LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಏರೋಸ್ಪೇಸ್‍ಗೆ ಪ್ರೋತ್ಸಾಹ ಏರೋ ಶೋ ಉದ್ಘಾಟನೆಯಲ್ಲಿ ಡಿಸಿಎಂ ಡಿಕೆಶಿ ಅಭಿಮತ

ಬೆಂಗಳೂರು: ``ಬೆಂಗಳೂರು, ಏರೋಸ್ಪೇಸ್ ಉದ್ಯಮದಲ್ಲಿ ಅತ್ಯುತ್ತಮ ಪ್ರತಿಭೆಗಳನ್ನು ಹೊಂದಿದೆ. ಇದು ವಿಮಾನ ಮತ್ತು ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ಸೂಕ್ತ ಸ್ಥಳವಾಗಿದೆ. ತಯಾರಕರಿಗೆ ಪ್ರೋತ್ಸಾಹ ನೀಡುವ ಮೂಲಕ, ಪ್ರತಿಭಾ ಪಲಾಯನವನ್ನು ತಡೆದು ನಮ್ಮ ದೇಶದ ಪ್ರತಿಭೆಗಳನ್ನು ಭಾರತದೊಳಗೆ ಉಳಿಸಿಕೊಳ್ಳಬಹುದು'' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.

ಬೆಂಗಳೂರು ಏರ್ ಶೋ 2025 ರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ``ರಕ್ಷಣಾ ಸಚಿವರು ಕರ್ನಾಟಕದಲ್ಲಿ ಏರೋಸ್ಪೇಸ್ ಉದ್ಯಮವನ್ನು ಸ್ಥಾಪಿಸಲು ಹಾಗೂ ವಿಮಾನ ಮತ್ತು ಹೆಲಿಕಾಪ್ಟರ್‍ಗಳ ತಯಾರಕರನ್ನು ಹೆಚ್ಚು, ಹೆಚ್ಚು ಬೆಂಗಳೂರಿನ ಕಡೆಗೆ ಗಮನ ಹರಿಸುವಂತೆ  ಪ್ರೋತ್ಸಾಹ ನೀಡಬೇಕಾಗಿ ಮನವಿ ಮಾಡಿದರು."ಕರ್ನಾಟಕ ಭಾರತದ ತಾಂತ್ರಿಕ ಮತ್ತು ಕೈಗಾರಿಕಾ ಪ್ರಗತಿಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ವಿಶ್ವ ದರ್ಜೆಯ ಸಂಶೋಧನಾ ಸಂಸ್ಥೆಗಳು, ಅತ್ಯಾಧುನಿಕ ಏರೋಸ್ಪೇಸ್ ಕಂಪನಿಗಳನ್ನು ಹೊಂದಿರುವ ಕೌಶಲ್ಯಪೂರ್ಣ ಕಾರ್ಯಪಡೆಯೇ ನಮ್ಮಲ್ಲಿದೆ''. ``ಇತ್ತೀಚಿನ ವರ್ಷಗಳಲ್ಲಿ, ಕರ್ನಾಟಕವು ದೇಶದ ಒಟ್ಟು ದೇಶೀಯ ಉತ್ಪನ್ನ, ಕೈಗಾರಿಕಾ ಬೆಳವಣಿಗೆ ಮತ್ತು ಹೂಡಿಕೆಯ ಒಳಹರಿವು ಸೇರಿದಂತೆ ಪ್ರಮುಖ ಆರ್ಥಿಕ ಕ್ಷೇತ್ರಗಳಲ್ಲಿ ಅಗಾಧ ಬೆಳವಣಿಗೆ ಕಂಡಿದೆ'' ಎಂದರು.

``ಸಂಶೋಧನೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಉದ್ದಿಮೆಗೆ  ಪ್ರೋತ್ಸಾಹಿಸುವ ಭವಿಷ್ಯದ ದೃಷ್ಟಿಯಿಂದ ಕೈಗಾರಿಕಾ ನೀತಿಯನ್ನು ಪೋಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ''. "ಆಕಾಶಕ್ಕೆ ಮಿತಿಯಿಲ್ಲ ಎಂಬುದನ್ನು ಈ ಏರ್ ಶೋ ಮೂಲಕ ನಾವು ಕಂಡುಕೊಳ್ಳಬಹುದು. ಬೆಂಗಳೂರು ಏರ್ ಶೋ ನಾಗರಿಕ ಮತ್ತು ಮಿಲಿಟರಿ ವಾಯುಯಾನ ಎರಡರಲ್ಲೂ ಭಾರತದ ಪ್ರಗತಿಯನ್ನು ಎತ್ತಿ ತೋರಿಸುವ ದೊಡ್ಡ ಕಾರ್ಯಕ್ರಮ'' ಎಂದು ತಿಳಿಸಿದರು.

``ಏರೋ ಇಂಡಿಯಾ ಕೇವಲ ಪ್ರದರ್ಶನವಲ್ಲ. ಇದು ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಭಾರತದ ಸಾಮಥ್ರ್ಯ ಬೆಳೆಯುತ್ತಿರುವುದಕ್ಕೆ ಸಾಕ್ಷಿ ಮತ್ತು ಅಂತರರಾಷ್ಟ್ರೀಯ ಪಾಲುದಾರಿಕೆಗಳನ್ನು ಬೆಳೆಸುವ ವೇದಿಕೆ'' ಎಂದರು.``ಬೆಂಗಳೂರು ಭಾರತದ ಏರೋಸ್ಪೇಸ್ ರಾಜಧಾನಿ. ದೇಶದ ಏರೋಸ್ಪೇಸ್ ಉತ್ಪಾದನೆ ಮತ್ತು ರಕ್ಷಣಾ ಸಂಶೋಧನೆಯ ಶೇ. 60 ಕ್ಕಿಂತ ಹೆಚ್ಚು ಕೊಡುಗೆಯನ್ನು ನಮ್ಮ ರಾಜ್ಯ ನೀಡುತ್ತಿದೆ'' ಎಂದರು.

``ಎಚ್ ಎಎಲ್, ಇಸ್ರೋ ಮತ್ತು ಬೋಯಿಂಗ್ ಇಂಡಿಯಾದಂತಹ ಪ್ರಮುಖ ಸಂಸ್ಥೆಗಳು ಭಾರತದ ರಕ್ಷಣಾ ಮತ್ತು ಬಾಹ್ಯಾಕಾಶ ಸಾಮಥ್ರ್ಯಗಳಿಗೆ ಸಾಕಷ್ಟು ಕೊಡುಗೆಗಳನ್ನು ನೀಡುತ್ತಿವೆ. ಬೆಂಗಳೂರಿನ ಏರೋಸ್ಪೇಸ್ ವಲಯದಲ್ಲಿ 1,50,000 ಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಿದ್ದಾರೆ, ಇದು ನಗರವನ್ನು ವಾಯುಯಾನ ಮತ್ತು ರಕ್ಷಣಾ ತಂತ್ರಜ್ಞಾನದಲ್ಲಿ ಜಗತ್ತಿನಲ್ಲಿಯೇ ಸಾಕಷ್ಟು ಹೆಸರು ಮಾಡಿದೆ'' ಎಂದರು.

``ವಿದೇಶಿ ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಬೆಂಗಳೂರು ಜಾಗತಿಕ ಏರೋಸ್ಪೇಸ್ ನಗರಗಳಲ್ಲಿ ಮೂರನೇ ಸ್ಥಾನವನ್ನು ಪಡೆದಿದೆ. ಕರ್ನಾಟಕ ಸರ್ಕಾರವು ಕರ್ನಾಟಕದಾದ್ಯಂತ ಅಂದರೆ ಬೆಂಗಳೂರು, ಬೆಳಗಾವಿ, ಮೈಸೂರು, ತುಮಕೂರು ಮತ್ತು ಚಾಮರಾಜನಗರಗಳಲ್ಲಿ ಏರೋಸ್ಪೇಸ್ ಮತ್ತು ರಕ್ಷಣಾ ಕೇಂದ್ರಗಳನ್ನು ಅಭಿವೃದ್ಧಿಪಡಿಸುತ್ತಿದೆ'' ಎಂದು ಹೇಳಿದರು.
``ವಾಣಿಜ್ಯ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಕ್ರಾಂತಿಯನ್ನೇ ಉಂಟು ಮಾಡುತ್ತಿರುವ ಡ್ರೋನ್ ತಂತ್ರಜ್ಞಾನ ಮತ್ತು ಮಾನವರಹಿತ ವೈಮಾನಿಕ ತಂತ್ರಜ್ಞಾನದ ರುವಾರಿಯಾಗಿ ಬೆಂಗಳೂರು ಬೆಳೆಯುತ್ತಿದೆ'' ಎಂದರು.

``ಬೆಂಗಳೂರು ಭಾರತದಲ್ಲಿಯೇ ಅತಿ ಹೆಚ್ಚು ಸಾಫ್ಟ್‍ವೇರ್ ಕಂಪನಿಗಳನ್ನು ಹೊಂದಿದೆ. ಅದಕ್ಕೆ ಇದನ್ನು ಭಾರತದ ಸಿಲಿಕಾನ್ ಸಿಟಿ ಎಂದು ಕರೆಯುತ್ತಾರೆ. ತಂತ್ರಜ್ಞಾನ ಮತ್ತು ಏರೋಸ್ಪೇಸ್ ವಲಯವನ್ನು ಮುನ್ನಡೆಸುವ ನಗರವಾಗಿ ಬೆಂಗಳೂರು ಬೆಳೆದಿದೆ'' ಎಂದು ಹೇಳಿದರು.``ರಾಜಧಾನಿಯಲ್ಲಿ 21 ಎಂಜಿನಿಯರಿಂಗ್ ಕಾಲೇಜುಗಳಿವೆ. ವಿಶ್ವದ ಯಾವುದೇ ನಗರಗಳಿಗೆ ಹೋಲಿಸಿದರೆ ನಾವೇ ಮೊದಲ ಸ್ಥಾನದಲ್ಲಿ ನಿಲ್ಲುತ್ತೇವೆ. ಬೆಂಗಳೂರಿನ ವಿಶಿಷ್ಟ ಪರಿಸರವು ಭಾರತ ಮತ್ತು ಪ್ರಪಂಚದಾದ್ಯಂತದ ಅತ್ಯುತ್ತಮ ಪ್ರತಿಭೆಗಳನ್ನು ಆಕರ್ಷಿಸುತ್ತಿದೆ. ಬೆಂಗಳೂರು ನಿಮ್ಮ ಪ್ರತಿಭೆಯನ್ನು ಬಳಸಿಕೊಳ್ಳುವ, ಬೆಲೆಸುವ, ಕನಸುಗಳನ್ನು ನನಸು ಮಾಡುವ ಸ್ಥಳವಾಗಿದೆ'' ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು