LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mandya

ಏಕಲವ್ಯ ರಾಜ್ಯ ಪ್ರಶಸ್ತಿಗೆ: ಸತೀಶ್ ಜವರೇಗೌಡ ಆಯ್ಕೆ

ಮಂಡ್ಯ: ಜಿಲ್ಲಾ ಯುವ ಬರಹಗಾರರ ಬಳಗದ ಸಂಸ್ಥಾಪಕ ಅಧ್ಯಕ್ಷ ಹಾಗೂ ಸಾಹಿತಿ ಮಂಗಲ ಟಿ. ಸತೀಶ್ ಜವರೇಗೌಡ (ಸಜಗೌ) ಅವರು ಸಾಂಸ್ಕೃತಿಕ ಸಂಘಟನೆ, ಸಾಹಿತ್ಯ ಪರಿಚಾರಿಕೆ ಮತ್ತು ಕೃಷಿಯಲ್ಲಿ ಮಾಡಿರುವ ಸಾಧನೆಗಾಗಿ ರಾಜ್ಯ ಮಟ್ಟದ 'ಏಕಲವ್ಯ ಪ್ರಶಸ್ತಿ'ಗೆ ಆಯ್ಕೆ ಆಗಿದ್ದಾರೆ ಎಂದು ಏಕಲವ್ಯ ಸಾಂಸ್ಕೃತಿಕ ಕಲಾ ಸಂಘದ ಅಧ್ಯಕ್ಷ ಎನ್. ಚೇತನ್ ರಾಜ್ ತಿಳಿಸಿದ್ದಾರೆ.ದಾವಣಗೆರೆ ಜಿಲ್ಲೆಯ ಏಕಲವ್ಯ ಸಾಂಸ್ಕೃತಿಕ ಕಲಾ ಸಂಘ ಹಾಗೂ ನವಜ್ಯೋತಿ ಸಾಂಸ್ಕೃತಿಕ ಸೇವಾ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಈ ಏಕಲವ್ಯ ಪ್ರಶಸ್ತಿ ನೀಡಲಾಗುತ್ತಿದ್ದು,

ಸತೀಶ್ ಜವರೇಗೌಡ ಅವರು ಯುವ ಬರಹಗಾರರ ಬಳಗದ ಸಂಸ್ಥಾಪಕ ಅಧ್ಯಕ್ಷರಾಗಿ ಎರಡು ದಶಕಗಳ ಕಾಲ ಸಂಘಟನೆಯ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸೇವೆ ಸೃಜನಶೀಲ ಕವಿಯಾಗಿ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಮೌಲ್ಯಯುತವಾದ ಗಮನಾರ್ಹ ಸಾಧನೆಯನ್ನು ಪರಿಗಣಿಸಿ ರಾಜ್ಯ ಮಟ್ಟದ ಈ 'ಏಕಲವ್ಯ ಪ್ರಶಸ್ತಿ'ಯನ್ನು ನೀಡಲಾಗುತ್ತಿದೆ.

ಡಿ. 5 ರಂದು ದಾವಣಗೆರೆ ಜಿಲ್ಲೆಯ ಹರಪನಹಳ್ಳಿಯ ಬಸಮ್ಮ ಕಲಾ ಮಂದಿರದಲ್ಲಿ ಎಂ.ಪಿ. ಪ್ರಕಾಶ್ ಸಮಾಜಮುಖಿ ಟ್ರಸ್ಟ್ ಅಧ್ಯಕ್ಷರಾದ ಎಂ.ಪಿ. ವೀಣಾ ಮಹಾಂತೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಂಶೋಧನಾಧಿಕಾರಿ ಡಾ.ಎಸ್.ಜಿ. ಬಸವರಾಜ್ ಹಾಗೂ ಬಂಜಾರ ಭಾಷಾ ಮತ್ತು ಸಂಸ್ಕೃತಿ ಅಕಾಡೆಮಿಯ ಸದಸ್ಯರಾದ ಡಾ. ಉತ್ತಮ್ ಮೂಡ್ ಅವರು ಸತೀಶ್ ಜವರೇಗೌಡ ಅವರಿಗೆ ಪ್ರಶಸ್ತಿ ಪ್ರದಾನ ಮಾಡುವರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು