಂತೆ ಆಂಧ್ರ ಪ್ರದೇಶದ ವೈಜಾಗ್ ಸ್ಟೀಲ್ ಪುನಶ್ಚೇತನಕ್ಕೆ 11,400 ಕೋಟಿಗಳ ಬೃಹತ್ ಪ್ಯಾಕೇಜ್ ಘೋಷಿಸಲಾಗಿದೆ.

ಇದು ಮೋದಿ ಅವರ ಸರಕಾರ ಕೈಗೊಂಡ ಐತಿಹಾಸಿಕ ನಿರ್ಧಾರವಾಗಿದೆ ಎಂದರು.ಪ್ಯಾಕೇಜ್ ಘೋಷಣೆ ನಂತರ ಬೆಳಗ್ಗೆ ನಾನು ಕುಟುಂಬ ಸಮೇತ ತಿರುಪತಿಗೆ ತೆರಳಿ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದು ಇಲ್ಲಿಗೆ ಬಂದಿದ್ದೇನೆ. ದೇವರ ಅನುಗ್ರಹ ಹಾಗೂ ಮೋದಿ ಅವರ ಧೃಢ ನಿರ್ಧಾರದಿಂದ ಕಾರ್ಖಾನೆಗೆ ಮರು ಜೀವ ಸಿಗುತ್ತಿದೆ ಎಂದು ಅವರು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು