ಟೋಕಿಯೊ: ಏಷ್ಯನ್ ಗೇಮ್ಸ್ನಲ್ಲಿ ಭಾರತಕ್ಕೆ ಮೊದಲ ಚಿನ್ನ ಒಲಿದುಬಂದಿದೆ. ಮಹಿಳಾ ಕ್ರಿಕೆಟ್ ತಂಡ ಬಂಗಾರದ ಪದಕ ಗೆದ್ದಿದೆ.
2026ರ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕವನ್ನು ತಂದುಕೊಡುವಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ತಂಡ ಯಶಸ್ವಿಯಾಗಿದೆ. ಫೈನಲ್ ಪಂದ್ಯದಲ್ಲಿ ಶ್ರೀಲಂಕಾವನ್ನು 147 ರನ್‌ಗಳ ಅಂತರದಿಂದ ಮಣಿಸಿ ಪದಕ್ಕೆ ಮುತ್ತಿಟ್ಟಿದೆ. ಇದನ್ನೂ ಓದಿ: ಭಾರತಕ್ಕೆ 2 ರನ್ ರೋಚಕ ಜಯ 16 ರನ್ ಹೊಡೆದ ಅಯ್ಯರ್‌ಗೆ ಪಂದ್ಯಶ್ರೇಷ್ಠಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತವು 3 ವಿಕೆಟ್ ನಷ್ಟಕ್ಕೆ 216 ದಾಖಲೆಯ ಮೊತ್ತವನ್ನು ಕಲೆಹಾಕಿತು. ಇದರಲ್ಲಿ ಶೆಫಾಲಿ ವರ್ಮಾ 48 ರನ್, ಸ್ಮöÈತಿ ಮಂಧನಾ 45 ಎಸೆತಗಳಲ್ಲಿ 79 ರನ್ ಗಳಿಸಿದರೆ, ರಿಚಾ ಘೋಷ್ 22 ಎಸೆತಗಳಲ್ಲಿ ಅಜೇಯ 49 ರನ್ ಗಳಿಸಿದರು. ಮಂಧನಾ ಅವರ ಇನ್ನಿಂಗ್ಸ್ ಐದು ಬೌಂಡರಿ ಮತ್ತು ಏಳು ಸಿಕ್ಸರ್‌ಗಳನ್ನು ಒಳಗೊಂಡಿದ್ದರೆ, ರಿಚಾ ಆರು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳನ್ನು ಬಾರಿಸಿದರು. 217 ರನ್ ಗುರಿ ಬೆನ್ನತ್ತಿದ ಶ್ರೀಲಂಕಾ ನಿರಾಸೆ ಅನುಭವಿಸಿತು. ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿದ ಶ್ರೀಲಂಕಾ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಚಮರಿ ಅಥಪತ್ತು 29, ಕವಿಶಾ ದಿಲ್ಹಾರಿ 11, ಕೌಶಿನಿ ನುತ್ಯಂಗನ 14 ರನ್ ಗಳಿಸಿದ್ದು ಬಿಟ್ಟರೆ, ಉಳಿದ ಬ್ಯಾಟರ್‌ಗಳು ಒಂದAಕಿ ರನ್ ದಾಟುವಲ್ಲಿ ವಿಫಲರಾದರು.