LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮಹಿಳಾ ಶೌಚಾಲಯಕ್ಕೆ ಮೊಬೈಲ್ ಇರಿಸಿದ್ದವನ ಬಂಧನ

ಬೆಂಗಳೂರು: ಆಸ್ಪತ್ರೆಯ ನೆಲಮಹಡಿ ಮಹಿಳಾ ಶೌಚಾಲಯದ ಗೋಡೆ ಮೇಲೆ ರಹಸ್ಯವಾಗಿ ಮೊಬೈಲ್ ಇರಿಸಿ ಕ್ಯಾಮೆರಾ ಆನ್ ಮಾಡಿ ಮಹಿಳೆಯ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಕಾಮುಕನನ್ನು ತಿಲಕನಗರ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಮೂಲದ ಯಲ್ಲಾಲಿಂಗ (೨೮) ಬಂಧಿತ ಆರೋಪಿಯಾಗಿದ್ದಾನೆ, ಕಳೆದ ಅ.೩೧ರಂದು ಬನ್ನೇರುಘಟ್ಟ ಮುಖ್ಯರಸ್ತೆಯ ಜಯದೇವ ಆಸ್ಪತ್ರೆಯ ನೆಲಮಹಡಿಯ ಮಹಿಳಾ ಶೌಚಾಲಯದ ಗೋಡೆ ಮೇಲೆ ರಹಸ್ಯವಾಗಿ ಮೊಬೈಲ್ ಇರಿಸಿ ಕ್ಯಾಮೆರಾ ಆನ್ ಮಾಡಿ ಮಹಿಳೆಯ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ.
ಶೌಚಾಲಯಕ್ಕೆ ಬಂದಿದ್ದ ೩೫ ವರ್ಷದ ಮಹಿಳಾ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಯದೇವ ಆಸ್ಪತ್ರೆಯಲ್ಲಿ ವಾರ್ಡ್ ಹೆಲ್ಪರ್ ಆಗಿ ಕೆಲಸ ಮಾಡುತ್ತಿರುವ ಮಹಿಳೆ ಅ.೩೧ರಂದು ಬೆಳಗ್ಗೆ ಕೆಲಸಕ್ಕೆ ಹಾಜರಾಗಿದ್ದರು. ಬಳಿಕ ಆಸ್ಪತ್ರೆಯ ನೆಲಮಹಡಿಯಲ್ಲಿನ ಶೌಚಾಲಯಕ್ಕೆ ತೆರಳಿದ್ದು, ವಾಪಾಸ್ ಬರುವಾಗ ಶೌಚಾಲಯದ ಗೋಡೆ ಮೇಲೆ ಮೊಬೈಲ್ ಕಾಣಿಸಿದೆ.

ಆ ಮೊಬೈಲ್ ಎತ್ತಿಕೊಂಡು ಪರಿಶೀಲಿಸಿದಾಗ ಆ ಮಹಿಳೆಯ ವಿಡಿಯೋ ಸೆರೆಯಾಗಿರುವುದು ಕಂಡು ಬಂದಿದೆ. ಬಳಿಕ ಆ ಮೊಬೈಲ್ ತೆಗೆದುಕೊಂಡು ಹೊರಗೆ ಬಂದಾಗ, ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಯಲ್ಲಾಲಿಂಗ ಓಡಿ ಬಂದು, ನನ್ನ ಮೊಬೈಲ್ ಕೊಡು ಅಕ್ಕ ಎಂದು ಕೇಳಿದ್ದಾನೆ. ಈ ವೇಳೆ ಮಹಿಳೆ ಮೊಬೈಲ್ ಕೊಡುವುದಿಲ್ಲ ಎಂದು ಜೋರಾಗಿ ಕಿರುಚಿದ್ದಾರೆ. ಬಳಿಕ ಅಲ್ಲಿದ್ದ ಜನರು ಓಡಿ ಬಂದು ಯಲ್ಲಾಲಿಂಗನನ್ನು ಹಿಡಿದುಕೊಂಡು ಧರ್ಮದೇಟು ನೀಡಿದ್ದಾರೆ.
ಬಳಿಕ ಪೊಲೀಸರನ್ನು ಕರೆಸಿ ಆತನನ್ನು ವಶಕ್ಕೆ ನೀಡಿದ್ದಾರೆ. ಈ ಸಂಬಂಧ ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿ ಯಲ್ಲಾಲಿಂಗ ಕಳೆದ ಆರು ತಿಂಗಳ ಹಿಂದೆಯಷ್ಟೇ ಗುತ್ತಿಗೆ ಆಧಾರದ ಮೇಲೆ ಜಯದೇವ ಆಸ್ಪತ್ರೆಗೆ ವಾರ್ಡ್ ಹೆಲ್ಪರ್ ಕೆಲಸಕ್ಕೆ ಸೇರಿದ್ದ. ಆತನ ಮೊಬೈಲ್‌ನ್ನು ಜಪ್ತಿ ಮಾಡಿ ಪರಿಶೀಲನೆ ನಡೆಸಿದಾಗ ಒಂದು ಅಶ್ಲೀಲ ವಿಡಿಯೋ ಪತ್ತೆಯಾಗಿದೆ. ಪೊಲೀಸರು ಆತನ ಮೊಬೈಲ್‌ನನ್ನು ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ಕ್ಕೆ ಕಳುಹಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು