LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಎಸ್‌ಎಂ ಕೃಷ್ಣ ಅವರು ನನ್ನನ್ನುಮಗನ ರೀತಿ ನೋಡುತ್ತಿದ್ದರು, ರಾಜಕಾರಣದ ಮೊದಲು ಗುರು, :  ಡಿಕೆಶಿ ಕಣ್ಣೀರು

ಬೆಳಗಾವಿ: ಎಸ್‌ಎಂ ಕೃಷ್ಣ ಅವರು ನನ್ನನ್ನು ಮಗನ ರೀತಿ ನೋಡುತ್ತಿದ್ದರು. ರಾಜಕಾರಣದಲ್ಲಿ ಬೆಳೆಯಲು ಮಾರ್ಗದರ್ಶನ ನೀಡಿದವರು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಬೇರೆಯವರಿಗೂ ನನಗೂ ಬಹಳ ವ್ಯತ್ಯಾಸವಿದೆ. ನಾನು ಅವರನ್ನು ಬಹಳ ಹತ್ತಿರದಿಂದ ನೋಡಿದ್ದೇನೆ ಎಂದು ಹೇಳಿ ಕಣ್ಣೀರು ಹಾಕಿದರು.

ಇವತ್ತು ಬೆಳಗ್ಗೆ 3 ಗಂಟೆಗೆ ಪುತ್ರಿ ಕರೆ ಮಾಡಿ ವಿಚಾರ ತಿಳಿಸಿದಳು. ನಮ್ಮ ಕುಟುಂಬಕ್ಕೆ ಇದು ದೊಡ್ಡ ಆಘಾತ. ನಾನು ಅವರ ಕುಟಂಬದ ಒಬ್ಬ ಸದಸ್ಯ. ರಾಜಕಾರಣದಲ್ಲಿ ನಾನು ಬೆಳೆದಿದ್ದು, ಅವರು ನನ್ನನ್ನು ಬೆಳೆಸಿದ್ದು ದೊಡ್ಡ ಇತಿಹಾಸವಿದೆ ಎಂದರು.

ನನ್ನ ರಾಜಕಾರಣದ ಮೊದಲ ಗುರು. ಅವರ ಮತ್ತು ನನ್ನ ಒಡನಾಟದ ಇತಿಹಾಸವನ್ನು ಈಗ ನಾನು ಹೇಳುವುದಿಲ್ಲ. ನಾನು ಏನಾದ್ರೂ ತಪ್ಪು ಮಾಡಿದರೆ ಬಹಳ ನೊಂದು ಮಾತನಾಡುತ್ತಿದ್ದರು ಎಂದು ತಿಳಿಸಿದರು.

ಇಂದು ಸಂಜೆ ಕೆಪಿಸಿಸಿ ಕಚೇರಿಯಲ್ಲಿರುವ (KPCC Office) ಭಾರತ್‌ ಜೋಡೋ ಸಭಾಂಗಣದಲ್ಲಿ ಪಕ್ಷದ ವತಿಯಿಂದ ಕೃಷ್ಣ ಅವರಿಗೆ ನಮನ ಸಲ್ಲಿಸಲಾಗುವುದು. ಮೆಟ್ರೋ, ವಿಮಾನ ನಿಲ್ದಾಣವನ್ನು ತಂದವರು ಅವರು. ಅವರ ಬಗ್ಗೆ ಅಟಲ್‌ ಬಿಹಾರಿ ವಾಜಪೇಯಿ ಹೇಳಿದ ಮೆಚ್ಚುಗೆ ಮಾತೇ ಸಾಕು ಎಂದು ಕಂಬನಿ ಮಿಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು